Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

Solar Eclipse 2025: ಇಂದು ದೀರ್ಘ ಕಗ್ಗತ್ತಲಿನ ಸೂರ್ಯಗ್ರಹಣ ಸಂಭವಿಸುತ್ತಿರುವುದು ನಿಜವೇ?

02/08/2025 8:48 AM

BIG NEWS : `ಮದ್ಯಪಾನ’ ಮಾಡಿ ಅಪಘಾತವಾದರೆ ವಿಮೆ ಪರಿಹಾರ ಬೇಡ : ಕಾಯ್ದೆ ತಿದ್ದುಪಡಿಗೆ ಕರ್ನಾಟಕ ಹೈಕೋರ್ಟ್ ಆದೇಶ.!

02/08/2025 8:46 AM

ಸಾರ್ವಜನಿಕರೇ ಗಮನಿಸಿ : ನಾಯಿಗಳು ನಿಮ್ಮನ್ನು ಕಚ್ಚಲು ಬಂದ್ರೆ ಜಸ್ಟ್ ಈ 5 ಸಲಹೆಗಳನ್ನು ತಪ್ಪದೇ ಪಾಲಿಸಿ.!

02/08/2025 8:40 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ: ಸಿ.ಎಂ ಸಿದ್ದರಾಮಯ್ಯ
KARNATAKA

ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ: ಸಿ.ಎಂ ಸಿದ್ದರಾಮಯ್ಯ

By kannadanewsnow0719/06/2024 2:40 PM

ಬೆಂಗಳೂರು: ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ. ಡಾಕ್ಟರ್ ಓದಿದವರು ಇನ್ನೂ ಮೌಡ್ಯ ಬಿಟ್ಟಿಲ್ಲ. ಓದಿದವರೇ ಇನ್ನೂ ಹಣೆಬರಹದಲ್ಲಿ, ಕರ್ಮ ಸಿದ್ಧಾಂತದಲ್ಲಿ ನಂಬಿಕೆ ಇಟ್ಟುಕೊಂಡಿದ್ದಾರೆ. ಹೀಗಾಗಿ ವಿದ್ಯಾರ್ಥಿಗಳು ಇಂಥಾ ಮೌಡ್ಯದಲ್ಲಿ ನಂಬಿಕೆ ಇಡಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು.

ಸಮಾಜ ಕಲ್ಯಾಣ ಇಲಾಖೆ, ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಸಂಯುಕ್ತಾಶ್ರಯದಲ್ಲಿ SSLC ಮತ್ತು PUC ಯಲ್ಲಿ ಉತ್ತಮ ಸಾಧನೆಗೈದ ವಿದ್ಯಾರ್ಥಿಗಳಿಗೆ ಸನ್ಮಾನಿಸಿ ಉತ್ತೇಜಿಸಿ ಮಾತನಾಡಿದರು.

ದಲಿತ ಸಂಘರ್ಷ ಸಮಿತಿ ರಾಜ್ಯದಲ್ಲಿ ನಡೆಸಿದ, “ನಮಗೆ ಸರಾಯಿ ಅಂಗಡಿ ಬೇಡ. ವಸತಿ ಶಾಲೆ ಬೇಕು” ಎನ್ನುವ ಹೋರಾಟದಿಂದ ಪ್ರೇರಿತನಾಗಿ ಮೊದಲ ಬಜೆಟ್ ಮಂಡಿಸುವ ವೇಳೆ ಗ್ರಾಮೀಣ ಭಾಗದಲ್ಲಿ ಮೊರಾರ್ಜಿ ಶಾಲೆಗಳನ್ನು ಆರಂಭಿಸಿದೆ. ಅವತ್ತಿನಿಂದ ನಿರಂತರವಾಗಿ ಮೊರಾರ್ಜಿ ವಸತಿ ಶಾಲೆಗಳನ್ನು ತೆರೆಯುತ್ತಲೇ ಇದ್ದೇನೆ. ಸದ್ಯ ಸಮಾಜ ಕಲ್ಯಾಣ ಇಲಾಖೆ ಅಡಿಯಲ್ಲಿ 833 ವಸತಿ ಶಾಲೆಗಳಿವೆ. ಅಲ್ಪ ಸಂಖ್ಯಾತ ಇಲಾಖೆಯಡಿಯಲ್ಲಿರುವುದೂ ಸೇರಿ ಒಟ್ಟು 946 ವಸತಿ ಶಾಲೆಗಳಿವೆ ಎಂದು ವಿವರಿಸಿದರು.

