ಶಿವಮೊಗ್ಗ: ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗೋದಕ್ಕೆ ಬೆಂಗಳೂರಿನಿಂದ ಗೃಹ ಸಚಿವ ಡಾ.ಜಿ ಪರಮೇಶ್ವರ್ ಶಿವಮೊಗ್ಗಕ್ಕೆ ಇಂಡಿಗೋ ವಿಮಾನದಲ್ಲಿ ಆಗಮಿಸಿದ್ದರು. ಆದ್ರೇ ಹವಾಮಾನ ವೈಪರಿತ್ಯದ ಹಿನ್ನಲೆಯಲ್ಲಿ ವಿಮಾನವು ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ಲ್ಯಾಂಡ್ ಆಗದೇ ವಾಪಾಸ್ ಆಗಿರೋದಾಗಿ ತಿಳಿದು ಬಂದಿದೆ.
ಶಿವಮೊಗ್ಗ ಜಿಲ್ಲೆಯ ಸೊರಬ ಹಾಗೂ ತೀರ್ಥಹಳ್ಳಿಯಲ್ಲಿ ಪೊಲೀಸ್ ವಸತಿ ಗೃಹ, ನೂತನ ಪೊಲೀಸ್ ಠಾಣೆ ಸೇರಿದಂತೆ ವಿವಿಧ ಕಾರ್ಯಕ್ರಮಗಳಲ್ಲಿ ಭಾಗಿಯಾಗಿ, ಲೋಕಾರ್ಪಣೆಗೊಳಿಸೋದಕ್ಕಾಗಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಬೆಂಗಳೂರಿನಿಂದ ಇಂಡಿಗೋ ವಿಮಾನದಲ್ಲಿ ಆಗಮಿಸಿದ್ದರು.
ಇಂದು ಶಿವಮೊಗ್ಗ ವಿಮಾನ ನಿಲ್ದಾಣಕ್ಕೆ ಆಗಮಿಸಿದಂತ ಇಂಡಿಗೋ ವಿಮಾನಕ್ಕೆ ಹವಾಮಾನ ವೈಪರಿತ್ಯದ ಹಿನ್ನಲೆಯಲ್ಲಿ ಲ್ಯಾಂಡ್ ಗೆ ಅವಕಾಶ ನೀಡಲಿಲ್ಲ. ಹೀಗಾಗಿ ಶಿವಮೊಗ್ಗ ವಿಮಾನ ನಿಲ್ದಾಣದಿಂದ ಮರಳಿ ಬೆಂಗಳೂರಿಗೆ ವಾಪಾಸ್ ಆಗಿದೆ. ಈ ಹಿನ್ನಲೆಯಲ್ಲಿ ಸೊರಬ ಮತ್ತು ತೀರ್ಥಹಳ್ಳಿಯಲ್ಲಿ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರ ನಿಗದಿಯಾಗಿದ್ದಂತ ಕಾರ್ಯಕ್ರಮಗಳು ರದ್ದಾಗಿದ್ದಾವೆ.
ಅಂದಹಾಗೇ ಶಿವಮೊಗ್ಗ ವಿಮಾನ ನಿಲ್ದಾಣದಲ್ಲಿ ನೈಟ್ ಲ್ಯಾಂಡಿಂಗ್ ಸೇರಿದಂತೆ ವಿವಿಧ ತಂತ್ರಾಂಶವನ್ನು ಇನ್ನೂ ಅಳವಡಿಸಿಲ್ಲ. ಹೀಗಾಗಿ ರಾತ್ರಿ ವೇಳೆ, ಮಂಜು ಮತ್ತು ಮೋಡ ಕವಿದ ವಾತಾವರಣದ ಸಂದರ್ಭ ವಿಮಾನ ಪೈಲಟ್‌ಗಳಿಗೆ ರನ್ ವೇಳೆ ಕಾಣಿಸುವುದಿಲ್ಲ. ಈ ಸಂದರ್ಭದಲ್ಲಿ ವಿಮಾನ ಲ್ಯಾಂಡಿಂಗ್ ಮಾಡುವುದು ಕಷ್ಟವಾಗುತ್ತದೆ. ಇದೇ ಕಾರಣದಿಂದ ಇಂದು ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು ಆಗಮಿಸಿದ್ದಂತ ಇಂಡಿಗೋ ವಿಮಾನ ಲ್ಯಾಂಡ್ ಆಗದೇ, ಬೆಂಗಳೂರಿಗೆ ವಾಪಾಸ್ ಆಗಿದೆ.
ನಾಳೆಯ ಬೆಂಗಳೂರಿನ ‘ಬಿಜೆಪಿ ಪ್ರತಿಭಟನೆ’ಗೆ ಪೊಲೀಸರಿಂದ ಅನುಮತಿ ನಿರಾಕರಣೆ | BJP Protest