ಸುಭಾಷಿತ :

Monday, March 30 , 2020 12:44 AM

‘INDIAN-2’ ಸಿನಿಮಾ ದುರಂತ : ಮೃತರ ಕುಟುಂಬಕ್ಕೆ 1 ಕೋಟಿ ರೂ. ಘೋಷಿಸಿದ ಕಮಲ್ ಹಾಸನ್


Thursday, February 20th, 2020 8:20 pm

ಚೆನ್ನೈ : ನಟ ಕಮಲ್ ಹಾಸನ್ ನಟನೆಯ `ಇಂಡಿಯನ್-2’ ಚಿತ್ರದ ಚಿತ್ರೀಕರಣದ ವೇಳೆ ಕ್ರೇನ್ ಉರುಳಿ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿದ್ದು, ಮೃತರ ಕುಟುಂಬಕ್ಕೆ ತಲಾ ಒಂದು ಕೋಟಿ ನೀಡುವುದಾಗಿ ನಟ ಕಮಲ್ ಹಾಸನ್ ತಿಳಿಸಿದ್ದಾರೆ.

ಇಂದು ಆಸ್ಪತ್ರೆಗೆ ಭೇಟಿ ನೀಡಿದ ಕಮಲ್ ಹಾಸನ್ ಗಾಯಾಳುಗಳ ಯೋಗ ಕ್ಷೇಮ ವಿಚಾರಿಸಿ ಮಾತನಾಡಿದ ಅವರು ನಿನ್ನೆ ಮೃತಪಟ್ಟವರ ಕುಟುಂಬಕ್ಕೆ ತಲಾ ಒಂದು ಕೋಟಿ ನೀಡುತ್ತೇನೆ, ಕೋಟಿ ಕೋಟಿ ಖರ್ಚು ಮಾಡಿ ಸಿನಿಮಾ ಮಾಡುತ್ತೇವೆ, ಅಷ್ಟೆಲ್ಲಾ ಖರ್ಚು ಮಾಡಿದ್ದರೂ ನಮ್ಮ ಜತೆ ಕೆಲಸ ಮಾಡುವವರ ಸುರಕ್ಷತೆ ಹಾಗೂ ಅವರ ರಕ್ಷಣೆ ಸಾಧ್ಯವಾಗುತ್ತಿಲ್ಲ ಎನ್ನುವುದು ನಾಚಿಕೆಗೇಡು ಎಂದು ಕಮಲ್ ಹಾಸನ್ ಬೇಸರ ವ್ಯಕ್ತಪಡಿಸಿದ್ದಾರೆ.

ಇಂಡಿಯನ್ 2 ಚಿತ್ರದ ಚಿತ್ರೀಕರಣಕ್ಕಾಗಿ ಸೆಟ್ ತಯಾರಿಸಲು ಕ್ರೇನ್ ಬಳಸಲಾಗುತ್ತಿತ್ತು. ವೇಳೆ ಕ್ರೇನ್ ಚಾಲಕನ ನಿಯಂತ್ರಣ ತಪ್ಪಿ ಉರುಳಿ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿದ್ದು, 9 ಮಂದಿ ಗಾಯಗೊಂಡಿದ್ದರು. ಮಧು (29), ಚಂದ್ರನ್ (60) ಮತ್ತು ನಿರ್ದೇಶಕ ಕೃಷ್ಣಾ (34) ದುರಂತದಲ್ಲಿ ಮೃತಪಟ್ಟವರು ಎಂದು ಗುರುತಿಸಲಾಗಿದೆ. ಇನ್ನು 9 ಮಂದಿ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions