ಪ್ರಣಾಳಿಕೆಯಲ್ಲಿ ಹೇಳಿದಂತೆ ‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ಗೌರವಧನ ಹೆಚ್ಚಿಸಿ: ಆರ್‌.ಅಶೋಕ್ ಆಗ್ರಹ

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಂತೆಯೇ, ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಆರ್‌.ಅಶೋಕ ಭೇಟಿ ನೀಡಿದರು. ನಂತರ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಅವರ ಮೇಲೆ ಪೊಲೀಸರು ದೌರ್ಜನ್ಯ ಮಾಡಿದ್ದಾರೆ. ಗಂಟು ಮೂಟೆ ಕಟ್ಟಿಕೊಂಡು ಮನೆಗೆ ಹೋಗಿ ಎಂದು ಬೆದರಿಸಿದ್ದಾರೆ. ಅವರಿಗೆ ಪ್ರತಿಭಟನೆಗೆ ಅವಕಾಶ ನೀಡುತ್ತಿಲ್ಲ. ಅವರಿಗೆ ಕುಡಿಯುವ ನೀರು, ಶೌಚಾಲಯ, ಟೆಂಟ್‌ ಮೊದಲಾದ … Continue reading ಪ್ರಣಾಳಿಕೆಯಲ್ಲಿ ಹೇಳಿದಂತೆ ‘ಅಂಗನವಾಡಿ ಕಾರ್ಯಕರ್ತೆ’ಯರಿಗೆ ಗೌರವಧನ ಹೆಚ್ಚಿಸಿ: ಆರ್‌.ಅಶೋಕ್ ಆಗ್ರಹ