ಅಮೆರಿಕ: ಭ್ರಷ್ಟಾಚಾರ ಮತ್ತು ಪೆಗಾಸಸ್ ಸ್ಪೈವೇರ್ ಸೇರಿದಂತೆ ಹಲವು ವಿಷಯಗಳನ್ನು ಮುಂದಿಟ್ಟುಕೊಂಡು ಭಾರತೀಯ-ಅಮೆರಿಕನ್ ವೈದ್ಯರೊಬ್ಬರು ಪ್ರಧಾನಿ ನರೇಂದ್ರ ಮೋದಿ, ಆಂಧ್ರಪ್ರದೇಶ ಸಿಎಂ ವೈಎಸ್ ಜಗನ್ ಮೋಹನ್ ರೆಡ್ಡಿ ಮತ್ತು ಉದ್ಯಮಿ ಗೌತಮ್ ಅದಾನಿ ವಿರುದ್ಧ ಮೊಕದ್ದಮೆ ಹೂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಡಿಸ್ಟ್ರಿಕ್ಟ್ ಆಫ್ ಕೊಲಂಬಿಯಾ ಯುಎಸ್ ಡಿಸ್ಟ್ರಿಕ್ಟ್ ಕೋರ್ಟ್ ಈ ಎಲ್ಲಾ ನಾಯಕರಿಗೆ ಸಮನ್ಸ್ ಜಾರಿ ಮಾಡಿದೆ. ನ್ಯೂಯಾರ್ಕ್ನ ಪ್ರಖ್ಯಾತ ಭಾರತೀಯ-ಅಮೆರಿಕನ್ ವಕೀಲ ರವಿ ಬಾತ್ರಾ ಈ ಈ ಕೇಸ್ನಲ್ಲಿ ವಾದ ಮಂಡಿಸಲಿದ್ದಾರೆ ಎನ್ನಲಾಗಿದೆ.
ರಿಚ್ಮಂಡ್ ಮೂಲದ ಗ್ಯಾಸ್ಟ್ರೋಎಂಟರಾಲಜಿಸ್ಟ್ ಡಾ ಲೋಕೇಶ್ ವುಯುರ್ರು ಮೊಕದ್ದಮೆ ಹೂಡಿದವರಾಗಿದ್ದಾರೆ. ಮೋದಿ, ರೆಡ್ಡಿ ಮತ್ತು ಅದಾನಿ ಮತ್ತು ಇತರರೊಂದಿಗೆ ಯುಎಸ್ಗೆ ಭಾರಿ ನಗದು ವರ್ಗಾವಣೆ ಮತ್ತು ರಾಜಕೀಯ ವಿರೋಧಿಗಳ ವಿರುದ್ಧ ಪೆಗಾಸಸ್ ಸ್ಪೈವೇರ್ ಬಳಕೆ ಸೇರಿದಂತೆ ಭ್ರಷ್ಟಾಚಾರದಲ್ಲಿ ತೊಡಗಿದ್ದಾರೆ ಎಂದು ಆರೋಪಿಸಿದ್ದಾರೆ. ಮೇ 24 ರಂದು ಈ ಮೊಕದ್ದಮೆ ದಾಖಲಿಸಲಾಗಿದೆ.
BREAKING NEWS: ಕಾಶ್ಮೀರದಲ್ಲಿ ಎನ್ಕೌಂಟರ್: ಇಬ್ಬರು ಜೈಶ್ ಎ ಉಗ್ರರು ಉಡೀಸ್ | Encounter In Kashmir
BIGG NEWS : ಮೈಸೂರಿನಲ್ಲಿ ಹಳೇ ದ್ವೇಷಕ್ಕೆ ಇಬ್ಬರಿಗೆ ಚಾಕು ಇರಿತ : ಓರ್ವ ಸಾವು