ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಯ ಮೀಸಲಾತಿಯನ್ನು ಶೇ 15ರಿಂದ 17ಕ್ಕೆ ಮತ್ತು ಪರಿಶಿಷ್ಟ ಪಂಗಡಗಳ ಮೀಸಲಾತಿಯನ್ನು ಶೇ. 3ರಿಂದ 7ಕ್ಕೆ ಹೆಚ್ಚಿಸಿರುವ ರಾಜ್ಯ ಸರ್ಕಾರದ ನಿರ್ಧಾರವು ಚಾರಿತ್ರಿಕವಾಗಿದೆ ಎಂದು ಸಚಿವ ಡಾ.ಸಿ ಎನ್ ಅಶ್ವತ್ಥನಾರಾಯಣ ( Minister Dr CN Ashwathnarayana ) ಪ್ರತಿಕ್ರಿಯಿಸಿದ್ದಾರೆ.
ಶನಿವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಂಡ ನಂತರ ಮಾತನಾಡಿದ ಅವರು, ಮೀಸಲಾತಿ ಹೆಚ್ಚಳ ಮಾಡಬೇಕು ಎನ್ನುವುದು ಈ ಸಮುದಾಯಗಳ ಬಹುದಿನಗಳ ಬೇಡಿಕೆ ಆಗಿತ್ತು. ಇದಕ್ಕೆ ಸ್ಪಂದಿಸಿ ಮೀಸಲಾತಿಯನ್ನು ಹೆಚ್ಚಿಸಲಾಗಿದೆ. ಇದು ಅತ್ಯಂತ ಸ್ವಾಗತಾರ್ಹವಾಗಿದೆ ಎಂದರು.
BIG BREAKING NEWS: `SC-ST’ ಸಮುದಾಯದ ಮೀಸಲಾತಿ ಪ್ರಮಾಣ ಹೆಚ್ಚಳಕ್ಕೆ ರಾಜ್ಯ ಸಚಿವ ಸಂಪುಟ ಗ್ರೀನ್ ಸಿಗ್ನಲ್
ನ್ಯಾಯಮೂರ್ತಿ ನಾಗಮೋಹನ್ ದಾಸ್ ಮತ್ತು ನ್ಯಾಯಮೂರ್ತಿ ಸುಭಾಷ್ ಆಡಿ ಅವರ ವರದಿಗಳ ಶಿಫಾರಸುಗಳಿಗೆ ಅನುಗುಣವಾಗಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ. ಇದರಲ್ಲಿ ಸಮಾಜದ ದುರ್ಬಲ ವರ್ಗಗಳ ಸಬಲೀಕರಣ ಮತ್ತು ಸಾಮಾಜಿಕ ನ್ಯಾಯದ ಹಿತ ಆಡಗಿದೆ ಎಂದು ಅವರು ಹೇಳಿದ್ದಾರೆ.
ಇತರೆ ಹಿಂದುಳಿದ ವರ್ಗಗಳ ಮೀಸಲಾತಿ ಪ್ರಮಾಣಕ್ಕೇನೂ ಇದರಿಂದ ಧಕ್ಕೆ ಆಗುವುದಿಲ್ಲ. ಸರ್ಕಾರವು ಸಮಾಜದ ಎಲ್ಲಾ ಸಮುದಾಯಗಳ ಏಳಿಗೆಗೂ ಬದ್ಧವಾಗಿದೆ ಎಂದು ಸಚಿವರು ನುಡಿದರು.