ಮುಂಬೈ : ಭಾರತ ಮಹಿಳಾ ಕ್ರಿಕೆಟ್ ತಂಡ ಮತ್ತೊಮ್ಮೆ ಏಷ್ಯಾಕಪ್ನಲ್ಲಿ ತನ್ನ ಪ್ರಾಬಲ್ಯವನ್ನು ಕಾಯ್ದುಕೊಳ್ಳಲಿದೆ. ಜುಲೈ 19ರಿಂದ ಆರಂಭವಾಗಲಿರುವ ಈ ಟೂರ್ನಿಗೆ ಭಾರತ ತಂಡವನ್ನು ಬಿಸಿಸಿಐ ಪ್ರಕಟಿಸಿದೆ.
ಶ್ರೀಲಂಕಾದಲ್ಲಿ ನಡೆಯಲಿರುವ ಮಹಿಳಾ ಟಿ 20 ಏಷ್ಯಾ ಕಪ್ ಗಾಗಿ ಹರ್ಮನ್ ಪ್ರೀತ್ ಕೌರ್ 15 ಸದಸ್ಯರ ಭಾರತ ತಂಡವನ್ನು ಮುನ್ನಡೆಸಲಿದ್ದಾರೆ. ಭಾರತ 7 ಬಾರಿ ಪ್ರಶಸ್ತಿ ಗೆದ್ದಿದೆ. ಟೀಮ್ ಇಂಡಿಯಾದ ಕಣ್ಣುಗಳು 8 ನೇ ಬಾರಿಗೆ ಹೆಸರು ಮಾಡುವತ್ತ ನೆಟ್ಟಿವೆ.
ಏಷ್ಯಾಕಪ್ ಟೂರ್ನಿಗೆ ಭಾರತ ಮಹಿಳಾ ತಂಡ ಪ್ರಕಟಗೊಂಡಿದೆ. ನಾಯಕತ್ವ ಮತ್ತೊಮ್ಮೆ ಹರ್ಮನ್ ಪ್ರೀತ್ ಕೌರ್ ಕೈಸೇರಲಿದೆ. ಸ್ಫೋಟಕ ಬ್ಯಾಟರ್ ಹರ್ಮನ್ಪ್ರೀತ್ ಪ್ರಸ್ತುತ ಚೆನ್ನೈನಲ್ಲಿ ನಡೆಯುತ್ತಿರುವ ದಕ್ಷಿಣ ಆಫ್ರಿಕಾ ವಿರುದ್ಧದ ಟಿ 20 ಸರಣಿಯಲ್ಲಿ ಆಡುತ್ತಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಅತ್ಯುತ್ತಮ ಫಾರ್ಮ್ ನಲ್ಲಿರುವ ಆರಂಭಿಕ ಆಟಗಾರ್ತಿ ಸ್ಮೃತಿ ಮಂದಾನ ಅವರನ್ನು ಉಪನಾಯಕರನ್ನಾಗಿ ಮಾಡಲಾಗಿದೆ. ಶ್ವೇತಾ ಸೆಹ್ರಾವತ್, ಸೈಕಾ ಇಶಾಕ್, ತನುಜಾ ಕನ್ವರ್ ಮತ್ತು ಮೇಘನಾ ಸಿಂಗ್ ಅವರನ್ನು ಮೀಸಲು ಆಟಗಾರರಾಗಿ ಹೆಸರಿಸಲಾಗಿದೆ.
ಭಾರತ ತಂಡ:
ಹರ್ಮನ್ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂದಾನ (ಉಪನಾಯಕಿ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರೋಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ಉಮಾ ಛೆಟ್ರಿ (ವಿಕೆಟ್ ಕೀಪರ್), ಪೂಜಾ ವಸ್ತ್ರಾಕರ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ದಯಾಳನ್ ಹೇಮಲತಾ, ಆಶಾ ಶೋಭನಾ, ರಾಧಾ ಯಾದವ್, ಶ್ರೇಯಂಕಾ ಪಾಟೀಲ್, ಸಜ್ನಾ ಸಜೀವನ್.
A look at the @ImHarmanpreet-led squad for #WomensAsiaCup2024 in Sri Lanka 👌👌#TeamIndia | #ACC pic.twitter.com/g77PSc45XA
— BCCI Women (@BCCIWomen) July 6, 2024