ಬೆಂಗಳೂರು : ಮದ್ಯ ಪ್ರಿಯರಿಗೆ ಮತ್ತೆ ಬೆಲೆ ಏರಿಕೆಯ ಶಾಕ್ ಎದುರಾಗಿದ್ದು, ಅ.1 ರಿಂದ ರಾಜ್ಯದಲ್ಲಿ ಬಿಯರ್ ಬೆಲೆ ಹೆಚ್ಚಳ ಮಾಡಲು ಸರ್ಕಾರ ನಿರ್ಧರಿಸಿದೆ. ಬಿಯರ್ ದರವನ್ನು 10 ರಿಂದ 15 ರೂಪಾಯಿ ಹೆಚ್ಚಳ ಮಾಡಲು ನಿರ್ಧರಿಸಿದೆ.
ಈಗಾಗಲೇ ಕಳೆದಾಗ 15 ತಿಂಗಳಲ್ಲಿ ಎರಡೆರಡು ಬಾರಿ ಮದ್ಯದ ದರ ಏರಿಕೆ ಮಾಡಿರುವ ರಾಜ್ಯ ಸರ್ಕಾರ ಇದೀಗ ಮೂರನೇ ಬಾರಿ ಬಿಯರ್ ಮೇಲಿನ ದರ ಏರಿಕೆಗೆ ಮುಂದಾಗಿದ್ದು, ಅಕ್ಟೋಬರ್ ಆರಂಭದಿಂದ ಈ ಹೊಸ ದರ ಜಾರಿಗೆ ಬರುವ ಸಾಧ್ಯತೆಯಿದೆ.
ಬುಲೆಟ್, ಪವರ್ ಕೂಲ್, ಲೆಜೆಂಡ್, ಆರ್.ಸಿ.ಸ್ಟ್ರಾಂಗ್, ನಾಕೌಟ್ ಮತ್ತಿತರ ಬ್ಯಾಂಡ್‌ಗಳ ಬೆಲೆಯಲ್ಲಿ ಶೇ.10 ರಿಂದ ಶೇ.15ರಷ್ಟು ಬೆಲೆ ಹೆಚ್ಚಳ ಮಾಡಲು ಚಿಂತನೆ ನಡೆಸಿದೆ ಎನ್ನಲಾಗಿದೆ. ಪ್ರತಿ ಬಾಟಲಿ ಬಿಯರ್ ಮೇಲಿನ ದರವನ್ನ 10ರಿಂದ 15 ರೂಪಾಯಿ ಏರಿಸಲು ಅಬಕಾರಿ ಇಲಾಖೆ ಪ್ರಸ್ತಾವನೆ ಸಲ್ಲಿಸಿದ್ದು, ಈ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಅಂಗೀಕರಿಸುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.