ಧಾರವಾಡ: ತಮ್ಮದೆಯಾದ ಸ್ಪಾ ಬ್ಯೂಟಿಷಿಯನ್ ಆಗಿ ಕೆಲಸ ಮಾಡುತ್ತಿದ್ದ ಹುಡುಗಿ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದಡಿಯಲ್ಲಿ ಕಾಂಗ್ರೆಸ್ ಮುಖಂಡನನ್ನು ಬಂಧಿಸಲಾಗಿದೆ. ಆತನಿಗೆ ಯುವತಿ ಸ್ನೇಹಿತರು ಸೇರಿದಂತೆ ಹಿಗ್ಗಾಮುಗ್ಗ ಥಳಿಸಿದ್ದಾರೆ.
ಧಾರವಾಡ ಕಾಂಗ್ರೆಸ್ ಮುಖಂಡ ಮನೋಜ್ ಕರ್ಜಗಿ ಎಂಬಾತ ಸಿದ್ದರಾಮಯ್ಯ ಸರ್ಕಾರದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ನಿರ್ದೇಶಕ ಆಗಿದ್ದ.ಈತ ಮಾಜಿ ಸಚಿವ ವಿನಯ್ ಕುಲಕರ್ಣಿ ಅವರ ಪರಮ ಆಪ್ತ ಎಂದು ಹೇಳಲಾಗಿದೆ. ಕರ್ಜಗಿ ವೃತ್ತಿಯಿಂದ ಧಾರವಾಡದ ವಿದ್ಯಾಗಿರಿ ಬಡಾವಣೆಯಲ್ಲಿ ಲೇಮೋಸ್ ಯುನಿಸೆಕ್ಸ್ ಸಲೂನ್ ಆ್ಯಂಡ್ ಸ್ಪಾ ನಡೆಸುತ್ತಿದ್ದಾನೆ.
BIGG NEWS : ತೀವ್ರ ಕುತೂಹಲಕ್ಕೆ ಕಾರಣವಾಗಿದೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ- ಸಚಿವ ಆರ್. ಅಶೋಕ್ ಭೇಟಿ!
ಕಳೆದವಾರ ಸ್ಪಾದಲ್ಲಿ ಕೆಲಸ ಮಾಡುತ್ತಿದ್ದ 19 ವರ್ಷದ ಬ್ಯೂಟಿಷಿಯನ್ ಜೊತೆ ಸ್ಪಾ ಕ್ಲೀನ್ ಆಗಿ ಇಟ್ಟಿಲ್ಲ ಎಂಬ ವಿಚಾರವಾಗಿ ಕಿರಿಕ್ ಮಾಡಿದ್ದಾನೆ. ಬಳಿಕ ಆಕೆಯನ್ನು ತಬ್ಬಿಕೊಂಡು ಮುತ್ತು ಕೊಡಲು ಯತ್ನಿಸಿದ್ದಾನೆ. ಈ ವೇಳೆ ಅಲ್ಲಿಂದ ಕೂಗಾಡುತ್ತಾ ಹೊರ ಬಂದ ಯುವತಿ, ತನ್ನ ಸ್ನೇಹಿತರನ್ನು ಅಲ್ಲಿಗೆ ಕರೆಯಿಸಿಕೊಂಡಿದ್ದಾಳೆ. ಆಗ ಸ್ಪಾಗೆ ಬಂದ ಯುವತಿಯ ಸ್ನೇಹಿತರ ಗುಂಪು ಮನೋಜ್ಗೆ ಹಿಗ್ಗಾಮುಗ್ಗಾ ಥಳಿಸಿದ್ದಾರೆ.