ನವದೆಹಲಿ: ರಾಷ್ಟ್ರಪತಿ ರಾಮನಾಥ್ ಕೋವಿಂದ್ (Ram Nath Kovind) ಅವರ ಅಧಿಕಾರಾವಧಿ ಜು. 24ಕ್ಕೆ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಹೊಸ ರಾಷ್ಟ್ರಪತಿ ಆಯ್ಕೆಗೆ ಜು. 18ರಂದು ಮತದಾನ ನಡೆದಿತ್ತು. ಇಂದು ಅದರ ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ.
ಸಂಸತ್ ಭವನದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಭಾರತದ 15 ನೇ ರಾಷ್ಟ್ರಪತಿ ಯಾರಾಗಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ.
ಬಿಜೆಪಿ ನೇತೃತ್ವದ ಎನ್ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು(Draupadi Murmu) ಮತ್ತು ವಿರೋಧ ಪಕ್ಷದ ಅಭ್ಯರ್ಥಿ ಯಶವಂತ್ ಸಿನ್ಹಾ(Yashwant Sinha) ನಡುವೆ ಸ್ಪರ್ಧೆ ಏರ್ಪಟ್ಟಿದೆ. ಎನ್ಡಿಎ ಅಭ್ಯರ್ಥಿಗೆ ಸ್ಪರ್ಧೆಯಲ್ಲಿ ಸ್ಪಷ್ಟವಾದ ಬಲವಿದೆ ಎನ್ನಲಾಗಿದೆ.
ಬುಡಕಟ್ಟು ಜನಾಂಗದ ನಾಯಕಿ ಹಾಗೂ ಜಾರ್ಖಂಡ್ನ ಮಾಜಿ ರಾಜ್ಯಪಾಲರಾಗಿದ್ದ ದ್ರೌಪದಿ ಮುರ್ಮು ಅವರು ಆಯ್ಕೆಯಾದರೆ ರಾಷ್ಟ್ರಪತಿ ಹುದ್ದೆ ಅಲಂಕರಿಸುವ ಎರಡನೇ ಮಹಿಳೆ ಮತ್ತು ಬುಡಕಟ್ಟು ಜನಾಂಗದ ಮೊದಲ ಮಹಿಳೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಲಿದ್ದಾರೆ.
ಸೋಮವಾರ ಸಂಸತ್ ಭವನ, ಪುದುಚೇರಿ ಮತ್ತು ದೆಹಲಿಯ ಕೇಂದ್ರಾಡಳಿತ ಪ್ರದೇಶಗಳಲ್ಲದೇ, ಎಲ್ಲಾ ರಾಜ್ಯಗಳ ರಾಜಧಾನಿಗಳಲ್ಲಿ ಗೊತ್ತುಪಡಿಸಿದ ಸ್ಥಳಗಳಲ್ಲಿ ಮತದಾನ ಸುಗಮವಾಗಿ ಕೊನೆಗೊಂಡಿತು.
BIGG NEWS : ರಾಜ್ಯದಲ್ಲಿ ಮಳೆಯಿಂದ ಬೆಳೆ ನಷ್ಟವಾದ ರೈತರಿಗೆ ಸಿಹಿಸುದ್ದಿ : ಮತ್ತೊಮ್ಮೆ ಬೀಜ, ಗೊಬ್ಬರ ವಿತರಣೆ
BIGG NEWS : ಜುಲೈ 24 ರಿಂದ ಸಿಎಂ ಬೊಮ್ಮಾಯಿ 3 ದಿನ ದೆಹಲಿ ಪ್ರವಾಸ : ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚೆ!