ಬೆಂಗಳೂರು : ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಬಾಡಿಗೆ (ತಿದ್ದುಪಡಿ) ಸೇರಿದಂತೆ ಹಲವು ವಿಧೇಯಕಗಳಿಗೆ ಅನುಮೋದನೆ ನೀಡಲಾಗಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಬೆಂಗಳೂರಿನಂತಹ ನಗರಗಳಲ್ಲಿ ಬಾಡಿಗೆ ಮನೆಗಳ ಸಂಖ್ಯೆ ಹೆಚ್ಚಾಗುತ್ತಿರುವುದರಿಂದ, ಮಾಲೀಕರು ಮತ್ತು ಬಾಡಿಗೆದಾರರ ನಡುವೆ ಘರ್ಷಣೆಗಳು ಹೆಚ್ಚಾಗುತ್ತಿವೆ. ಇದನ್ನು ತಡೆಯಲು ಮತ್ತು ಸಮಸ್ಯೆಗಳನ್ನು ಬಗೆಹರಿಸಲು ರಾಜ್ಯ ಸರ್ಕಾರ ಕರ್ನಾಟಕ ಬಾಡಿಗೆ ತಿದ್ದುಪಡಿಗೆ ಅನುಮೋದನೆ ನೀಡಿದೆ.
ರಾಜ್ಯದಲ್ಲಿ ಬಾಡಿಗೆ ಮನೆಗಳ ನಿಯಮಗಳನ್ನ ಬದಲಾಯಿಸಲು ಸರ್ಕಾರ ಮುಂದಾಗಿದ್ದು, ಕರ್ನಾಟಕ ಬಾಡಿಗೆ ಕಾಯ್ದೆ 1999ಕ್ಕೆ ತಿದ್ದುಪಡಿ ತರಲು ನಿರ್ಧರಿಸಿದೆ. ಈ ತಿದ್ದುಪಡಿಯಿಂದ ಬಾಡಿಗೆ ಮನೆಗಳಲ್ಲಿ ವಾಸ ಮಾಡುವವರು ಹಾಗೂ ಮನೆ ಮಾಲೀಕರು ಇಬ್ಬರಿಗೂ ಹೊಸ ನಿಯಮಗಳು ಅನ್ವಯ ಆಗುತ್ತವೆ ಎಂದು ಹೇಳಲಾಗಿದೆ.
ಸಚಿವ ಸಂಪುಟದ ಪ್ರಮುಖ ನಿರ್ಣಯಗಳು
ಕೇಂದ್ರ ಸರ್ಕಾರದ 15ನೇ ಹಣಕಾಸು ಆಯೋಗದ ಯೋಜನೆಯಡಿ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳು ಇಲಾಖೆಯ ವಿಸ್ತರಣೆ ಹಾಗೂ ಆಧುನೀಕರಣದ ರೂ.329.00 ಕೋಟಿಗಳ ಪರಿಷ್ಕೃತ ಕ್ರಿಯಾ ಯೋಜನೆಗೆ ಆಡಳಿತಾತ್ಮಕ ಅನುಮೋದನೆ.
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನಲ್ಲಿ ಹೊಸದಾಗಿ ತಾಲ್ಲೂಕು ಪ್ರಜಾಸೌಧ ಕಟ್ಟಡವನ್ನು ರೂ.16 ಕೋಟಿಗಳ ಅಂದಾಜು ಮೊತ್ತದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ.
”ಶ್ರೀ ಮಲೈ ಮಹದೇಶ್ವರಸ್ವಾಮಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ಮಸೂದೆ, 2025”ಕ್ಕೆ ಅನುಮೋದನೆ.
ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ನಗರಕ್ಕೆ 2ನೇ ಹಂತದ ಒಳಚರಂಡಿ ವ್ಯವಸ್ಥೆ ಒದಗಿಸುವ ಯೋಜನೆಯ ರೂ.128.74 ಕೋಟಿಗಳ ಪರಿಷ್ಕೃತ ಡಿಪಿಆರ್‌ಗೆ ಆಡಳಿತಾತ್ಮಕ ಅನುಮೋದನೆ.
ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಘಟಕದ ಅಧೀನದಲ್ಲಿ ಹೊಸದಾಗಿ ಸ್ಥಾಪಿಸಿರುವ ಎರಡು ಐ.ಆರ್ೆ.ಬಿ ಪಡೆಗಳಿಗೆ ಅವಶ್ಯಕವಿರುವ ಮೂಲಭೂತ ವಸತಿ/ ವಸತಿಯೇತರ ಸೌಕರ್ಯಗಳನ್ನು ರೂ.60 ಕೋಟಿಗಳ ಅಂದಾಜು ವೆಚ್ಚದಲ್ಲಿ ಕಲ್ಪಿಸಲು ನಿರ್ಧಾರ.
ಇನ್‌ಸ್ಟಿಟ್ಯೂಟ್ ಆಫ್ ಗ್ಯಾಸ್ಟೋಎಂಟ್ರಾಲಜಿ ಸೈನ್ಸಸ್ ಅಂಡ್ ಆರ್ಗನ್ ಟ್ರಾನ್ಸ್‌ಪ್ಲಾಂಟ್, ಬೆಂಗಳೂರು ಸಂಸ್ಥೆಗೆ ಅವಶ್ಯವಿರುವ ರೋಬೋಟಿಕ್ ವೈದ್ಯಕೀಯ ಉಪಕರಣವನ್ನು ರೂ.20 ಕೋಟಿಗಳ ಅಂದಾಜು ಮೊತ್ತದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ.
ಮುಖ್ಯಮಂತ್ರಿ @siddaramaiah ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಕೈಗೊಂಡ ಪ್ರಮುಖ ನಿರ್ಣಯಗಳು ಹೀಗಿವೆ #CabinetDecisions pic.twitter.com/V17rWx15l2
— DIPR Karnataka (@KarnatakaVarthe) September 25, 2025