ಕೆಲವು ಹೋಬಳಿಯಲ್ಲಿ ಒಂದಕ್ಕಿಂತ ಹೆಚ್ಚು ವಸತಿ ಶಾಲೆಗಳಿವೆ. ಆದ್ದರಿಂದ ಕೆಲವು ಹೋಬಳಿಗಳಲ್ಲಿ ಇಲ್ಲವಾಗಿತ್ತು. ಹೀಗಾಗಿ ಈ ವರ್ಷ 20 ವಸತಿ ಶಾಲೆಗಳನ್ನು ಆರಂಭಿಸಲು ಅನುಮತಿ ನೀಡಿದ್ದೇನೆ. ಹೋಬಳಿಗೊಂದು ವಸತಿ ಶಾಲೆ ನನ್ನ ಗುರಿ ಮತ್ತು ಉದ್ದೇಶವಾಗಿದೆ ಎಂದರು.

ಗ್ರಾಮೀಣ ಭಾಗದಲ್ಲಿ ಸರ್ವರಿಗೂ ಗುಣಮಟ್ಟದ ವೈಚಾರಿಕತೆ, ವೈಜ್ಞಾನಿಕತೆಯಿಂದ ಕೂಡಿದ ಶಿಕ್ಷಣ ದೊರೆಯಬೇಕು. ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ ಎಲ್ಲಾ ಜಾತಿ, ಜನವರ್ಗದ ಮಕ್ಕಳಿಗೆ ಓದುವ ಅವಕಾಶ ಕಲ್ಪಿಸಿದ್ದು ನಮ್ಮ ಸಂವಿಧಾನ ಎಂದರು.

ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ.‌ ಇದನ್ನು ಹೋಗಲಾಡಿಸಬೇಕಾಗಿದೆ. ನನಗೆ ಶಿಕ್ಷಣ ಸಿಕ್ಕಿದ್ದರಿಂದಲೇ ಮುಖ್ಯಮಂತ್ರಿ ಆಗುವ ಅವಕಾಶ ದೊರೆಯಿತು. ಇಲ್ಲದಿದ್ದರೆ ನಾನೂ ಎಮ್ಮೆ, ಹಸು ಮೇಯಿಸುತ್ತಾ ಅಷ್ಟಕ್ಕೇ ಸೀಮಿತ ಆಗಬೇಕಾಗಿತ್ತು ಎಂದರು.

ಬುದ್ದ, ಬಸವಣ್ಣ ಎಷ್ಟು ಶತಮಾನಗಳ ಹಿಂದೆ ಜಾತಿ ವ್ಯವಸ್ಥೆ ಅಳಿಸಲು ಶ್ರಮಿಸಿದರು. ಆದರೆ ವಿದ್ಯಾವಂತರಲ್ಲೇ ಜಾತಿಪ್ರಜ್ಞೆ ಹೆಚ್ಚಾಗುತ್ತಿದೆ ಎಂದು ಬೇಸರ ವ್ಯಕ್ತಪಡಿಸಿದರು.

SDLC ಮತ್ತು PUC ಯಲ್ಲಿ ಹೆಚ್ಚು ಅಂಕ ಗಳಿಸಿದ, ಸಾಧನೆ ಮಾಡಿದ ಎಲ್ಲಾ ವಿದ್ಯಾರ್ಥಿಗಳಿಗೆ ಮತ್ತು ಈ ವಿದ್ಯಾರ್ಥಿಗಳ ಸಾಧನೆಗೆ ನೆರವಾದ ಎಲ್ಲಾ ಶಿಕ್ಷಕರಿಗೆ ಮುಖ್ಯಮಂತ್ರಿಗಳು ಇದೇ ಸಂದರ್ಭದಲ್ಲಿ ಅಭಿನಂದಿಸಿದರು.

