ಬೆಂಗಳೂರು: ನಾಳೆ ಬಿಜೆಪಿ ಜನಸ್ಪಂದನಾ ಸಮಾವೇಶ ನಡೆಯಲಿದೆ. ಈಗಾಗಲೇ ಕಾರ್ಯಕ್ರಮದಲ್ಲಿ ಸಿದ್ಧತೆ ಮಾಡಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಸಾವಿರಾರು ಜನರು ಸೇರುವ ನೀರಿಕ್ಷೆ ಇದೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಸಿಎಂ ಬಸವರಾಜ ಬೊಮ್ಮಾಯಿ, ಈ ಸಮಾವೇಶಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಳೆ ಕಾರ್ಯಕ್ರಮಕ್ಕೆ ಜೆಪಿ ನಡ್ಡಾ ಬರೋದು ಇಂದು ಸಂಜೆ ಅಂತಿಮ ಆಗಲಿದೆ. ಆದರೆ ಕೇಂದ್ರ ಸಚಿವೆ ಸ್ಮೃತಿ ಇರಾನಿ ಕಾರ್ಯಕ್ರಮಕ್ಕೆ ಬರುತ್ತಾರೆ ಎಂದರು.
ವಿದ್ಯಾರ್ಥಿಗಳೇ ಗಮನಿಸಿ : ಹಳೆಯ ಪಾಸ್, ರಸೀದಿ ತೋರಿಸಿ `KSRTC’ ಬಸ್ ಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿ
ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ ಜಿಲ್ಲೆ ತುಮಕೂರು ಜಿಲ್ಲೆಯ 3-4 ತಾಲೂಕಿಗೆ ಸೀಮಿತವಾಗಿ ಸಮಾವೇಶ ಮಾಡಲಾಗುತ್ತದೆ.ಬಸವರಾಜ ಬೊಮ್ಮಾಯಿ ಸರ್ಕಾರಕ್ಕೆ ಒಂದು ವರ್ಷ ಪೂರೈಸುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಸಾಧನೆಗಳನ್ನು ಜನರಿಗೆ ತಿಳಿಸುವುದಕ್ಕಾಗಿ ಜನಸ್ಪಂದನಾ ಕಾರ್ಯಕ್ರಮ ಹಮ್ಮಿಕೊಂಡಿದೆ.ರಾಜ್ಯಮಟ್ಟದಲ್ಲಿ ಒಂದು ದೊಡ್ಡ ಸಮಾವೇಶ ಮಾಡಲು ಬಿಜೆಪಿ ಚಿಂತನೆ ನಡೆಸಿದೆ.ಇನ್ನು ಬಿಜೆಪಿ ಸರ್ಕಾರ ಅಂದುಕೊಂಡಂತೆ ಆಗಿದ್ದರೆ, ಇಷ್ಟು ಹೊತ್ತಿಗಾಗಲೇ ಈ ಕಾರ್ಯಕ್ರಮ ಮಾಡಬೇಕಿತ್ತು. ಆದರೆ ನಾನಾ ಕಾರಣಗಳಿಂದ ಮುಂದೂಡಲಾಗಿತ್ತು. ಇದೀಗ ನಾಳೆ ಜನಸ್ಪಂದನಾ ಕಾರ್ಯಕ್ರಮ ಮಾಡಲಾಗಿದೆ.