ತುಮಕೂರು : ರಾಜ್ಯದಲ್ಲಿ ಮತ್ತೊಂದು ದುರಂತ ಸಂಭವಿಸಿದ್ದು, ಕಲುಷಿತ ನೀರು ಸೇವಿಸಿ ಮೂವರು ಸಾವನ್ನಪ್ಪಿರುವ ಘಟನೆ ತುಮಕೂ ಜಿಲ್ಲೆಯ ಮಧುಗಿರಿ ತಾಲೂಕಿನ ಚಿನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ.
ಚಿನ್ನೇನಹಳ್ಳಿ ಗ್ರಾಮದಲ್ಲಿ ಕಲುಷಿತ ನೀರು ಸೇವಿಸಿ ಅಸ್ವಸ್ಥಗೊಂಡಿದ್ದವರನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೂರು ವರ್ಷದ ಮಗು ಸೇರಿದಂತೆ ಮೂವರು ಸಾವನ್ನಪ್ಪಿದ್ದಾರೆ.
ಮೃತರನ್ನು ಮೀನಾಕ್ಷಿ(3), ಚಿಕ್ಕದಾಸಪ್ಪ (76), ಪೆದ್ದಣ್ಣ (74) ಎಂದು ಗುರುತಿಸಲಾಗಿದೆ. ಚಿನ್ನೀನಹಳ್ಳಿ ಗ್ರಾಮದ ಓವರ್ ಹೆಡ್ ಟ್ಯಾಂಕ್ ಮತ್ತು ಶುದ್ದ ನೀರಿನ ಘಟಕದಿಂದ ಪೂರೈಸುವ ನೀರು ಕಲುಷಿತವಾಗಿರುವ ಹಿನ್ನೆಲೆಯಲ್ಲಿ ನೀರು ಸೇವಿಸಿದ್ದ ಗ್ರಾಮದ 100 ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿದ್ದರು.