ಮಕ್ಕಳಿಗೆ ಜಾತಿ, ಧರ್ಮದ ತಾರತಮ್ಯ ಕಲಿಸುವವರೇ ನಾವು. ಆದ್ದರಿಂದ ಪೋಷಕರು, ಶಿಕ್ಷಕರು ಮೊದಲು ಕಂದಾಚಾರ,‌ಮೌಡ್ಯದಿಂದ ಹೊರಗೆ ಬರಬೇಕು. ಆಗ ಮಕ್ಕಳೂ ವೈಜ್ಞಾನಿಕವಾಗಿ ಬೆಳೆದು ಉತ್ತಮ ಭವಿಷ್ಯ ರೂಪಿಸಿಕೊಳ್ಳುತ್ತಾರೆ ಎಂದರು.

ಹುಟ್ಟುವಾಗ ಎಲ್ಲಾ ಮಕ್ಕಳೂ ವಿಶ್ವ ಮಾನವರಾಗಿ ಹುಟ್ಟಿ ಬೆಳೆಯುತ್ತಾ ಅಲ್ಪ ಮಾನವರಾಗುತ್ತಾರೆ ಎನ್ನುವ ಕುವೆಂಪು ಅವರ ಮಾತು ಪ್ರಸ್ತಾಪಿಸಿದ ಮುಖ್ಯಮಂತ್ರಿಗಳು ಮಕ್ಕಳು ಅಲ್ಪ ಮಾನವರಾಗದಂತೆ ಕಾಪಾಡುವ ಜವಾಬ್ದಾರಿ ಶಿಕ್ಷಕರು, ಪೋಷಕರ ಮೇಲಿದೆ ಎಂದರು.

ಬಸವಣ್ಣನವರು 12ನೇ ಶತಮಾನದಲ್ಲೇ ದಲಿತರು ಮತ್ತು ಬ್ರಾಹ್ಮಣರ ನಡುವೆ ಅಂತರ್ಜಾತಿ ವಿವಾಹ ಮಾಡಿಸಿ ಗೆದ್ದರು. ಜಾತಿ ವ್ಯವಸ್ಥೆ ಶಿಥಿಲವಾಗಬೇಕಾದರೆ ದಲಿತರು, ಹಿಂದುಳಿದವರಿಗೆ ಆರ್ಥಿಕ‌ ಶಕ್ತಿ ಬರಬೇಕು, ಸಾಮಾಜಿಕವಾಗಿಯೂ ಶಕ್ತಿ ಬರಬೇಕು . ಈ ಬಗ್ಗೆ ಅಂಬೇಡ್ಕರ್ ಅವರು ಸಂವಿಧಾನ ಸಭೆಯಲ್ಲಿ ಆಡಿದ ಮಾತುಗಳು ಇವತ್ತಿಗೂ ಬಹಳ ಪ್ರಸ್ತುತವಾಗಿದೆ ಎಂದರು.

ಸರ್ಕಾರಿ ವಸತಿ ಶಾಲೆಗಳ ಮಕ್ಕಳು ಈ ಬಾರಿ ಶೇ96 ರಷ್ಟು ಫಲಿತಾಂಶ ಪಡೆದಿದ್ದಾರೆ. ಮುಂದಿನ ಬಾರಿ ಶೇ100 ರಷ್ಟು ಅಂಕ ಪಡೆಯಬೇಕು ಎಂದು ಕರೆ ನೀಡಿದರು.

