ಬೆಂಗಳೂರು : ಚಾಮರಾಜನಗರ, ಚಿಕ್ಕಮಂಗಳೂರು, ಹಾಸನ, ಮಂಡ್ಯ ಭಾಗದಲ್ಲಿ ಹೆಚ್ಚು ಕಾಡಾನೆ ಹಾವಳಿ ಹೆಚ್ಚಾಗಿತ್ತು. ಇದೀಗ ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲೂ ಕೂಡ ಕಾಡಾನೆ ಹಾವಳಿ ಹೆಚ್ಚಾಗಿದೆ. ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಬಳಿ ಕಾಡಾನೆ ಏಕಾಏಕಿ ನುಗ್ಗಿ ಬಂದಿದೆ.
ದೊಡ್ಡ ಹಾಲಹಳ್ಳಿ ಬಳಿಯ ಮೊರಾರ್ಜಿ ವಸತಿ ವಸತಿ ಶಾಲೆಗೆ ಕಾಡಾನೆ ಬಂದಿತ್ತು. ಬೆಂಗಳೂರು ದಕ್ಷಿಣ ಜಿಲ್ಲೆಯ ಕನಕಪುರ ತಾಲೂಕಿನ ದೊಡ್ಡ ಆಲಹಳ್ಳಿ ಬರಿ ಬಳಿ ಇರುವ ಮೊರಾರ್ಜಿ ವಸತಿ ಶಾಲೆಯ ಬಳಿ ಒಂಟಿ ಸಲಗ ಕಂಡು ಶಾಲೆಯಲ್ಲಿ ಇದ್ದಂತಹ ಮಕ್ಕಳು ಆತಂಕಕ್ಕೆ ಒಳಗಾಗಿದ್ದರು. ಎರಡು ದಿನಗಳ ಹಿಂದೆ ಈ ಒಂದು ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಕಾಡಾನೆ ಶಾಲೆ ಆವರಣಕ್ಕೆ ನುಗ್ಗಿದ್ದ ವಿಡಿಯೋ ವೈರಲ್ ಆಗಿದೆ








