ರಾಣೆಬೇನ್ನೂರು: ತಾಲೂಕಿನ ಆರೇಮಲ್ಲಾಪುರ ಗ್ರಾಮದಲ್ಲಿ ಮಹಿಳೆಯನ್ನು ಕಂಬಕ್ಕೆ ಕಟ್ಟಿ ಹಾಕಿ ಥಳಿಸಿರುವ ಅಮಾನವೀಯ ಘಟನೆ ನಡೆದಿದ್ದು, ಈ ಮೂಲಕ ರಾಜ್ಯದಲ್ಲಿ ಮತ್ತೊಂದು ಅವಮಾನೀಯ ಘಟನೆ ನಡೆದಿದೆ. ಈ ಘಟನೆ 4 ದಿನಗಳ ಹಿಂದೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಹನುಮವ್ವಳ ಮಗ ಮಂಜುನಾಥ ಎಂಬ ಯುವಕ ಯುವತಿಯನ್ನ ಕರೆದುಕೊಂಡು ಓಡಿ ಹೋಗಿದ್ದಾನೆ. ಇದರಿಂದ ಆಕ್ರೋಶಗೊಂಡ ಹುಡಗಿ ಮನೆಯ ಚಂದ್ರಪ್ಪ ,ಗಂಗಪ್ಪ ಹಾಗೂ ಗುತ್ತೆವ್ವ ಎಂಬುವರು ಹನುಮವ್ವ ಮೆಡ್ಲರಿ (50) ವಿದ್ಯುತ್ ಕಂಬಕ್ಕೆ ಕಟ್ಟಿ ಹಲ್ಲೆ ಮಾಡಿದ್ದಾರೆ. ರಾಣೆಬೇನ್ನೂರು ಗ್ರಾಮೀಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