ಬೆಂಗಳೂರು: ಭಾರತೀಯ ಸೇನೆಯು ಅಗ್ನಿವೀರ್ ಜನರಲ್ ಡ್ಯೂಟಿ (ಮಹಿಳಾ ಮಿಲಿಟರಿ ಪೊಲೀಸ್) ನೇಮಕಾತಿ ರ್ಯಾಲಿಯನ್ನು ಜನವರಿ 6 ಮತ್ತು 7 ರಂದು ಜಯನಗರದ ಕಿತ್ತೂರು ರಾಣಿ ಚೆನ್ನಮ್ಮ ಕ್ರೀಡಾಂಗಣದಲ್ಲಿ ಆಯೋಜಿಸಿದೆ
ಕರ್ನಾಟಕ, ಕೇರಳ ಮತ್ತು ಕೇಂದ್ರಾಡಳಿತ ಪ್ರದೇಶಗಳಾದ ಲಕ್ಷದ್ವೀಪ ಮತ್ತು ಮಾಹೆಯ ಮಹಿಳಾ ಅಭ್ಯರ್ಥಿಗಳಿಗೆ ಈ ರ್ಯಾಲಿ ಮುಕ್ತವಾಗಿದೆ.
ಅರ್ಹ ಅಭ್ಯರ್ಥಿಗಳಿಗೆ ಪ್ರವೇಶ ಪತ್ರಗಳನ್ನು www.joinindianarmy.nic.in ರಿಂದ ಡೌನ್ಲೋಡ್ ಮಾಡಿಕೊಳ್ಳಬಹುದು. ಪ್ರವೇಶ ಪತ್ರದಲ್ಲಿ ಉಲ್ಲೇಖಿಸಿರುವಂತೆ ಅರ್ಜಿದಾರರು ಜನವರಿ 6 ರಂದು ಕ್ರೀಡಾಂಗಣದ ಗೇಟ್ ಸಂಖ್ಯೆ 2 ರಲ್ಲಿ ನಿಗದಿತ ಸಮಯದಲ್ಲಿ ವರದಿ ಮಾಡಬೇಕು.
ಮೆರಿಟ್ ಆಧಾರದ ಮೇಲೆ ಆಯ್ಕೆ ನಡೆಯಲಿದ್ದು, ಆನ್ಲೈನ್ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಇ) ಮತ್ತು ರ್ಯಾಲಿಯಲ್ಲಿ ನಡೆಸಿದ ನಂತರದ ಪರೀಕ್ಷೆಗಳ ಮೂಲಕ ಕಾರ್ಯಕ್ಷಮತೆಯನ್ನು ಮೌಲ್ಯಮಾಪನ ಮಾಡಲಾಗುತ್ತದೆ.
ದಲ್ಲಾಳಿಗಳು ಅಥವಾ ಮಧ್ಯವರ್ತಿಗಳೊಂದಿಗೆ ವ್ಯವಹರಿಸದಂತೆ ಸೇನೆಯು ಅಭ್ಯರ್ಥಿಗಳಿಗೆ ಎಚ್ಚರಿಕೆ ನೀಡಿದೆ