ಧಾರವಾಡ: ಜಿಎಸ್ಟಿ ಪಾವತಿಸದೇ ವಂಚಿಸಿದಂತ ಆರೋಪ ಕೇಳಿ ಬಂದ ಹಿನ್ನಲೆಯಲ್ಲಿ ಹುಬ್ಬಳ್ಳಿ-ಧಾರವಾಡ ಅವಳಿ ನಗರದ 8 ಕಾಲೇಜುಗಳ ಮೇಲೆ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು ದಾಳಿ ಮಾಡಿ, ಮಹತ್ವದ ದಾಖಲೆಗಳನ್ನು ಸಂಗ್ರಹಿಸಿದ್ದಾರೆ.
ಏಕಕಾಲಕ್ಕೆ ಹುಬ್ಬಳ್ಳಿ-ಧಾರವಾಡ ಅವಳಿ ನಗರದ 8 ಕಾಲೇಜುಗಳ ಮೇಲೆ ಜಿಎಸ್ಟಿ ವಂಚನೆ ಆರೋಪದ ಹಿನ್ನಲೆಯಲ್ಲಿ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಧಾರವಾಡದ ಅಣ್ಣಿಗೇರಿ ಕಾಲೇಜು, ಮಹೇಶ ಪಿಯು ಕಾಲೇಜು, ಪ್ರೇರಣಾ ಕಾಲೇಜುಗಳ ಮೇಲೆ ದಾಳಿ ನಡೆಸಲಾಗಿದೆ.
ಇವಲ್ಲದೇ ಜಿಎಸ್ಎಸ್ ಆವಂತಿಕಾ ಕೋಚಿಂಗ್ ಸೆಂಟರ್ ಮತ್ತು ಚೇತನಾ ಪಿಯು ಕಾಲೇಜು ಸೇರಿದಂತೆ 8 ಕಾಲೇಜುಗಳ ಮೇಲೆ ವಾಣಿಜ್ಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿ, ಮಹತ್ವದ ದಾಖಲೆಗಳನ್ನು ಪರಿಶೀಲನೆಯಲ್ಲಿ ತೊಡಗಿದ್ದಾರೆ.
ವಿದ್ಯಾರ್ಥಿಗಳಿಗೆ ಕೋಚಿಂಗ್ ಹೆಸರಿನಲ್ಲಿ ವಿವಿಧ ಪರೀಕ್ಷೆಗಾಗಿ ಸಂಗ್ರಹಿಸಿದಂತ ಹಣದಲ್ಲಿ ಜಿಎಸ್ಟಿ ಕಟ್ಟದೇ ವಂಚನೆ ಮಾಡಿದಂತ ಆರೋಪ ಈ ಕಾಲೇಜುಗಳ ಮೇಲೆ ಕೇಳಿ ಬಂದಿತ್ತು. ಈ ಹಿನ್ನಲೆಯಲ್ಲಿ ವಾಣಿಜ್ಯ ತೆರಿಗೆ ಇಲಾಖೆಯ ಜಾರಿ ವಿಭಾಗದ ಜಂಟಿ ಆಯುಕ್ತ ರವಿಕುಮಾರ್ ನೇತೃತ್ವದಲ್ಲಿ ದಾಳಿ ನಡೆಸಿ, ಮಹತ್ವದ ದಾಖಲೆ ಪತ್ರವನ್ನು ವಶಕ್ಕೆ ಪಡೆದಿರೋದಾಗಿ ತಿಳಿದು ಬಂದಿದೆ.
ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ : ರಾಜ್ಯ ಸರ್ಕಾರಿ ನೌಕರರಿಗೆ ಮಹತ್ವದ ಮಾಹಿತಿ
ಲೋಕಸಭಾ ಚುನಾವಣೆ : ಮೊಬೈಲ್ ನಲ್ಲೇ ‘ವೋಟರ್ ಸ್ಲಿಪ್’ ಡೌನ್ಲೋಡ್ ಮಾಡುವುದು ಹೇಗೆ? ಇಲ್ಲಿದೆ ಮಾಹಿತಿ