ಸುಭಾಷಿತ :

Tuesday, April 7 , 2020 7:03 PM

ಭಾರತ-ನ್ಯೂಜಿಲೆಂಡ್ ಮೊದಲ ಟೆಸ್ಟ್ : ಕಿವೀಸ್ ಗೆ 10 ವಿಕೆಟ್ ಅಂತರದ ಭರ್ಜರಿ ಗೆಲುವು


Monday, February 24th, 2020 7:02 am

ವೆಲ್ಲಿಂಗ್ಟನ್ : ಭಾರತ-ನ್ಯೂಜಿಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಕಿವೀಸ್ ತಂಡ 10 ವಿಕೆಟ್ ಗಳ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ ಎರಡು ಟೆಸ್ಟ್ ಪಂದ್ಯಗಳ ಸರಣಿಯಲ್ಲಿ 1-0 ಅಂತರದ ಮುನ್ನಡೆ ದಾಖಲಿಸಿದೆ.

144 ಕ್ಕೆ 4 ಎಂಬಲ್ಲಿದ್ದ ನಾಲ್ಕನೇ ದಿನದಾಟ ಮುಂದುವರೆಸಿದ ಭಾರತ ತಂಡ 81 ಓವರ್ ಗಳಲ್ಲಿ 191 ರನ್ ಗಳಿಗೆ ಸರ್ವಪತನ ಕಂಡಿತು. ಈ ಮೂಲಕ ನ್ಯೂಜಿಲೆಂಡ್ ಗೆ 9 ರನ್ ಗಳ ಗೆಲುವಿನ ಗುರಿ ಒಡ್ಡಿತ್ತು. ಬಳಿಕ ಗುರಿ ಬೆನ್ನಟ್ಟಿದ ಕಿವೀಸ್ 1.4 ಓವರ್ ಗಳಲ್ಲಿ ಗೆಲುವು ಗುರಿ ತಲುಪಿತು.

ಕಿವೀಸ್ ಪರ 2 ನೇ ಇನ್ನಿಂಗ್ಸ್ ನಲ್ಲಿ ಮಾರಕ ಬೌಲಿಂಗ್ ಸಂಘಟಿಸಿದ ಟಿಮ್ ಸೌಧಿ 61 ರನ್ ಗೆ 5 ವಿಕೆಟ್ ಪಡೆದರು. ಈ ಮೂಲಕ ಮೊದಲ ಟೆಸ್ಟ್ ಪಂದ್ಯದಲ್ಲಿ 9 ವಿಕೆಟ್ ಸಾಧನೆ ಮಾಡಿದರು.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Health
Sandalwood
Food
Beauty Tips
Astrology
Cricket Score
Poll Questions