ಬೆಂಗಳೂರು: ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ಆಗಸ್ಟ್.15ರ ನಾಳೆ 79ನೇ ಸ್ವಾತಂತ್ರ್ಯ ದಿನಾಚರಣೆ ನಡೆಯಲಿದೆ. ಇದೇ ಮೊದಲ ಬಾರಿಗೆ ಈ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಪಾಲ್ಗೊಳ್ಳುವಂತ ಸಾರ್ವಜನಿಕರಿಗೆ ಇ-ಪಾಸ್ ವ್ಯವಸ್ಥೆ ಮಾಡಲಾಗಿದೆ.
ಬೆಂಗಳೂರಿನ ಫೀಲ್ಡ್ ಮಾರ್ಷಲ್ ಮಾಣಿಕ್ ಶಾ ಪೆರೇಡ್ ಮೈದಾನದಲ್ಲಿ ಆಗಸ್ಟ್ 15ರಂದು ನಡೆಯುವ ಸ್ವಾತಂತ್ರ್ಯ ದಿನಾಚರಣೆಗೆ ಇದೇ ಮೊದಲ ಬಾರಿಗೆ ಸಾರ್ವಜನಿಕರು ಭಾಗವಹಿಸಲು ಅವಕಾಶ ಕಲ್ಪಿಸಲಾಗಿದೆ.
ಆಸಕ್ತರು ಸೇವಾಸಿಂಧು ವೆಬ್‌ಸೈಟ್‌ನಲ್ಲಿ ನೋಂದಾಯಿಸಿಕೊಂಡು, ಕಲೆ, ಸಾಹಿತ್ಯ, ಸಂಸ್ಕೃತಿಯ ಸೊಬಗನ್ನು ಕಣ್ತುಂಬಿಕೊಳ್ಳಬಹುದಾಗಿದೆ.
– ಮುಖ್ಯಮಂತ್ರಿ… pic.twitter.com/l7Ma1Ym5Cf— CM of Karnataka (@CMofKarnataka) August 14, 2025
ಈ ಕುರಿತಂತೆ ಕರ್ನಾಟಕ ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂಗಳೂರು ನಗರದಲ್ಲಿ ದಿನಾಂಕ:15/08/2025 ರಂದು ಫೀಲ್ಡ್ ಮಾರ್ಷಲ್ ಮಾಣಿಕ್ ಷಾ ಪರೇಡ್ ಮೈದಾನದಲ್ಲಿ ನಡೆಯಲಿರುವ ರಾಜ್ಯಮಟ್ಟದ 79ನೇ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮಕ್ಕೆ ಪ್ರಥಮ ಬಾರಿಗೆ E-Pass ವ್ಯವಸ್ಥೆ ಕಲ್ಪಿಸಲಾಗಿದೆ ಎಂದಿದೆ.
ಸದರಿ ಕಾರ್ಯಕ್ರಮವನ್ನು ವೀಕ್ಷಿಸಲು ಆಸಕ್ತಿ ಹೊಂದಿರುವ ಸಾರ್ವಜನಿಕರು ಸೇವಾ ಸಿಂಧು ವೆಬ್‌ಸೈಟ್ www.sevasindhu.karnataka.gov.in ನಿಂದ ಇ-ಪಾಸ್ ಅನ್ನು ಪಡೆಯಬಹುದು ಹಾಗೂ ಇ-ಪಾಸ್ ಅನ್ನು ಪಡೆಯಲು ಸೇವಾ ಸಿಂಧು ವೆಬ್‌ಸೈಟ್‌ನಲ್ಲಿ ಆಧಾರ್ ಕಾರ್ಡ್‌ನ ವಿವರಗಳನ್ನು ನಮೂದಿಸಿ ನೋಂದಾಯಿಸಿಕೊಳ್ಳತಕ್ಕದ್ದು ಮತ್ತು ವೆಬ್‌ಸೈಟ್‌ನಲ್ಲಿ ಲಾಗಿನ್ ಮಾಡಿ ನಿಮ್ಮ ಮೊಬೈಲ್ ಸಂಖ್ಯೆಯನ್ನು ನಮೂದಿಸಿದ ನಂತರ ಬರುವ OTP ಅನ್ನು ಅಳವಡಿಸಿ E-Pass ಅನ್ನು download ಮಾಡಿಕೊಳ್ಳಬಹುದೆಂದು ಈ ಮೂಲಕ ಸಾರ್ವಜನಿಕರ ಅವಗಾಹನೆಗಾಗಿ ಪ್ರಕಟಣೆಯನ್ನು ಹೊರಡಿಸಿದೆ.
