ಬೆಂಗಳೂರು: ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದ ಸಭೆಯಲ್ಲಿ ಜಾತಿ ಸಮೀಕ್ಷೆ, ಒಳಮೀಸಲಾತಿ, ಪಂಚಮಸಾಲಿ ಬೇಡಿಕೆ ಬಗ್ಗೆ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ. ಅದೇನು ಅಂತ ಮುಂದೆ ಓದಿ.
ಇಂದು ಮುಖ್ಯಮಂತ್ರಿಗಳ ಅಧ್ಯಕ್ಷತೆಯಲ್ಲಿ ನಡೆದ ಸಚಿವರುಗಳ ಸಭೆ ನಡೆಯಿತು. ಈ ಸಭೆಯಲ್ಲಿ ಹಲವು ವಿಚಾರಗಳ ಬಗ್ಗೆ ಚರ್ಚೆ ಮಾಡಲಾಯಿತು. ಕೆಲ ವಿಚಾರಗಳ ಬಗ್ಗೆ ತೀರ್ಮಾನಗಳನ್ನು ತೆಗೆದುಕೊಳ್ಳಲಾಯಿತು. ಆ ಪ್ರಮುಖ ಹೈಲೈಟ್ಸ್ ಈ ಕೆಳಗಿನಂತಿದೆ.
*ಮೂರೂ ಕ್ಷೇತ್ರಗಳಲ್ಲಿ ನಮ್ಮ ಪಕ್ಷದ ಅಭ್ಯರ್ಥಿಗಳು ಗೆಲ್ಲುವ ಸಾಧ್ಯತೆಗಳು ಹೆಚ್ಚಾಗಿವೆ. ಆದ್ದರಿಂದ ಸಂಪೂರ್ಣ ಶ್ರಮ ಹಾಕಿ ಚುನಾವಣೆ ನಿರ್ವಹಿಸಬೇಕು.
*ಪ್ರತೀ ಚುನಾವಣೆ ಸಂದರ್ಭದಲ್ಲೂ ಬಿಜೆಪಿಯ ಪ್ರತಿಯೊಬ್ಬರೂ ಚಾಲೆಂಜಿಗೆ ಬಿದ್ದವರಂತೆ ಸುಳ್ಳುಗಳನ್ನು ಹೇಳುತ್ತಾರೆ. ಅವರ ಸುಳ್ಳುಗಳನ್ನು ಜನರೆದುರು ಬಯಲುಗೊಳಿಸಬೇಕು.
*ಲೋಕಸಭೆ ಚುನಾವಣೆ ಮುಗಿದ ಮರುದಿನವೇ ಗ್ಯಾರಂಟಿ ಯೋಜನೆಗಳು ಸ್ಥಗಿತಗೊಳ್ಳುತ್ತವೆ ಎಂದು ಮೋದಿಯವರಿಂದ ಹಿಡಿದು ಸಿ.ಟಿ.ರವಿವರೆಗೂ ಪ್ರತಿಯೊಬ್ಬರೂ ರಾಶಿ ರಾಶಿ ಸುಳ್ಳು ಹೇಳಿದ್ದರು. ಈ ಚುನವಣೆಯಲ್ಲೂ ಹೊಸ ಹೊಸ ಸುಳ್ಳುಗಳನ್ನು ಬೆಳಗ್ಗೆ, ಮಧ್ಯಾಹ್ನ, ಸಂಜೆ, ರಾತ್ರಿ ಹೇಳುತ್ತಲೇ ಇರುತ್ತಾರೆ. ಇವುಗಳನ್ನು ಸರಿಯಾಗಿ ಕೌಂಟರ್ ಮಾಡಬೇಕು.
*ಉಪಚುನಾವಣೆ ಮುಗಿಯುವರೆಗೂ ಕೇಂದ್ರ ತನಿಖಾ ಸಂಸ್ಥೆಗಳನ್ನು ದುರುಪಯೋಗಪಡಿಸಿಕೊಳ್ಳುವ ಪ್ರಮಾಣ ಇನ್ನೂ ಹೆಚ್ಚಲಿದೆ.
*ಜಾತಿ ಸಮೀಕ್ಷೆ, ಒಳ ಮೀಸಲಾತಿ, ಪಂಚಮಸಾಲಿ ಸಮುದಾಯದ ಬೇಡಿಕೆ ಕುರಿತಂತೆ ಅಪಪ್ರಚಾರ ಮಾಡುತ್ತಾರೆ. ಈ ಎಲ್ಲಾ ವಿಚಾರಗಳ ಬಗ್ಗೆಯೂ ನಮ್ಮ ನಿಲುವು ಸ್ಪಷ್ಟವಾಗಿದ್ದು ಆಯಾ ಸಮುದಾಯದ ಮುಖಂಡರು ಮತ್ತು ಜನಪ್ರತಿನಿಧಿಗಳ ಜೊತೆ ಸಭೆ ನಡೆಸಿ ನಮ್ಮ ಬೆಂಬಲ ಇರುವುದನ್ನು ಮನದಟ್ಟು ಮಾಡಿಸಿದ್ದೇವೆ. ಆದರೂ ಬಿಜೆಪಿ ಸರಣಿ ಸುಳ್ಳುಗಳ ಮೂಲಕ ಭಯಾನಕ ಅಪಪ್ರಚಾರ ಮಾಡುತ್ತದೆ. ಸುಳ್ಳುಗಳ ಹೊರತಾಗಿ ಬಿಜೆಪಿಗೆ ಬೇರೆ ಬಂಡವಾಳ ಇಲ್ಲ.
*ಮೂರೂ ಕ್ಷೇತ್ರಗಳ ಉಪಚುನಾವಣೆ ಬಹಳ ಮಹತ್ವದ್ದಾಗಿದ್ದು ನಾವು ಮೂರನ್ನೂ ಗೆಲ್ಲಬೇಕು. ಇದಕ್ಕಾಗಿ ಪ್ರತಿಯೊಬ್ಬರೂ ತಾವು ವಹಿಸಿಕೊಂಡ ಜವಾಬ್ದಾರಿಗಳನ್ನು ಸಮರ್ಪಕವಾಗಿ ನಿರ್ವಹಿಸಬೇಕು.
Rain Alert : ರಾಜ್ಯದಲ್ಲಿ ಇನ್ನೆರಡು ದಿನ ಭಾರಿ ಮಳೆ : ಈ 13 ಜಿಲ್ಲೆಗಳಲ್ಲಿ ‘ಯಲ್ಲೋ’ ಅಲರ್ಟ್ ಘೋಷಣೆ
BREAKING : ಕೆಂಪೇಗೌಡ ಅಂತರಾಷ್ಟ್ರೀಯ ಏರ್ಪೋರ್ಟ್ ಗೆ ಬಾಂಬ್ ಬೆದರಿಕೆ ಕರೆ : ಭದ್ರತಾ ಪಡೆಗಳಿಂದ ಮುಂಜಾಗ್ರತಾ ಕ್ರಮ