ಬೆಳಗಾವಿ: ನೇಕಾರರಿಗೆ 2 ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ, ಸಹಾಯಧನ ಶೇ.50 ರಷ್ಟಕ್ಕೆ ಹೆಚ್ಚಳದ ಬೆನ್ನಲೇ ಸಿಎಂ ಬಸವರಾಜ ಬೊಮ್ಮಾಯಿಯವರು ಮತ್ತೊಂದು ಸಿಹಿ ಸುದ್ದಿಯನ್ನು ನೀಡಿದ್ದಾರೆ.
ಹೌದು, ತಮಿಳುನಾಡು ರೀತಿ ಉಚಿತ ವಿದ್ಯುತ್ ನೀಡುವುದಾಗಿ ಘೋಷಣೆಯನ್ನು ಸಿಎಂ ಬಸವರಾಜ ಬೊಮ್ಮಾಯಿಯವರು ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಅವರು ಸದನದಲ್ಲಿ ಮಾತನಾಡುತ್ತ ಈ ಬಗ್ಗೆ ತಿಳಿಸಿದ್ದಾರೆ. ಈಗಾಗಲೇ ಕಳೆದ ಕೆಲವು ದಿನಗಳ ಹಿಂದೆ ನೇಕಾರರ ಜೊತೆಗೆ ನಡೆದ ಸಭೆಯಲ್ಲಿ ವಿದ್ಯುತ್ ಕೈಮಗ್ಗ ನೇಕಾರರಿಗೂ ನೇಕಾರ ಸಮ್ಮಾನ್ ಯೋಜನೆ ವಿಸ್ತರಣೆ ಲಕ್ಷದವರೆಗೆ ಶೂನ್ಯ ಬಡ್ಡಿ ದರದಲ್ಲಿ ಸಾಲ, 5 ಎಚ್ಪಿ ವರೆಗೆ ಉಚಿತ ವಿದ್ಯುತ್ ನೀಡಲು ತೀರ್ಮಾನಿಸಲಾಗಿದೆ ಅಂತ ಸಭೆ ಬಳಿಕ ತಿಳಿಸಿದ್ದರು. ಇದಲ್ಲದೇ ಕಾರರ ಜನವಸತಿ ಪ್ರದೇಶದಲ್ಲಿರುವ ನೇಕಾರರಿಗೆ ಆಕ್ಯುಪೆನ್ಸಿ ಸರ್ಟಿಫಿಕೇಟ್ ನೀಡಲು ತೀರ್ಮಾನಿಸಲಾಗಿದೆ. ಮನೆಯಲ್ಲಿಯೇ ಉದ್ಯೋಗ ನಡೆಸುತ್ತಿರುವ ನೇಕಾರರಿಗೆ `ಗುಡಿ ಕೈಗಾರಿಕೆ ಗಳೆಂದು ಪರಿಗಣಿಸಿ, ಮಾಲಿನ್ಯ ನಿಯಂತ್ರಣ ಮಂಡಳಿ ಅನುಮತಿಯಿಂದ ವಿನಾಯಿತಿ ನೀಡಲು ಆದೇಶ ಹೊರಡಿಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದರು.