ಬೆಂಗಳೂರು: ಕಾಡಾನೆ ದಾಳಿಯಿಂದಾದ ಬೆಳೆ ಹಾನಿ ಪರಿಹಾರ ಹೆಚ್ಚಳ ಮಾಡಲಾಗುವುದು ಅಂತ ಸಿಎಂ ಬಸವರಾಜ ಬೊಮ್ಮಾಯಿಯವರು ಹೇಳಿದ್ದಾರೆ. ಅವರು ಇಂದು ವಿಧಾನಸಭೆಯ ಸದನದಲ್ಲಿ ನಿಯಮ 69 ಅಡಿಯಲ್ಲಿ ಹಾಸನ ಜಿಲ್ಲೆಯಲ್ಲಿ ಕಾಡಾನೆ ಹಾವಳಿ ವಿಚಾರವಾಗಿ ನಡೆದ ಚರ್ಚೆಯ ಸಂದರ್ಭದಲ್ಲಿ ಮಾತನಾಡುತ್ತ ಈ ಬಗ್ಗೆ ಮಾಹಿತಿ ನೀಡಿದರು.
ಸಕಲೇಶಪುರ ಶಾಸಕ ಎಚ್. ಕೆ. ಕುಮಾರಸ್ವಾಮಿ ಅವರು ಸರ್ಕಾರದ ಗಮನ ಸೆಳೆದು ಆನೆ ದಾಳಿಯಿಂದ ಸತ್ತವರಿಗೆ 25 ಸಾವಿರ ಪರಿಹಾರ ಇಲ್ಲವೇ ಸರ್ಕಾರಿ ಹುದ್ದೆ ಕೊಡಿ ಇದಲ್ಲದೇ ಆನೆಗಳನ್ನು ಸ್ಥಳಾಂತರ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
ಇದಕ್ಕೆ ಉತ್ತರಿಸಿದ ಸಿಎಂ ಬಸವರಾಜಬೊಮ್ಮಾಯಿವರು ಅರಣ್ಯ ಅಂಚಿನಲ್ಲಿರುವ ಜಿಲ್ಲೆಗಳಲ್ಲಿ ಆನೆ ಹಾವಳಿ ಇದ್ದು, ಅನೆಗಳನ್ನು ಒಕ್ಕಲೆಬ್ಬಿಸುವುದು ಸುಲಭದ ಕೆಲಸ ಈಗಾಗಲೇ ರೈಲ್ವೇ ಬ್ಯಾರಿಕೇಡ್ ಅಳವಡಿಸಲಾಗುತ್ತಿದೆ ಆನೆ ದಾಳಿಯಿಂದ ಬೆಳೆ ಹಾನಿಯಾದರೆ ಪರಿಹಾರ ದುಪ್ಪಟ್ಟು ಮಾಡಲಾಗುತ್ತದೆ. ಪ್ರಾಣ ಹಾನಿ ಪರಿಹಾರ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು.