ನವದೆಹಲಿ : ದೇಶಾದ್ಯಂತ ತಾಪಮಾನ ಹೆಚ್ಚಳವಾಗಿದ್ದು, ಸಾರ್ವಜನಿಕರ ಆರೋಗ್ಯದ ಕುರಿತು ಭಾರತೀಯ ಹವಾಮಾನ ಇಲಾಖೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಭಾರತ ಹವಾಮಾನ ಇಲಾಖೆ (IMD) ಯು ಪ್ರಸಕ್ತ ವರ್ಷದಲ್ಲಿ ಅತೀ ಹೆಚ್ಚು ತಾಪಮಾನ (heat wave) ಕುರಿತು ಹೊರಡಿಸಿದ ಮುನ್ಸೂಚನೆ ಅನ್ವಯ ದೇಶದ ಹೆಚ್ಚಿನ ಭಾಗಗಳಲ್ಲಿ ಸಾಮಾನ್ಯ ಗರಿಷ್ಠ ತಾಪಮಾನವನ್ನು ಸೂಚಿಸುತ್ತದೆ. ಪ್ರಸ್ತುತ, ರಾಜ್ಯದ ಉತ್ತರ ಒಳನಾಡು, ದಕ್ಷಿಣ ಒಳನಾಡು ಮತ್ತು ಕರಾವಳಿ ಪ್ರದೇಶಗಳ ಕೆಲವು ಭಾಗಗಳಲ್ಲಿ ಸಾಮಾನ್ಯ ತಾಪಮಾನಕ್ಕಿಂತ 2-3 ಡಿಗ್ರಿಗಳಷ್ಟು ಅಧಿಕ ತಾಪಮಾನ ದಾಖಲಾಗುತ್ತಿದ್ದು, ಇದು ಮಾನವ ಹಾಗೂ ಪ್ರಾಣಿಗಳ ಆರೋಗ್ಯಕ್ಕೆ ಹಾನಿಕಾರಕವಾಗಿದೆ. ಭಾರತೀಯ ಹವಾಮಾನ ಇಲಾಖೆ (IMD)ಯು 2024 ರ ಏಪ್ರಿಲ್ 01 ರಂದು ಬಿಡುಗಡೆ ಮಾಡಲಾದ ಹವಾಮಾನ ಸಂಭವನೀಯತೆಯ ಮುನ್ನೋಟವನ್ನು ಆಧರಿಸಿ, ಕರ್ನಾಟಕ ರಾಜ್ಯದಲ್ಲಿ ಏಪ್ರಿಲ್ ಮಾಹೆಯಿಂದ ಮೇ- 2024 ರ ಅವಧಿಯಲ್ಲಿ ಮುಂಬರುವ ಬಿಸಿ ವಾತಾವರಣವು ಸಾಮಾನ್ಯ ತಾಪಮಾನಕ್ಕಿಂತ ಹೆಚ್ಚಾಗಿ ಇರುತ್ತದೆ ಎಂದು ಸೂಚಿಸಿರುತ್ತದೆ.
ತಾಪಮಾನದ ಮುನ್ಸೂಚನೆಯ ಹೆಚ್ಚಳವು ರಾಜ್ಯದಾದ್ಯಂತ ಸಾಮಾನ್ಯ ಶಾಖದ ಅಲೆಗಳ ದಿನಗಳನ್ನು 2-14 ದಿನಗಳು ಮೀರುವ ಸಾಧ್ಯತೆಯಿದೆ. ಅಲ್ಲದೇ, ಈಗಾಗಲೇ ರಾಜ್ಯದಲ್ಲಿ 223 ತಾಲ್ಲೂಕುಗಳನ್ನು ಬರಪೀಡಿತ ತಾಲ್ಲೂಕುಗಳೆಂದು ಘೋಷಣೆ ಮಾಡಿರುವುದರಿಂದ, ಅತೀ ಹೆಚ್ಚು ತಾಪಮಾನ (heat wave) ಪ್ರತಿಕೂಲ ಪರಿಣಾಮವನ್ನು ತಡೆಗಟ್ಟಲು ಮತ್ತು ತಗ್ಗಿಸಲು ಸಲಹೆಗಳನ್ನು ನೀಡುವುದು ಅವಶ್ಯವಿರುತ್ತದೆಂದು ತೀರ್ಮಾನಿಸಿದೆ. ಅದರಂತೆ, ಈ ಕೆಳಕಂಡ ಸಲಹೆ | ಸೂಚನೆಗಳನ್ನು ನೀಡಿದೆ:
I ಅತೀ ಹೆಚ್ಚು ತಾಪಮಾನದಿಂದ (heat wave) ಉಂಟಾಗುವ ಅನಾರೋಗ್ಯವನ್ನು ತಡೆಗಟ್ಟಲು ಸಾಮಾನ್ಯ ಸೂಚನೆಗಳು:
i. ಸಾಧ್ಯವಾದಷ್ಟು ಮಟ್ಟಿಗೆ ವಿಶೇಷವಾಗಿ ಗರಿಷ್ಠ ತಾಪಮಾನದ ಅವಧಿಯಲ್ಲಿ ಬಿಸಿಲಿನಲ್ಲಿ ಹೋಗುವುದನ್ನು ತಪ್ಪಿಸುವುದು (ಮಧ್ಯಾಹ್ನ 12:00 ರಿಂದ 3.00 ರವರೆಗೆ).
