ಬೆಂಗಳೂರು : ಇಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮಣಿಪುರದಿಂದ ಭಾರತ ಜೋಡೋ ನ್ಯಾಯ ಯಾತ್ರೆ ಆರಂಭಿಸಿದ್ದು ಇದಕ್ಕೆ ವಿಪಕ್ಷ ನಾಯಕ ಆರ್ ಅಶೋಕ್ ತಿರುಗೇಟು ನೀಡಿದ್ದು, ಇದು ಭಾರತ ಜೋಡೋ ನ್ಯಾಯ ಯಾತ್ರೆ ಅಲ್ಲ ಡೋಂಗಿ ಯಾತ್ರೆ ಎಂದು ವ್ಯಂಗ್ಯವಾಡಿದರು.
ರಾಹುಲ್ ಗಾಂಧಿ ಯಾತ್ರೆ ಡೋಂಗಿ ಯಾತ್ರೆ ಎಂದು ಅಶೋಕ ವ್ಯಂಗ್ಯವಾಡಿದ್ದು ಕಾಂಗ್ರೆಸ್ ಯಾತ್ರೆಗೆ ವಿಪಕ್ಷ ನಾಯಕ ಆರ್ ಅಶೋಕ್ ಕಿಡಿ ಕಾರಿದ್ದಾರೆ.
ಅವರಿಗೆ ನ್ಯಾಯ ಕೇಳುವುದಕ್ಕೆ ಯಾವುದೇ ನೈತಿಕತೆಯೇ ಇಲ್ಲ ಬೆಂಗಳೂರಿನಲ್ಲಿ ವಿಪಕ್ಷ ನಾಯಕ ಆರ್ ಅಶೋಕ್ ಕಾಂಗ್ರೆಸ್ ಹಾಗೂ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು.
ಇನ್ನು ಸಂಸದ ಅನಂತ್ ಕುಮಾರ್ ಹೆಗಡೆ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿರುವ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ವೈಯಕ್ತಿಕ ನಿಂದಲೇ ಸರಿಯಲ್ಲ ಇದನ್ನಷ್ಟೇ ನಾನು ಹೇಳುತ್ತೇನೆ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಹೇಳಿದರು ಸಿಎಂ ನಡವಳಿಕೆ ಖಂಡಿಸುವುದನ್ನು ನಾನು ಒಪ್ಪಿಕೊಳ್ಳುತ್ತೇನೆ ಆದರೆ ವೈಯಕ್ತಿಕ ನಿಂದನೆಯನ್ನು ಯಾವುದೇ ಪಕ್ಷ ಸಹಿಸುವುದಿಲ್ಲ ನಮ್ಮ ಪಕ್ಷ ಸಹ ಅದನ್ನು ಒಪ್ಪಿಕೊಳ್ಳುವುದಿಲ್ಲ ಎಂದು ಆಶೋಕ್ ತಿಳಿಸಿದರು.