ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ಹಿನ್ನೆಲೆಯಲ್ಲಿ, ಭಾರತವು ಮುಂದಿನ ದಿನಗಳಲ್ಲಿ ಕದನ ವಿರಾಮವನ್ನು ನಿಲ್ಲಿಸುವುದಾಗಿ ಘೋಷಿಸಬಹುದು ಎಂಬುದಾಗಿ ಸರ್ಕಾರಿ ಮೂಲಗಳಿಂದ ತಿಳಿದು ಬಂದಿದೆ.
ಗಡಿ ನಿಯಂತ್ರಣ ರೇಖೆ ಮತ್ತು ಅಂತರರಾಷ್ಟ್ರೀಯ ಗಡಿಯುದ್ದಕ್ಕೂ ಪಾಕಿಸ್ತಾನವು ತನ್ನ ಬದ್ಧತೆಗಳನ್ನು ಪಾಲಿಸಲು ಸಾಧ್ಯವಾಗದ ಕಾರಣ ಇದನ್ನು ಗಂಭೀರವಾಗಿ ಪರಿಗಣಿಸುತ್ತಿದೆ ಎಂದು ಸರ್ಕಾರದ ಉನ್ನತ ಮೂಲಗಳಿಂದ ತಿಳಿದು ಬಂದಿದೆ.
ಅಂದಹಾಗೆ ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಏಪ್ರಿಲ್.22ರಂದು ಭಯೋತ್ಪಾದಕರು ಅಟ್ಟಹಾಸ ಮೆರೆದಿದ್ದರು. ಗುಂಡಿನ ದಾಳಿಯಲ್ಲಿ 26 ಪ್ರವಾಸಿಗರು ಮೃತಪಟ್ಟಿದ್ದರು.
BREAKING: ಇನ್ಮುಂದೆ ಮಲೆ ಮಹದೇಶ್ವರ ಬೆಟ್ಟ ಮದ್ಯಪಾನ ಪಾನ ಮುಕ್ತ: ಸಿಎಂ ಸಿದ್ಧರಾಮಯ್ಯ ಘೋಷಣೆ
ಚಾಮರಾಜನಗರಕ್ಕೆ ಅಂಟಿರುವ ಹಿಂದುಳಿದ ಜಿಲ್ಲೆ ಹಣೆಪಟ್ಟಿ ನಿರ್ಮೂಲನೆಗೆ ನಮ್ಮ ಸರ್ಕಾರ ಬದ್ಧ: ಡಿಸಿಎಂ ಡಿಕೆಶಿ