ಸಾಲ ಮರುಪಾವತಿ ಮಾಡುವ ಸಲುವಾಗಿ ತನ್ನ ಹೆಂಡತಿ ಹಾಗೂ ಪುತ್ರನನ್ನು ಗೃಹ ಬಂಧನದಲ್ಲಿಟ್ಟಿದ್ದಕ್ಕೆ ಮನನೊಂದು ರೈತರೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಇಸ್ಲಾಂಪುರದಲ್ಲಿ ನಡೆದಿದೆ.
ಮೃತ ರೈತನನ್ನು ರಾಜು ಖೋತಗಿ ಎಂದು ಗುರುತಿಸಲಾಗಿದೆ 5 ತಿಂಗಳ ಹಿಂದೆ 1.5 ಲಕ್ಷ ರೂ. ಸಾಲವನ್ನು ತನ್ನದೇ ಗ್ರಾಮದ ಮಹಿಳೆಯೊಬ್ಬರಿಂದ ಪಡೆದುಕೊಂಡಿದ್ದರು. ಇದೇ ವೇಳೆ ಹಣವನ್ನು ನೀಡದೇ ಇದ್ದ ಸಲುವಾಗಿ ರೈತನ ಪತ್ನಿ ಹಾಗೂ ಪುತ್ರನನ್ನು ಮನೆಯಲ್ಲಿ ಬಿಟ್ಟು ಹೋಗುವಂತೆ ಹೇಳಿದ್ದಳು. ಬಳಿಕ ರೈತನ ಪತ್ನಿ ಹಾಗೂ ಪುತ್ರನನ್ನು ಎರಡು ದಿನದಿಂದ ಗೃಹ ಬಂಧನದಲ್ಲಿಟ್ಟಿದ್ದಳು. ಇದರಿಂದ ಮನನೊಂದು ವಿಷಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎನ್ನಲಾಗಿದೆ. ಈ ನಡುವೆ ಘಟನೆ ಸಂಬಂಧ ಯಮಕನಮರಡಿ ಠಾಣೆ ಪೊಲೀಸರು ದೂರು ದಾಖಲಿಸಿಕೊಳ್ಳುವುದಕ್ಕೆ ಹಿಂದೇಟು ಹಾಕಿದ್ದಾರೆ ಎನ್ನಲಾಗಿದೆ.