ನವದೆಹಲಿ: ಮ್ಯಾನ್ಮಾರ್ ನಲ್ಲಿ ಶುಕ್ರವಾರ ಸಂಭವಿಸಿದ 7.7 ತೀವ್ರತೆಯ ಭೂಕಂಪದ ನಂತರ ಭಾರತವು ಪರಿಹಾರ ಸಾಮಗ್ರಿಗಳನ್ನು ಶನಿವಾರ ಮ್ಯಾನ್ಮಾರ್ ಗೆ ಹಸ್ತಾಂತರಿಸಿದೆ
ಮ್ಯಾನ್ಮಾರ್ನಲ್ಲಿನ ಭಾರತದ ರಾಯಭಾರಿ ಅಭಯ್ ಠಾಕೂರ್ ಅವರು ಯಾಂಗೊನ್ ಮುಖ್ಯಮಂತ್ರಿ ಯು ಸೋ ಥೀನ್ ಅವರಿಗೆ ಪರಿಹಾರ ಸಾಮಗ್ರಿಗಳನ್ನು ಹಸ್ತಾಂತರಿಸಿದರು.
ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ಅವರು ಎಕ್ಸ್ನಲ್ಲಿ ಪೋಸ್ಟ್ ಮಾಡಿ, “ಆಪರೇಷನ್ ಬ್ರಹ್ಮ: ಭಾರತವು ಪರಿಹಾರ ಸಾಮಗ್ರಿಗಳನ್ನು ಮ್ಯಾನ್ಮಾರ್ಗೆ ಹಸ್ತಾಂತರಿಸಿದೆ. ಯಾಂಗೊನ್ ನಲ್ಲಿ ರಾಯಭಾರಿ ಅಭಯ್ ಠಾಕೂರ್ ಅವರು ಪರಿಹಾರ ಸಾಮಗ್ರಿಗಳ ಮೊದಲ ರವಾನೆಯನ್ನು ಯಾಂಗೊನ್ ಮುಖ್ಯಮಂತ್ರಿ ಯು ಸೋ ಥೀನ್ ಅವರಿಗೆ ಔಪಚಾರಿಕವಾಗಿ ಹಸ್ತಾಂತರಿಸಿದರು” ಎಂದಿದ್ದಾರೆ.