ನವದೆಹಲಿ : ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ ಕೆಲವೇ ಗಂಟೆಗಳ ನಂತರ, ಅಖಿಲ ಭಾರತ ಮುಸ್ಲಿಂ ಜಮಾತ್ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಜ್ವಿ ಬರೇಲಿ ಅವರು ಸಿಎಎ ಕಾನೂನುನ್ನು ಸ್ವಾಗತಿಸುವುದಾಗಿ ಹೇಳಿದ್ದಾರೆ.
ಈ ಕುರಿತು ಮಾತನಾಡಿರುವ ಅವರು, ಮುಸ್ಲಿಂ ಸಮುದಾಯದ ಮೇಲೆ ಮತ್ತು ಅವರ ಪೌರತ್ವ ಸ್ಥಾನಮಾನದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು.
“ಭಾರತ ಸರ್ಕಾರ ಸಿಎಎ ಕಾನೂನನ್ನು ಜಾರಿಗೆ ತಂದಿದೆ. ನಾನು ಈ ಕಾನೂನನ್ನು ಸ್ವಾಗತಿಸುತ್ತೇನೆ. ಇದನ್ನು ಬಹಳ ಮೊದಲೇ ಮಾಡಬೇಕಾಗಿತ್ತು.ಈ ಕಾನೂನಿನ ಬಗ್ಗೆ ಮುಸ್ಲಿಮರಲ್ಲಿ ಸಾಕಷ್ಟು ತಪ್ಪು ತಿಳುವಳಿಕೆಗಳಿವೆ. ಈ ಕಾನೂನಿಗೂ ಮುಸ್ಲಿಮರಿಗೂ ಯಾವುದೇ ಸಂಬಂಧವಿಲ್ಲ. ಧರ್ಮದ ಆಧಾರದ ಮೇಲೆ ದೌರ್ಜನ್ಯವನ್ನು ಎದುರಿಸಿದ ಪಾಕಿಸ್ತಾನ, ಅಫ್ಘಾನಿಸ್ತಾನ ಮತ್ತು ಬಾಂಗ್ಲಾದೇಶದಿಂದ ಬರುವ ಮುಸ್ಲಿಮೇತರರಿಗೆ ಪೌರತ್ವ ನೀಡಲು ಈ ಹಿಂದೆ ಯಾವುದೇ ಕಾನೂನು ಇರಲಿಲ್ಲ ಎಂದು ಮೌಲಾನಾ ಸುದ್ದಿಗಾರರಿಗೆ ತಿಳಿಸಿದರು.