ವಿಶೇಷ ಸೂಚನೆ
ಇ-ಪಾಸ್ ಕೇವಲ 15/08/2025 ರಂದು ಮಾನ್ಯವಾಗಿರುತ್ತದೆ.
> ಇ-ಪಾಸ್ ಹೊಂದಿರುವವರು ಬೆಳಿಗ್ಗೆ 08:15 AM ಗಿಂತ ಮೊದಲು ಗೇಟ್ ನಂ.4ರ ಬಳಿ ಆವರಣದ ಒಳಗೆ ಪ್ರವೇಶಿಸಬೇಕು. ಈ ಸಮಯದ ನಂತರ ಪ್ರವೇಶ > ಅನುಮತಿಸಲಾಗುವುದಿಲ್ಲ ಹಾಗೂ ಇ-ಪಾಸ್ ಅಮಾನ್ಯವೆಂದು ಪರಿಗಣಿಸಲಾಗುತ್ತದೆ.
> ಪ್ರತಿ ಇ-ಪಾಸ್ ಕೇವಲ ಒಬ್ಬರಿಗೆ ಮಾತ್ರ ಪ್ರವೇಶಿಸಲು ಅನುಮತಿಸಿದೆ.
> ಕಾರ್ಯಕ್ರಮದ ಸಮಯದಲ್ಲಿ ಇ-ಪಾಸ್ ಮುದ್ರಿತ ಪ್ರತಿ ಅಥವಾ ಡಿಜಿಟಲ್ (ಮೊಬೈಲ್) ಪ್ರತಿಯನ್ನು ಕಡ್ಡಾಯವಾಗಿ ಹೊಂದಿರಬೇಕು.
> 6 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಇ-ಪಾಸ್ ಅವಶ್ಯವಿರುವುದಿಲ್ಲ.
> ಇ-ಪಾಸ್ ಅನ್ನು ವರ್ಗಾಯಿಸುವಂತಿಲ್ಲ.
> ಇ-ಪಾಸ್‌ಗಳು ಒಟ್ಟು 3000 ಸಂಖ್ಯೆಗೆ ಸೀಮಿತವಾಗಿರುವುದರಿಂದ “ಮೊದಲು ಬಂದವರಿಗೆ ಮೊದಲ ಆದ್ಯತೆ” ನೀಡಲಾಗುತ್ತದೆ.
> ಮೂಲ ಗುರುತಿನ ಚೀಟಿ (Original ID card) ಕಡ್ಡಾಯವಾಗಿ ಹೊಂದಿರಬೇಕು.
> ಇ-ಪಾಸ್ ಹೊಂದಿರುವವರಿಗೆ ಪಾರ್ಕಿಂಗ್ ಸೌಲಭ್ಯ ಒದಗಿಸಲಾಗುವುದಿಲ್ಲ.
> ಪಾರ್ಕಿಂಗ್ ವ್ಯವಸ್ಥೆಗೆ ಪಾಸ್‌ಧಾರರೇ ಜವಾಬ್ದಾರರಾಗಿರುತ್ತಾರೆ ಎಂಬುದಾಗಿ ತಿಳಿಸಿದೆ.
ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ 9 IAF ಅಧಿಕಾರಿಗಳಿಗೆ ವೀರ ಚಕ್ರ ಪದಕ
ಆಪರೇಷನ್ ಸಿಂಧೂರ್ ಕಾರ್ಯಾಚರಣೆಯಲ್ಲಿ ಭಾಗಿಯಾಗಿದ್ದ 9 IAF ಅಧಿಕಾರಿಗಳಿಗೆ ವೀರ ಚಕ್ರ ಪದಕ