ನಮ್ಮ ಸಂವಿಧಾನದ ಕಾರಣದಿಂದ ಶಿಕ್ಷಣ ಈಗ ಪ್ರತಿಯೊಬ್ಬರ ಮೂಲಭೂತ ಹಕ್ಕಾಗಿದೆ. ಸರ್ವರಿಗೂ ಸಮಾನವಾದ ಗುಣಮಟ್ಟದ ಶಿಕ್ಷಣ
ಕ್ರೈಸ್ ಪ್ರತಿಭಾ ಪುರಸ್ಕಾರ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಸಕರಾದ ರಿಜ್ವಾನ್ ಅರ್ಷದ್ ಅವರು ವಹಿಸಿದ್ದರು.
ಈ ಐತಿಹಾಸಿಕ ಕಾರ್ಯಕ್ರಮದ ಮಹತ್ವವನ್ನು ಸಮಾಜ ಕಲ್ಯಾಣ ಸಚಿವರಾದ ಹೆಚ್.ಸಿ.ಮಹದೇವಪ್ಪ ಅವರು ವಿವರಿಸಿದರು.
ವಿಧಾನಪರಿಷತ್ ಸಭಾಧ್ಯಕ್ಷರಾದ ಬಸವರಾಜ ಹೊರಟ್ಟಿ, ಪರಿಷತ್ ಸದಸ್ಯರಾದ ಸುದಾಮ್ ದಾಸ್ ಮತ್ತು ಇಲಾಖಾ ಅಧಿಕಾರಿಗಳು ಉಪಸ್ಥಿತರಿದ್ದರು.

ಬಾಕ್ಸ್

ಹೆಣ್ಣು ಮಕ್ಕಳ ಪ್ರಗತಿ ಖುಷಿ ಆಗತ್ತೆ

ಹಿಂದೆ ಮುಂದುವರೆದ ಜಾತಿಯ ಹೆಣ್ಣು ಮಕ್ಕಳಿಗೂ ಶಿಕ್ಷಣ ಕಲಿಯುವ ಅವಕಾಶ ಇರಲಿಲ್ಲ. ಎಲ್ಲಾ ಜಾತಿಯ ಹೆಣ್ಣುಮಕ್ಕಳೂ ಶಿಕ್ಷಣದ ವಿಚಾರದಲ್ಲಿ ಶೋಷಿತರಾಗಿದ್ದವರೇ. ಈಗ ಹೆಣ್ಣು ಮಕ್ಕಳೇ ಶಿಕ್ಷಣದಲ್ಲಿ ಮುಂದಿರುವುದು ಖುಷಿ ಆಗತ್ತೆ ಎಂದರು.

Inequality has been created in society due to caste system: CM Siddaramaiah ಜಾತಿ ವ್ಯವಸ್ಥೆ ಕಾರಣದಿಂದ ಸಮಾಜದಲ್ಲಿ ಅಸಮಾನತೆ ಸೃಷ್ಟಿಯಾಗಿದೆ: ಸಿ.ಎಂ ಸಿದ್ದರಾಮಯ್ಯ
Share. Facebook Twitter LinkedIn WhatsApp Email

Related Posts

BIG NEWS : `ಮದ್ಯಪಾನ’ ಮಾಡಿ ಅಪಘಾತವಾದರೆ ವಿಮೆ ಪರಿಹಾರ ಬೇಡ : ಕಾಯ್ದೆ ತಿದ್ದುಪಡಿಗೆ ಕರ್ನಾಟಕ ಹೈಕೋರ್ಟ್ ಆದೇಶ.!

02/08/2025 8:46 AM2 Mins Read

ಸಾರ್ವಜನಿಕರೇ ಗಮನಿಸಿ : ನಾಯಿಗಳು ನಿಮ್ಮನ್ನು ಕಚ್ಚಲು ಬಂದ್ರೆ ಜಸ್ಟ್ ಈ 5 ಸಲಹೆಗಳನ್ನು ತಪ್ಪದೇ ಪಾಲಿಸಿ.!

