ಕೊಪ್ಪಳ : ರಾಜ್ಯದಲ್ಲಿ ಮತ್ತೊಂದು ಘೋರ ದುರಂತವೊಂದು ಸಂಭವಿಸಿದ್ದು, ಮುನಿರಾಬಾದ್ ಸಮೀಪದ ಹೊಸಲಿಂಗಾಪುರ ಗ್ರಾಮಚ ಚರ್ಚ್ ಏರಿಯಾ ಹಿಂಭಾಗದಲ್ಲಿ ಒಂದೇ ಕುಟುಂಬದ ಮೂವರು ಸದಸ್ಯರು ನಿಗೂಢ ರೀತಿಯಲ್ಲಿ ಮೃತಪಟ್ಟಿದ್ದಾರೆ.
ರಾಜೇಶ್ವರಿ, ಅವರ ಪುತ್ರಿ ವಸಂತ, ವಸಂತಳ ಪುತ್ರಿ ಸಾಯಿಧರ್ಮ ಎಂಬುವರು ಮೃತಪಟ್ಟವರು ಎಂದು ಗುರುತಿಸಲಾಗಿದ್ದು, ರಾಜೇಶ್ವರಿ ಜೋಗಮ್ಮಳಾಗಿದ್ದು, ಅವರ ಪುತ್ರಿ ವಸಂತ ಲಿಂಗಾಪುರ ಗ್ರಾಮದ ಗೊಂಬೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು.
ಮಂಗಳವಾರ ಬೆಳಗ್ಗೆ ಗೊಂಬೆ ಕಾರ್ಖಾನೆ ಸಿಬ್ಬಂದಿ ವಸಂತಳನ್ನು ಕೆಲಸಕ್ಕೆ ಕರೆಯಲೆಂದು ಮನೆಗೆ ಹೋದಾಗ ಮನೆಯಲ್ಲಿ ಮೂವರು ನಿಗೂಢ ರೀತಿಯಲ್ಲಿ ಮೃತಪಟ್ಟಿದ್ದಾರೆ.