ಬಳ್ಳಾರಿ: ಕೊಲೆ ಪ್ರಕರಣದ ಆರೋಪದ ಮೇಲೆ ಸದ್ಯ ಬಳ್ಳಾರಿ ಜೈಲಿನಲ್ಲಿರುವ ಪ್ರಮುಖ ಆರೋಪಿ ನಟ ದರ್ಶನ್‌ನನ್ನು ಇಂದು ಆದಾಯ ತೆರಿಗೆ ಅಧಿಕಾರಿಗಳು ವಿಚಾರಣೆ ನಡೆಸಿದ್ದಾರೆ ಅಂತ ತಿಳಿದು ಬಂದಿದೆ. ಇಂದಿನಿಂದ ಎರಡು ದಿನಗಳ ಕಾಲ ಬಳ್ಳಾರಿ ಜೈಲಿನಲ್ಲಿರುವ ಸಮಲೋಚಕರ ಕೊಠಡಿಯಲ್ಲಿ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದರ್ಶನ್ ಬಳಿ ರೇಣುಕಸ್ವಾಮಿ ಕೊಲೆಯಾದ ಬಳಿಕ ನಡೆದ ಹಣದ ವ್ಯವಹಾರದ ಬಗ್ಗೆ ಮಾಹಿತಿಯನ್ನು ಪಡೆದುಕೊಳ್ಳಲಾಗಿದ್ದಾರೆ ಅಂತ ತಿಳಿದು ಬಂದಿದೆ.
ತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ಸಾಕ್ಷ್ಯ ನಾಶ ಮಾಡಲು ಬಳಕೆ ಮಾಡಲಾಗಿದೆ ಎನ್ನಲಾದ 84 ಲಕ್ಷ ಹಣ ಮೂಲ ಪತ್ತೆ ಹಚ್ಚಲು ಆದಾಯ ತೆರಿಗೆ (ಐಟಿ) ಇಲಾಖೆ ಮುಂದಾಗಿದೆ. ಪವಿತ್ರಾ ಗೌಡ ಅವರ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಅವಹೇಳನಕಾರಿ ಹೇಳಿಕೆ ನೀಡಿ ನಟ ದರ್ಶನ್ ಅವರ ಅಭಿಮಾನಿ ರೇಣುಕಾಸ್ವಾಮಿ ಅವರನ್ನು ಹತ್ಯೆ ಮಾಡಲಾಗಿದೆ. ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದರ್ಶನ್ ಮತ್ತು ಪವಿತ್ರಾ ಗೌಡ ಸೇರಿದಂತೆ ಹಲವರನ್ನು ಬಂಧಿಸಲಾಗಿತ್ತು.