ಬೆಂಗಳೂರು : ಬೆಂಗಳೂರಿನ ಜನತೆಗೆ ರಾಜ್ಯ ಸರ್ಕಾರ ಶಾಕ್ ನೀಡಿದ್ದು, ಬೆಂಗಳೂರಿನಲ್ಲಿ ಶೀಘ್ರವೇ ನೀರಿನ ದರ ಏರಿಕೆ ಮಾಡುವ ಸುಳಿವು ನೀಡಿದೆ.
ಬೆಂಗಳೂರಿನಲ್ಲಿ ನೀರಿನ ದರ ಹೆಚ್ಚಳ ಮಾಡುವ ಕುರಿತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸುಳಿವು ನೀಡಿದ್ದು, ಕಳೆದ 10 ವರ್ಷಗಳಲ್ಲಿ ವಿದ್ಯುತ್ ದರ ಪರಿಷ್ಕರಣೆ ಮಾಡಲಾಗಿದ್ದು, ನೀರಿನ ದರ ಮಾತ್ರ ಪರಿಷ್ಕರಣೆ ಮಾಡಿಲ್ಲ ಹೀಗಾಗಿ ಶೀಘ್ರವೇ ಬೆಂಗಳೂರಿನಲ್ಲಿ ನೀರಿನ ದರ ಹೆಚ್ಚಳ ಮಾಡುವ ಬಗ್ಗೆ ನಿರ್ಧರಿಸುವ ಕುರಿತು ಚರ್ಚೆ ನಡೆಸಲಾಗಿದೆ.
ಜಲಮಂಡಳಿಯ ಅದಾಯಕ್ಕಿಂತಲೂ ವೆಚ್ಚ ಹೆಚ್ಚಾಗಿದೆ. ಗೃಹ ಬಳಕೆ ನೀರಿನ ದರವನ್ನು ಶೇ. 30 ರಿಂದ 40 ಹಾಗೂ ವಾಣಿಜ್ಯ ಬಳಕೆಗೆ ಶೇ. 45 ರಷ್ಟು ದರ ಹೆಚ್ಚಳಕ್ಕೆ ಜಲಮಂಡಳಿ ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಲಾಗಿದೆ.