ನವದೆಹಲಿ: ಭಾರತವು “ಗುಲಾಮಗಿರಿಯ ಮನಸ್ಥಿತಿ(mentality of slavery)” ಯಿಂದ ಹಿಂದೆ ಸರಿಯುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಬುಧವಾರ ಹೇಳಿದ್ದಾರೆ ಮತ್ತು ಭಾರತದ ಶ್ರೀಮಂತ ಪರಂಪರೆಯನ್ನು ಅಳವಡಿಸಿಕೊಳ್ಳುವಂತೆ ದೇಶದ ಯುವಜನರಿಗೆ ಪ್ರೇರೇಪಿಸಿದ್ದಾರೆ ಎಂದು ಪ್ರಧಾನಿ ಕಾರ್ಯಾಲಯದ ಪತ್ರಿಕಾ ಪ್ರಕಟಣೆ ತಿಳಿಸಿದೆ.
ನವದೆಹಲಿಯಲ್ಲಿ ರಾಷ್ಟ್ರೀಯ ಕೆಡೆಟ್ ಕಾರ್ಪ್ಸ್ (ಎನ್‌ಸಿಸಿ) ಕೆಡೆಟ್‌ಗಳು ಮತ್ತು ರಾಷ್ಟ್ರೀಯ ಸೇವಾ ಯೋಜನೆ (ಎನ್‌ಎಸ್‌ಎಸ್) ಸ್ವಯಂಸೇವಕರನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, “ನೀವು ಚಿಕ್ಕವರು, ಇದು ನಿಮ್ಮ ಭವಿಷ್ಯವನ್ನು ರೂಪಿಸುವ ಸಮಯ. ನೀವು ಹೊಸ ಆಲೋಚನೆಗಳು ಮತ್ತು ಹೊಸ ಮಾನದಂಡಗಳ ಸೃಷ್ಟಿಕರ್ತರು” ಎಂದಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
‘ನಮ್ಮ ಪರಂಪರೆಯಲ್ಲಿ ಹೆಮ್ಮೆ ಮತ್ತು ಗುಲಾಮಗಿರಿಯ ಮನಸ್ಥಿತಿಯಿಂದ ಮುಕ್ತಿ’ ಎಂಬ ನಿರ್ಣಯವನ್ನು ಪ್ರಸ್ತಾಪಿಸಿದ ಮೋದಿ, ಯುವಕರ ಪಾತ್ರ, ಭವಿಷ್ಯದ ಗುರಿಗಳು ಮತ್ತು ನಿರ್ಣಯಗಳು ದೇಶಕ್ಕೆ ಅತ್ಯಂತ ಮಹತ್ವ. ದೇಶದಲ್ಲಿ ಆಗುತ್ತಿರುವ ಬದಲಾವಣೆಗಳ ಬಗ್ಗೆ ಯುವಜನರು ಜಾಗೃತರಾಗಬೇಕು ಮತ್ತು ನಡೆಯುತ್ತಿರುವ ಅಭಿಯಾನಗಳಲ್ಲಿ ಉತ್ಸಾಹದಿಂದ ಭಾಗವಹಿಸುವಂತೆ ಅವರು ಕರೆ ನೀಡಿದರು.
BIGG NEWS : ಇಂದು 74 ನೇ ಗಣರಾಜ್ಯೋತ್ಸವ : ಯಾವ ಜಿಲ್ಲೆಯಲ್ಲಿ ಯಾವ ಸಚಿವರಿಂದ ಧ್ವಜಾರೋಹಣ? ಇಲ್ಲಿದೆ ಮಾಹಿತಿ
BIGG NEWS : ರೈತರಿಗೆ ಗುಡ್ ನ್ಯೂಸ್ : ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜೋಳ ಖರೀದಿ
BIGG NEWS : ಇಂದು 74 ನೇ ಗಣರಾಜ್ಯೋತ್ಸವ : ಯಾವ ಜಿಲ್ಲೆಯಲ್ಲಿ ಯಾವ ಸಚಿವರಿಂದ ಧ್ವಜಾರೋಹಣ? ಇಲ್ಲಿದೆ ಮಾಹಿತಿ
BIGG NEWS : ರೈತರಿಗೆ ಗುಡ್ ನ್ಯೂಸ್ : ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜೋಳ ಖರೀದಿ