ಶಿವಮೊಗ್ಗ: ನಗರದಲ್ಲಿ ಸೆಕ್ಶನ್ 144 ಜಾರಿಯಾದ ಹಿನ್ನೆಲೆಯಲ್ಲಿ ಇಂದು ಸಂಜೆ ಕುವೆಂಪು ರಂಗಮಂದಿರದಲ್ಲಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದುಗೊಳಿಸಲಾಗಿದೆ.
ಶಿವಮೊಗ್ಗ ನಗರದಲ್ಲಿ 75ನೇ ಸ್ವಾತಂತ್ರ್ಯೋತ್ಸವ ಆಚರಣೆಯ ಸಲುವಾಗಿ ಅಮೀರ್ ಅಹ್ಮದ್ ವೃತ್ತದಲ್ಲಿ ಅಳವಡಿಸಲಾಗಿದ್ದಂತ ವಿ ಡಿ ಸಾವರ್ಕರ್ ಫ್ಲೆಕ್ಸ್ ಅನ್ನು ಕಿಡಿಗೇಡಿಗಳು ಕಿತ್ತು ಹಾಕಿದ್ದರು. ಈ ವೇಳೆ ಪೊಲೀಸರು, ಕಿಡಿಗೇಡಿಗಳ ನಡುವೆ ವಾಗ್ವಾದ ಉಂಟಾಗಿದ್ದರಿಂದಾಗಿ, ಪೊಲೀಸರು ಲಘು ಲಾಠಿ ಪ್ರಹಾರ ಕೂಡ ನಡೆಸಿದ್ದರು.
BIG BREAKING NEWS: ಶಿವಮೊಗ್ಗದಲ್ಲಿ ಮತ್ತೆ ಭುಗಿಲೆದ್ದ ‘ಸಾವರ್ಕರ್ ವಿವಾದ’: ಇಂದಿನಿಂದ ‘3 ದಿನ ನಿಷೇಧಾಜ್ಞೆ’ ಜಾರಿ
ಫ್ಲೆಕ್ಸ್ ತೆರವುಗೊಳಿಸಿದ್ದನ್ನು ಖಂಡಿಸಿ, ಹಾಕಿದ್ದ ಜಾಗದಲ್ಲಿಯೇ ಹಾಕುವಂತೆ ಒತ್ತಾಯಿಸಿ ಹಿಂದೂ ಸಂಘಟನೆಗಳ ಕಾರ್ಯಕರ್ತರು ಅಮೀರ್ ಅಹ್ಮದ್ ವೃತ್ತದಲ್ಲಿ ಧರಣಿ ನಡೆಸಿದರು. ಹೀಗಾಗಿ ಪರಿಸ್ಥಿತಿ ಬಿಗುವಿನಿಂದ ಕೂಡಿದ ಕಾರಣ, ನಗರದಾಧ್ಯಂತ 144 ಸೆಕ್ಷನ್ ಅಡಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ, ತಹಶೀಲ್ದಾರ್ ನಾಗರಾಜ್ ಆದೇಶಿಸಿದ್ದಾರೆ.
BIGG NEWS : ಸ್ವಾತಂತ್ರ್ಯ ಬಂದರೂ ಸಮಾನತೆ, ಸಹೋದರತೆ ಧರ್ಮಾಧಾರಿತವಾಗುತ್ತಿದೆ : ಮಾಜಿ ಸಿಎಂ ಸಿದ್ದರಾಮಯ್ಯ
ಈ ಹಿನ್ನಲೆಯಲ್ಲಿ ಇಂದು ಸಂಜೆ ಕುವೆಂಪು ರಂಗಮಂದಿರದಲ್ಲಿ ಸ್ವಾತಂತ್ರ್ಯೋತ್ಸವ ದಿನಾಚರಣೆ ನಿಮಿತ್ತ ಆಯೋಜಿಸಲಾಗಿದ್ದಂತ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ರದ್ದು ಪಡಿಸಲಾಗಿದೆ.