ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಆರ್ಭಟ ಮುಂದುವರೆದಿದೆ. ಇಂದು ಬರೋಬ್ಬರಿ 208 ಜನರಿಗೆ ಕೋವಿಡ್ ಪಾಸಿಟಿವ್ ಎಂಬುದಾಗಿ ದೃಢಪಟ್ಟಿದೆ.
ಈ ಕುರಿತು ಆರೋಗ್ಯ ಇಲಾಖೆಯಿಂದ ಮಾಹಿತಿ ನೀಡಿದ್ದು, ಕಳೆದ 24 ಗಂಟೆಯಲ್ಲಿ 386 ಜನರನ್ನು ಕೊರೋನಾ ಸೋಂಕು ಪತ್ತೆ ಪರೀಕ್ಷೆಗೆ ಒಳಪಡಿಸಲಾಗಿದೆ. ಇವರಲ್ಲಿ 208 ಜನರಿಗೆ ಪಾಸಿಟಿವ್ ಬಂದಿದೆ ಎಂದಿದೆ.
ಇಂದು 208 ಜನರಿಗೆ ಕೋವಿಡ್ ಪಾಸಿಟಿವ್ ಬಂದ ಕಾರಣ ಸಕ್ರೀಯ ಸೋಂಕಿತರ ಸಂಖ್ಯೆ 696ಕ್ಕೆ ಏರಿಕೆಯಾಗಿದೆ. ಇವರಲ್ಲಿ 692 ಮಂದಿ ಹೋಂ ಐಸೋಲೇಷನ್, ನಾಲ್ವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇಂದು 103 ಸೋಂಕಿತರು ಗುಣಮುಖರಾಗಿದ್ದಾರೆ ಎಂದು ಮಾಹಿತಿ ನೀಡಿದೆ.
ಲೋಕಾಯುಕ್ತ ಪೊಲೀಸರಿಂದ ಸರ್ಕಾರಿ ಅಧಿಕಾರಿಗೆ ಬ್ಲಾಕ್ ಮೇಲ್ ಕೇಸ್: ಆರೋಪಿ ನಿಂಗಪ್ಪಗೆ 14 ದಿನ ನ್ಯಾಯಾಂಗ ಬಂಧನ
BIG NEWS: ಸಾಗರದಲ್ಲಿ ‘ಸದಾನಂದ ಹತ್ಯೆ’ ಪ್ರಕರಣದಲ್ಲಿ ಮೂವರ ವಿರುದ್ಧ ಕೇಸ್ ದಾಖಲು: ‘FIR’ನಲ್ಲಿ ಏನಿದೆ?