ಹಾಸನ : ಜಿಲ್ಲೆಯ ಬೇಲೂರು ತಾಲೂಕಿನ ಅರೇಹಳ್ಳಿ ಗ್ರಾಮದಲ್ಲಿ ಕಾಡಾನೆಗಳ ಹಾವಳಿ ಹೆಚ್ಚಾಗುತ್ತಿದೆ. ಇದರಿಂದಾಗಿ ಜನರು ಆತಂಕಕ್ಕೆ ಒಳಗಾಗಿದ್ದಾರೆ.
BIGG NEWS: ರಣ ಚಳಿಯ ನಡುವೆಯೇ ಬೆಂಗಳೂರಿನಲ್ಲಿ ಬೆಳ್ಳಂಬೆಳ್ಳಗೆ ಗಾಳಿ ಸಹಿತ ಭಾರಿ ಮಳೆ
ಇದೀಗ ಅರೇಹಳ್ಳಿ ಗ್ರಾಮದಲ್ಲಿ ಕಾಡಾನೆಯೊಂದು ಪ್ರತ್ಯಕ್ಷವಾಗಿದೆ.ಆರೇಹಳ್ಳಿಯ ಗ್ರಾಮದ ಪ್ರಮುಖ ರಸ್ತೆಯಲ್ಲಿ ಒಂಟಿ ಸಲಗ ಓಡಾಡುತ್ತಿದ್ದು. ಕಾಡಾನೆ ಓಡಾಟದ ವಿಡಿಯೋ ಸ್ಥಳೀಯರು ಮೊಬೈಲ್ನಲ್ಲಿ ಸೆರೆ ಹಿಡಿದಿದ್ದಾರೆ. ಇತ್ತೀಚೆಗೆ ಕಾಡು ಪ್ರಾಣಿಗಳ ಹಾವಳಿ ಹೆಚ್ಚಾಗಿದ್ದು ನಾಡಿಗೆ ಬರಲು ಪ್ರಾರಂಭಿಸಿವೆ. ಇದರಿಂದ ಜನರು ಹೊರಗಡೆ ಬರುವುದು ಕೂಡ ಕಷ್ಟವಾಗಿದೆ. ಹೀಗಾಗಿ ಅರಣ್ಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ರು ಯಾವುದೇ ಕ್ರಮ ಕೈಗೊಂಡಿಲ್ಲ. ಕೂಡಲೇ ಅಧಿಕಾರಿಗಳು ಎಚ್ಚೆತ್ತುಕೊಂಡು ಕಾಡಾನೆಗಳ ಹಾವಳಿಯನ್ನು ತಡೆಗಟ್ಟಬೇಕೆಂದು ಗ್ರಾಮಸ್ಥರು ಆಗ್ರಹಿಸಿದ್ದಾರೆ.