ಗದಗ : ಇತ್ತೀಚಿಗೆ ರಾಜ್ಯದಲ್ಲಿ ಮಹಿಳೆಯರಿಗೆ ರಕ್ಷಣೆ ಇಲ್ಲದಂತಾಗಿದೆ. ಕಳೆದ ತಿಂಗಳು ಹುಬ್ಬಳ್ಳಿಯಲ್ಲಿ ನೇಹಾಳನ್ನು ಭೀಕರವಾಗಿ ಹತ್ಯೆ ಮಾಡಲಾಗಿತ್ತು. ಕೆಲವು ದಿನಗಳ ಹಿಂದೆ ಕೊಡಗಿನಲ್ಲಿ 10ನೇ ತರಗತಿ ವಿದ್ಯಾರ್ಥಿನಿಯ ರುಂಡ ಕಡಿದು ಭೀಕರವಾಗಿ ಕೊಲೆ ಮಾಡಲಾಗಿತ್ತು. ಇದೀಗ ಗದಗ್ನಲ್ಲಿ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ.
ಹೌದು ಗದಗದ ಬೆಡಗೇರಿ ಪೊಲೀಸ್ ಠಾಣೆಯಲ್ಲಿ ಕಿಡಿಗೇಡಿಗಳ ಅಟ್ಟಹಾಸಕ್ಕೆ ಕುಟುಂಬ ಒಂದು ಇದೀಗ ಲೈಂಗಿಕ ಕಿರುಕುಳಕ್ಕೆ ಒಳಗಾಗಿದೆ. ಮಹಿಳೆಯನ್ನು ಸೈನಾಜ್ ಎಂದು ಹೇಳಲಾಗುತ್ತಿದ್ದು, ಆಕೆ ಸೇರಿದಂತೆ ಆಕೆಯ ಅಪ್ರಾಪ್ತ ಇಬ್ಬರು ಹೆಣ್ಣು ಮಕ್ಕಳಿಗೂ ಕಿರುಕುಳ ನೀಡಿದ ಆರೋಪ ಕೇಳಿಬಂದಿದೆ.
ಈ ವೇಳೆ ಕಿಡಿಗೇಡಿಗಳು ಕುಟುಂಬದ ಮೇಲೆ ಹಲ್ಲೆ ಮಾಡುತ್ತಿರುವಾಗ ನನ್ನ ಕುಟುಂಬವನ್ನು ಕಾಪಾಡಿ ಎಂದು ಮಹಿಳೆ ಕಣ್ಣೀರು ಹಾಕುತ್ತಿದ್ದಾರೆ. ಜೊತೆಗೆ ಇದನ್ನು ಪ್ರಶ್ನಿಸಿದ್ದಕ್ಕೆ ಆರೋಪಿಗಳಾದ ಲಿಯಾಕತ್, ಅಲ್ತಾಫ್ ಸೈಯದ್, ಸಮೀರ್, ರಿಯಾಜ್, ಜಾವೀದ್ ಎಂಬುವವರು ತಾಯಿ, ಪುತ್ರ ಸದ್ಧಾಂ ಮೇಲೆ ಮಾರಕಾಸ್ತ್ರಗಳಿಂದ ಹಲ್ಲೆ ಮಾಡಿದ್ದಾರೆ. ಅಲ್ಲದೆ ಕೊಲೆ ಬೆದರಿಕೆ ಕೂಡ ಹಾಕಿದ್ದಾರೆ ಎಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ.
ಘಟನೆ ನಂತರ ಮಹಿಳೆ ಪೊಲೀಸ್ ಠಾಣೆಗೆ ದೂರು ನೀಡಲು ಹೋದಾಗ ಪೊಲೀಸರು ಕೂಡ ತಲೆಕೆಡಿಸಿಕೊಳ್ಳದೆ. ಇನ್ನೊಂದು ಬಾರಿ ದೂರು ನೀಡಲು ಬಂದರೆ ನಿನ್ನ ಹಾಗೂ ನಿನ್ನ ಮಕ್ಕಳನ್ನು ಒಳಗೆ ಹಾಕುತ್ತೇವೆ ಎಂದು ಬೆದರಿಕೆ ಹಾಕಿದ್ದಾರೆ. ಆದರಿಂದ ದೂರು ತೆಗೆದುಕೊಳ್ಳದ ಪೊಲೀಸರ ವಿರುದ್ಧ ಕೂಡ ಇದೀಗ ಮಹಿಳೆ ಆಕ್ರೋಶ ಹೊರಹಾಕಿದ್ದಾಳೆ.