ಬೆಂಗಳೂರು : ಮೆಟ್ರಿಕ್ ಪೂರ್ವ ಹಾಗೂ ನಂತರದ ವಿದ್ಯಾರ್ಥಿಗಳಿಗೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಸಚಿವ ಕೋಟಾ ಶ್ರೀನಿವಾಸ್ ಪೂಜಾರಿ ಭರ್ಜರಿ ಗುಡ್ ನ್ಯೂಸ್ ನೀಡಿದ್ದು, ಮಾಸಿಕ ಭೋಜನ ವೆಚ್ಚವನ್ನು ಹೆಚ್ಚಳ ಮಾಡಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.
ಮೆಟ್ರಿಕ್ ನಂತರದ ವಿದ್ಯಾರ್ಥಿಗಳಿಗೆ 1600 ರೂ. ರಿಂದ 1750 ರೂಪಾಯಿಗೆ ಏರಿಕೆ ಮಾಡಲಾಗಿದೆ. ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ 1500 ರಿಂದ 1650 ರೂಪಾಯಿಗೆ ಹೆಚ್ಚಿಸಲಾಗಿದೆ ಎಂದು ಹೇಳಿದ್ದಾರೆ. ಮೆಟ್ರಿಕ್ ಪೂರ್ವ ಮೆಟ್ರಿಕ್ ನಂತರದ ವಿದ್ಯಾರ್ಥಿ ವೇತನ ಕಾರ್ಯಕ್ರಮದಡಿ ಶೇ.60 ಕೇಂದ್ರ ಸರ್ಕಾರದಿಂದ 40 ಪ್ರತಿಶತ ರಾಜ್ಯ ಸರ್ಕಾರದಿಂದ ವೆಚ್ಚ ಭರಿಸಲಾಗುತ್ತಿದೆ. 1ನೇ ತರಗತಿಯಿಂದ 8ನೇ ತರಗತಿಗೆ ರಾಜ್ಯ ಸರ್ಕಾರದಿಂದ 100% ವಿದ್ಯಾರ್ಥಿವೇತನ ನೀಡಲಾಗುತ್ತಿದ್ದು, ವಿದ್ಯಾರ್ಥಿ ವೇತನವನ್ನು ಡಿಬಿಟಿ ಮೂಲಕ ಪಾವತಿಸಲಾಗುತ್ತಿದೆ ಎಂದು ತಿಳಿಸಿದರು.
ಮೆಟ್ರಿಕ್ ಪೂರ್ವ ವಿದ್ಯಾರ್ಥಿಗಳಿಗೆ ನೀಡುತ್ತಿದ್ದ ವಿದ್ಯಾರ್ಥಿ ವೇತನ ಯೋಜನೆಯನ್ನು ಸ್ಥಗಿತಗೊಳಿಸಲಾಗಿದೆ ಎಂಬ ಸುದ್ದಿ ಹರಿದಾಡಿತ್ತು, ಅಲ್ಲದೇ ಈ ವಿಚಾರ ವ್ಯಾಪಕ ಟೀಕೆಗೂ ಕಾರಣವಾಗಿತ್ತು. ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಇತ್ತೀಚೆಗೆ ಪ್ರತಿಕ್ರಿಯೆ ನೀಡಿದ್ದು, ಯಾವುದೇ ಕಾರಣಕ್ಕೂ (Pre-Matric Scholarship) ಸ್ಥಗಿತ ಮಾಡಿಲ್ಲ ಎಂದು ಸಮಾಜ ಕಲ್ಯಾಣ ಇಲಾಖೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಸ್ಪಷ್ಟನೆ ನೀಡಿದ್ದರು.
1-8ನೇ ತರಗತಿ SC-ST ವಿದ್ಯಾರ್ಥಿಗಳಿಗೆ ನೀಡುವ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ವೇತನ ಸ್ಥಗಿತ ಮಾಡಿಲ್ಲ. ವಿದ್ಯಾರ್ಥಿ ವೇತನ ಸ್ಥಗಿತ ಮಾಡಿದ್ದಾರೆ ಎಂಬುದು ಸುಳ್ಳು ಸುದ್ದಿಯಾಗಿದೆ. ಇದು ರಾಜ್ಯ ಸರ್ಕಾರದ ಯೋಜನೆಯಾಗಿದ್ದು, ಇದನ್ನು ಕೈ ಬಿಟ್ಟಿಲ್ಲ, ಇದು ಸುಳ್ಳು ಸುದ್ದಿಯಾಗಿದೆ. ವಿದ್ಯಾರ್ಥಿ ವೇತನ ಯೋಜನೆ ಮುಂದುವರೆಯಲಿದೆ. ಯಾವುದೇ ಕಾರಣಕ್ಕೂ ಯೋಜನೆ ನಿಲ್ಲಿಸೋದಿಲ್ಲ ಎಂದು ಸ್ಪಷ್ಟನೆ ನೀಡಿದ್ದರು.
ಶಾಲಾ ಮಕ್ಕಳಿಗೆ ವಿಶೇಷ ಭೋಜನದ ವ್ಯವಸ್ಥೆ
ಇತ್ತೀಚೆಗಷ್ಟೇ ಸರ್ಕಾರ ಶಾಲಾ ಮಕ್ಕಳಿಗೆ ವಿಶೇಷ ಭೋಜನದ ವ್ಯವಸ್ಥೆ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು. ಶಿಕ್ಷಣ ಇಲಾಖೆಯಿಂದ ಮಕ್ಕಳಿಗೆ ಇನ್ಮುಂದೆ ಮಧ್ಯಾಹ್ನದ ಬಿಸಿಯೂಟ ಯೋಜನೆಯಲ್ಲಿ ( mid day meal scheme ) ವಿಶೇಷ ಭೋಜನದ ವ್ಯವಸ್ಥೆಯನ್ನು ಮಾಡಲಾಗುತ್ತಿದೆ. ಹಬ್ಬದಂದು ಹಬ್ಬದ ವಿಶೇಷ ಊಟದ ವ್ಯವಸ್ಥೆಯನ್ನು ಮಕ್ಕಳಿಗೆ ಮಾಡುವಂತೆ ಈ ಯೋಜನೆಯ ಅಡಿಯಲ್ಲಿ, ಶಾಲಾ ಮಕ್ಕಳ ಪೌಷ್ಠಿಕತೆಯನ್ನು ಇನ್ನಷ್ಟು ಹೆಚ್ಚಿಸಲು ಸ್ಥಳೀಯ ಸಮುದಾಯ ಪಾಲ್ಗೊಂಡು, ಅಗತ್ಯ ನೆರವು ಹಾಗೂ ಉತ್ತೇಜನ ನೀಡುವಂತೆ ಅವಕಾಶವನ್ನು ಕಲ್ಪಿಸಲಾಗಿದೆ.
BIGG NEWS : ಬಸ್ ಡಿಪೋ ಬಳಿ ಅಧಿಕಾರಿಗೆ ‘ಮಚ್ಚು’ ತೋರಿಸಿದ್ದ ದಂಪತಿ ಅರೆಸ್ಟ್
ಪ್ರಿಯಾಂಕ್ ಖರ್ಗೆ ಅವರೇ PSI ಹಗರಣದಲ್ಲಿ ಬಂಧಿತರಾಗಿರುವವರು ನಿಮ್ಮ ಹಿಂಬಾಲಕರೇ – ಬಿಜೆಪಿ