ಬೆಂಗಳೂರು: ರಾಜ್ಯದಲ್ಲಿ ಮತ್ತೊಂದು ಬೆಚ್ಚಿಬೀಳಿಸುವ ಘಟನೆ ನಡೆದಿದ್ದು, ಮಂಡ್ಯದಲ್ಲಿ ಅನುಮಾನಸ್ಪದ ರೀತಿಯಲ್ಲಿ ಮಹಿಳೆ ಶವ ಪತ್ತೆ ಯಾಗಿದೆ. ಬೆಂಗಳೂರು-ಮಂಗಳೂರು ಹೆದ್ದಾರಿಯ ಪಕ್ಕದಲ್ಲೇ ಇರುವ ಜಮೀನಿನಲ್ಲಿ ಅತ್ಯಾಚಾರ ಮಾಡಿ ಕೊಲೆ ಮಾಡಿದ್ದಾರೆ ಎನ್ನಲಾಗುತ್ತಿದೆ.
ಕಳೆದ ನಾಲ್ಕು ದಿನಗಳ ಹಿಂದೆ ಮಹಿಳೆ ಕಾಣಿಯಾಗಿದ್ದಾರೆ ಎನ್ನಲಾಗಿದೆ. ಮೃತ ಮಹಿಳೆ ಪದೇ ಪದೇ ಮನೆಯಿಂದ ಹೋಗುತ್ತಿದ್ದರು ಎನ್ನಲಾಗಿದೆ. ಇದಲ್ಲದೇ ಆಕೆ ಬುದ್ಧಿಮಾಂದ್ಯ ಮಹಿಳೆ ಎನ್ನಲಾಗಿದ್ದು, ಈ ಕಾರಣಕ್ಕೆ ಆಕೆಯ ಕುಟಂಬಸ್ಥರು ಪೊಲೀಸ್ ಠಾಣೆಗೆ ದೂರು ನೀಡಲಾಗಿಲ್ಲ ಎನ್ನಲಾಗಿದೆ. ಈ ನಡುವೆ ನಿನ್ನೆ ರಾತ್ರಿ ಮೃತ ದೇಹ ಪತ್ತೆಯಾಗಿದ್ದು, ಸದ್ಯ ಮಾಹಿತಿ ಪ್ರಕಾರ ಪೊಲೀಸರ ಸ್ಥಳಕ್ಕೆ ಭೇಟಿ ನೀಡಿದ ವೇಳೆಯಲ್ಲಿ ಮಹಿಳೆ ಮೇಲೆ ಯಾವುದೇ ಬಟ್ಟೆ ಇರಲಿಲ್ಲ ಎನ್ನಲಾಗಿದೆ. ಸದ್ಯ ಮೃತ ದೇಹವನ್ನು ಸ್ಥಳೀಯ ಆಸ್ಪತ್ರೆಗೆ ಪೋಸ್ಟ್ ಮಾರ್ಟ್ಗೆ ಕಳುಹಿಸಿಕೊಡಲಾಗಿದೆ ಎನ್ನಲಾಗಿದೆ.
ಘಟನೆ ಬೆಳ್ಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನ ಸ್ಥಳಕ್ಕೆ ಎಸ್‌ಪಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಪೊಲೀಸರು ತನಿಖೆಯನ್ನು ಮುಂದುವರೆಸಿದ್ದಾರೆ.