ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಒಟ್ಟು 1603 ಅಪ್ರೆಂಟಿಸ್​ ಹುದ್ದೆಗಳು ಖಾಲಿ ಇದ್ದು, ಆಸಕ್ತರು ಅರ್ಜಿ ಸಲ್ಲಿಸಬಹುದು. ಜನವರಿ 6, 2024 ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದೆ. ಆಸಕ್ತರು ಆನ್​ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು.

ಟ್ರೇಡ್ ಅಪ್ರೆಂಟಿಸ್ ಗೆ 10ನೇ ತರಗತಿ, 12ನೇ ತರಗತಿ, ಐಟಿಐ – ಟೆಕ್ನಿಷಿಯನ್ ಅಪ್ರೆಂಟಿಸ್ ಗೆ ಡಿಪ್ಲೊಮಾ – ಗ್ರಾಜುಯೇಟ್ ಅಪ್ರೆಂಟಿಸ್ ಗೆ ಬಿಎ, ಬಿ.ಕಾಂ, ಬಿ.ಎಸ್ಸಿ, ಬಿಬಿಎ ವಿದ್ಯಾರ್ಹತೆಗಳು ಬೇಕಾಗಿದೆ. ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್​ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ನವೆಂಬರ್ 30, 2023ಕ್ಕೆ ಕನಿಷ್ಠ 18 ವರ್ಷ ಮತ್ತು ಗರಿಷ್ಠ 24 ವರ್ಷ ಮೀರಿರಬಾರದು. OBC (NCL) ಅಭ್ಯರ್ಥಿಗಳು: 03 ವರ್ಷಗಳು, SC/ST ಅಭ್ಯರ್ಥಿಗಳು: 05 ವರ್ಷಗಳು, PwBD (ಸಾಮಾನ್ಯ) ಅಭ್ಯರ್ಥಿಗಳು: 10 ವರ್ಷಗಳು, PwBD (OBC-NCL) ಅಭ್ಯರ್ಥಿಗಳು: 13 ವರ್ಷಗಳು, PwBD (SC/ST) ಅಭ್ಯರ್ಥಿಗಳು: 15 ವರ್ಷಗಳು ಈ ರೀತಿ ವಯೋಮಿತಿ ಸಡಿಲಿಕೆಯಿದೆ. ಭಾರತದ ವಿವಿಧ ಸ್ಥಳಗಳಲ್ಲಿ ಉದ್ಯೋಗವಕಾಶಗಳಿವೆ. ಆನ್​​ಲೈನ್ ಟೆಸ್ಟ್​ ಮೂಲಕ ಆಯ್ಕೆ ಪ್ರಕ್ರಿಯೆ ನಡೆಯಲಿದೆ. ಸಂದರ್ಶನ ಮೂಲಕ ದಾಖಲಾತಿ ಪರಿಶೀಲನೆ ನಡೆಯಲಿದೆ. ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ. ಅಭ್ಯರ್ಥಿಗಳು ಆನ್​ಲೈನ್ ಮೂಲಕ ಅಪ್ಲೈ ಮಾಡಬೇಕು ಎಂದು ನೋಟಿಫಿಕೇಶನ್​ನಲ್ಲಿ ತಿಳಿಸಲಾಗಿದೆ. ನೇರವಾಗಿ ಅಪ್ಲೈ ಮಾಡಲು ಲಿಂಕ್​ನ್ನು ನೀಡಲಾಗಿದೆ. ಕೇಂದ್ರ ಸರ್ಕಾರದ ನೌಕರಿ ಹುಡುಕುತ್ತಿದ್ರೆ ಈ ಅವಕಾಶವನ್ನು ಸದುಪಯೋಗಪಡಿಸಿಕೊಳ್ಳಬಹುದಾಗಿದೆ.

Share.
Exit mobile version