(heat wave) ತಡೆಗಟ್ಟುವ ಕಿಟ್‌ಅನ್ನು ಒಯ್ಯಲು ನಾಗರಿಕರನ್ನು ಪ್ರೋತ್ಸಾಹಿಸುವುದು.
II. ಕಾಲಕಾಲಕ್ಕೆ, ಸಾಕಷ್ಟು ನೀರು ಕುಡಿಯುವುದು.
ill. ಹಗುರವಾದ, ತಿಳಿ ಬಣ್ಣದ ಸಡಿಲವಾದ ಮತ್ತು ಹತ್ತಿ ಬಟ್ಟಗಳನ್ನು ಧರಿಸುವುದು.
iv. ಬಿಸಿಲಿನಲ್ಲಿ ಹೋಗುವಾಗ ರಕ್ಷಣೆಗಾಗಿ ಕನ್ನಡಕಗಳು, ಛತ್ರಿ / ಟೋಪಿ, ಬೂಟುಗಳು ಅಥವಾ ಚಪ್ಪಲಿಗಳನ್ನು ಬಳಸುವುದು.
V. ಹೊರಗಿನ ಉಷ್ಣತೆಯು ಅಧಿಕವಾಗಿರುವಾಗ ಶ್ರಮದಾಯಕ ಚಟುವಟಿಕೆಗಳನ್ನು ತಪ್ಪಿಸುವುದು (ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಹೊರಗೆ ಕೆಲಸ ಮಾಡುವುದನ್ನು).
vi. ಪ್ರಯಾಣ ಮಾಡುವಾಗ, ನೀರನ್ನು ಜೊತೆಯಲ್ಲಿ ಒಯ್ಯುವುದು.
vii. ದೇಹವನ್ನು ನಿರ್ಜಲೀಕರಣಗೊಳಿಸುವ ಆಲೋಹಾಲ್, ಚಹಾ, ಕಾಫಿ ಮತ್ತು ಕಾರ್ಬೊನೇಟೆಡ್ ತಂಪು ಪಾನೀಯಗಳನ್ನು ತಪ್ಪಿಸುವುದು.
vii. ಸಾಧ್ಯವಾದಷ್ಟು ಬಿಸಿ ಆಹಾರವನ್ನು ಸೇವಿಸುವುದು.
ix. ನಿಲ್ಲಿಸಿದ ವಾಹನಗಳಲ್ಲಿ ಮಕ್ಕಳನ್ನು ಅಥವಾ ಸಾಕುಪ್ರಾಣಿಗಳನ್ನು ಬಿಡದಿರುವುದು.
x. ಮೂರ್ಛ ಅಥವಾ ಅನಾರೋಗ್ಯ ಅನಿಸಿದರೆ ತಕ್ಷಣ ವೈದ್ಯರನ್ನು ಭೇಟಿಮಾಡುವುದು.
xi. ನಿಂಬೆ ನೀರು, ಮಜ್ಜಿಗೆ ಮುಂತಾದ ಮನೆಯಲ್ಲಿ ತಯಾರಿಸಿದ ಪಾನೀಯಗಳು ಮತ್ತು ORS ಅನ್ನು ಬಳಸುವುದು.
xii. ಸಾಕುಪ್ರಾಣಿಗಳನ್ನು ನೆರಳಿನಲ್ಲಿ ಇರಿಸಿ ಮತ್ತು ಅವುಗಳಿಗೆ ಕುಡಿಯಲು ಸಾಕಷ್ಟು ನೀರು ಒದಗಿಸುವುದು.
xil. ಮನೆಯನ್ನು ತಂಪಾಗಿರಿಸಲು ಪರದೆಗಳು, ಶಟರ್‌ಗಳು ಅಥವಾ ಸನ್‌ಶೇಡ್‌ಗಳನ್ನು ಬಳಸುವುದು. ಹಾಗೂ ಆಗ್ತಿಂದಾಗ ತಣ್ಣೀರು ಸ್ನಾನ ಮಾಡುವುದು.
xiv. ಹೊರಗೆ ಹೋಗುವಾಗ ನೀರಿನ ಬಾಟಲಿ, ಛತ್ರಿ / ಟೋಪಿ ಅಥವಾ ಕ್ಯಾಪ್ / ಹೆಡ್ನವರ್, ಹ್ಯಾಂಡ್ನವೆಲ್, ಹ್ಯಾಂಡ್ಯಾನ್, ಎಲೆಕ್ಟೋಲೈಟ್ / ಗ್ಲೋಕೋಸ್ / ORS ಅನ್ನು ಒಳಗೊಂಡಿರುವ ಅತೀ ಹೆಚ್ಚು ತಾಪಮಾನವನ್ನು (heat wave) ತಡೆಗಟ್ಟುವ ಕಿಟ್‌ಅನ್ನು ಒಯ್ಯಲು ನಾಗರಿಕರನ್ನು ಪ್ರೋತ್ಸಾಹಿಸುವುದು.