ಬೆಂಗಳೂರು: ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅವರ ವಿರುದ್ಧದ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಈ ಕುರಿತಂತೆ ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಿತು. ಎಸ್ ಐಟಿ ರಚನೆ ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿದ್ದಂತ ಅರ್ಜಿಯನ್ನು ನ್ಯಾಯಪೀಠವು ವಿಚಾರಣೆ ನಡೆಸಿತು. ಕುಮಾರಸ್ವಾಮಿ ಪರವಾಗಿ ವಕೀಲ ಉದಯ್ ಹೊಳ್ಳ ಅವರು ವಾದಿಸಿದರು.
ರಾಜ್ಯ ಸರ್ಕಾರ ಎಸ್ ಐ ಟಿ ರಚನೆ ಸಂದರ್ಭದಲ್ಲಿ ಔಪಚಾರಿಕವಾಗಿ ಯಾವುದೇ ತೆರವಾದಂತ ಅಧಿಸೂಚನೆ ಪ್ರಕಟಿಸಿಲ್ಲ ಎಂಬುದಾಗಿ ನ್ಯಾಯಪೀಠದ ಗಮನಕ್ಕೆ ತಂದರು. ವಾದ ಪ್ರತಿವಾದವನ್ನು ಆಲಿಸಿದಂತ ಹೈಕೋರ್ಟ್ ಕೇತಗಾನಹಳ್ಳಿ ಭೂ ಒತ್ತಿವರಿ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಅಲ್ಲದೇ ಎಸ್ಐಟಿ ರಚನೆಯ ಬಳಿಕ ಕುಮಾರಸ್ವಾಮಿ ನೀಡಿದ್ದಂತ ಸಮನ್ಸ್ ಅನ್ನು ತಡೆ ಹಿಡಿದಿದೆ. ಜೊತೆಗೆ ರಾಮನಗರ ಡಿಸಿ, ತಹಶೀಲ್ದಾರರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆ ಮುಂದೂಡಿದೆ.
ಜೂನ್.21ರಂದು ಬೆಂಗಳೂರಿನ ಈ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ | Power Cut
BREAKING : ವಸತಿ ಯೋಜನೆಯಲ್ಲೂ ಮುಸ್ಲಿಂರಿಗೆ ಶೇ.15 ರಷ್ಟು ಮೀಸಲಾತಿ ಹೆಚ್ಚಳಕ್ಕೆ ಮುಂದಾದ ರಾಜ್ಯ ಸರ್ಕಾರ
BREAKING : ಮೇ ತಿಂಗಳ `ಗೃಹಲಕ್ಷ್ಮಿ’ ಹಣ ಬಿಡುಗಡೆ : ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಹತ್ವದ ಮಾಹಿತಿ