ನವದೆಹಲಿ : ಭಾರತದ ಟೆನಿಸ್ ತಾರೆ ರೋಹನ್ ಬೋಪಣ್ಣ 43 ವರ್ಷ 329 ದಿನಗಳ ವಯಸ್ಸಿನಲ್ಲಿ ಓಪನ್ ಯುಗದಲ್ಲಿ ಗ್ರ್ಯಾಂಡ್ ಸ್ಲಾಮ್ ಪ್ರಶಸ್ತಿ ಗೆದ್ದ ಇತಿಹಾಸದಲ್ಲಿ ಅತ್ಯಂತ ಹಿರಿಯ ವ್ಯಕ್ತಿ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ.
ಶನಿವಾರ (ಜನವರಿ 27) ನಡೆದ ಆಸ್ಟ್ರೇಲಿಯನ್ ಓಪನ್ನ ಪುರುಷರ ಡಬಲ್ಸ್ ಫೈನಲ್ನಲ್ಲಿ ಇಂಡೋ-ಆಸ್ಟ್ರೇಲಿಯನ್ ಜೋಡಿ ಬೋಪಣ್ಣ-ಮ್ಯಾಥ್ಯೂ ಎಬ್ಡೆನ್ ಇಟಲಿಯ ಸಿಮೋನ್ ಬೊಲೆಲ್ಲಿ-ಆಂಡ್ರಿಯಾ ವವಾಸ್ಸರಿ ಅವರನ್ನುನೇರ ಸೆಟ್ಗಳಲ್ಲಿ ಸೋಲಿಸುವ ಮೂಲಕ ಅವರು ಈ ಸಾಧನೆ ಮಾಡಿದ್ದಾರೆ.
ಮೆಲ್ಬೋರ್ನ್’ನ ರಾಡ್ ಲೇವರ್ ಅರೆನಾದಲ್ಲಿ ನಡೆದ ಪಂದ್ಯದಲ್ಲಿ ಬೋಪಣ್ಣ ಮತ್ತು ಎಬ್ಡೆನ್ ತಮ್ಮ ಎದುರಾಳಿಗಳನ್ನು 7-6, 7-5 ನೇರ ಸೆಟ್’ಗಳಿಂದ ಸೋಲಿಸಿದರು.