02/08/2025 8:40 AM2 Mins Read

BREAKING : `PSI’ ಹುದ್ದೆಗೆ ಆಯ್ಕೆಯಾದವರಿಗೆ ಗುಡ್ ನ್ಯೂಸ್ : ವಾರದೊಳಗೆ `ನೇಮಕಾತಿ’ ಆದೇಶ.!

02/08/2025 8:18 AM1 Min Read
Recent News

Solar Eclipse 2025: ಇಂದು ದೀರ್ಘ ಕಗ್ಗತ್ತಲಿನ ಸೂರ್ಯಗ್ರಹಣ ಸಂಭವಿಸುತ್ತಿರುವುದು ನಿಜವೇ?

02/08/2025 8:48 AM

BIG NEWS : `ಮದ್ಯಪಾನ’ ಮಾಡಿ ಅಪಘಾತವಾದರೆ ವಿಮೆ ಪರಿಹಾರ ಬೇಡ : ಕಾಯ್ದೆ ತಿದ್ದುಪಡಿಗೆ ಕರ್ನಾಟಕ ಹೈಕೋರ್ಟ್ ಆದೇಶ.!

02/08/2025 8:46 AM

ಸಾರ್ವಜನಿಕರೇ ಗಮನಿಸಿ : ನಾಯಿಗಳು ನಿಮ್ಮನ್ನು ಕಚ್ಚಲು ಬಂದ್ರೆ ಜಸ್ಟ್ ಈ 5 ಸಲಹೆಗಳನ್ನು ತಪ್ಪದೇ ಪಾಲಿಸಿ.!

02/08/2025 8:40 AM

SHOCKING : ದೇಶದಲ್ಲಿ ಲೈಂಗಿಕ ಸುಖಕ್ಕಾಗಿ ಮಾದಕ ದ್ರವ್ಯ ಬಳಸುತ್ತಿರುವ ಯುವಕರು : `AIIMS’ ವರದಿ

02/08/2025 8:33 AM
State News
KARNATAKA

BIG NEWS : `ಮದ್ಯಪಾನ’ ಮಾಡಿ ಅಪಘಾತವಾದರೆ ವಿಮೆ ಪರಿಹಾರ ಬೇಡ : ಕಾಯ್ದೆ ತಿದ್ದುಪಡಿಗೆ ಕರ್ನಾಟಕ ಹೈಕೋರ್ಟ್ ಆದೇಶ.!

By kannadanewsnow5702/08/2025 8:46 AM KARNATAKA 2 Mins Read

ಬೆಂಗಳೂರು : ಮದ್ಯಪಾನ ಮಾಡಿ ವಾಹನ ಚಾಲನೆ ಪ್ರಕರಣಗಳಲ್ಲಿ ವಿಮಾದಾರರ ಹೊಣೆಗಾರಿಕೆಯನ್ನು ಮುಕ್ತಗೊಳಿಸಲು 1988 ರ ಮೋಟಾರು ವಾಹನ ಕಾಯ್ದೆಗೆ…

ಸಾರ್ವಜನಿಕರೇ ಗಮನಿಸಿ : ನಾಯಿಗಳು ನಿಮ್ಮನ್ನು ಕಚ್ಚಲು ಬಂದ್ರೆ ಜಸ್ಟ್ ಈ 5 ಸಲಹೆಗಳನ್ನು ತಪ್ಪದೇ ಪಾಲಿಸಿ.!

02/08/2025 8:40 AM

BREAKING : `PSI’ ಹುದ್ದೆಗೆ ಆಯ್ಕೆಯಾದವರಿಗೆ ಗುಡ್ ನ್ಯೂಸ್ : ವಾರದೊಳಗೆ `ನೇಮಕಾತಿ’ ಆದೇಶ.!

02/08/2025 8:18 AM

BREAKING : ರಾಜ್ಯದ ಗ್ರಾ.ಪಂ `PDO’ ಗಳ ವರ್ಗಾವಣೆ : ಸರ್ಕಾರದಿಂದ ಮಹತ್ವದ ಆದೇಶ | PDO transfer

02/08/2025 8:09 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.