Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಉದ್ಯೋಗಿಗಳಿಗೆ `EPFO’ ಭರ್ಜರಿ ಗುಡ್ ನ್ಯೂಸ್ : ಇನ್ಮುಂದೆ ನಿಮಿಷಗಳಲ್ಲಿ ಸಿಗಲಿದೆ ₹5 ಲಕ್ಷದವರೆಗೆ ಆಟೋ ಸೆಟಲ್‌ಮೆಂಟ್, `PF’ ಹಣ!

06/04/2026 11:35 AM

₹20ರ ನೀರಿನ ಬಾಟಲಿಗೆ ₹100 : ಲಕ್ನೋ ಸ್ಟೇಡಿಯಂ ಬೆಲೆ ಏರಿಕೆಗೆ ಕ್ರಿಕೆಟ್ ಅಭಿಮಾನಿಗಳ ಆಕ್ರೋಶ | WATCH VIDEO

06/04/2026 11:28 AM

ಚಿಕ್ಕಮಗಳೂರು : ಸ್ನೇಹಿತನ ಮದುವೆಗೆ ಹೋದಾಗಲೇ ದುರಂತ : ನದಿಯಲ್ಲಿ ಮುಳುಗಿ ಐಟಿ ಉದ್ಯೋಗಿ ಸಾವು!

06/04/2026 11:15 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ವನ್ಯಜೀವಿ ಸಂಚಾರದ ಬಗ್ಗೆ ಸ್ಥಳೀಯರಿಗೆ ತಕ್ಷಣ ಮಾಹಿತಿ ನೀಡಿ: ಅರಣ್ಯ ಸಚಿವ ಈಶ್ವರ ಖಂಡ್ರೆ
KARNATAKA

ವನ್ಯಜೀವಿ ಸಂಚಾರದ ಬಗ್ಗೆ ಸ್ಥಳೀಯರಿಗೆ ತಕ್ಷಣ ಮಾಹಿತಿ ನೀಡಿ: ಅರಣ್ಯ ಸಚಿವ ಈಶ್ವರ ಖಂಡ್ರೆ

By kannadanewsnow0923/02/2026 4:55 PM

ಬೆಂಗಳೂರು: ಅರಣ್ಯದಂಚಿನ ಜಮೀನುಗಳಲ್ಲಿ ವನ್ಯಜೀವಿಗಳ ಸಂಚಾರದ ಬಗ್ಗೆ ಕಮಾಂಡ್ ಕೇಂದ್ರಕ್ಕೆ ಮಾಹಿತಿ ಬಂದ ಕೂಡಲೇ ತೋಟದ ಬೆಳೆಗಾರರ ಸಂಘಟನೆ ಮತ್ತು ಕಾರ್ಮಿಕ ಸಂಘಟನೆಗಳಿಗೆ, ಸ್ಥಳೀಯ ಮುಖಂಡರಿಗೆ ಮಾಹಿತಿ ರವಾನಿಸಲು ಕ್ರಮ ವಹಿಸುವಂತೆ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸೂಚನೆ ನೀಡಿದ್ದಾರೆ.

ಚಿಕ್ಕಮಗಳೂರು ತಾಲೂಕು ಹುಣಸೆಹಳ್ಳಿ ಬಳಿಯ ತೋಟದಲ್ಲಿ ಕಳೆದ 7 ದಿನಗಳ ಅಂತರದಲ್ಲಿ ಇಬ್ಬರು ಕಾರ್ಮಿಕರು ಮೃತಪಟ್ಟಿರುವ ಹಿನ್ನೆಲೆಯಲ್ಲಿ ಉನ್ನತಾಧಿಕಾರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಮೂಲಕ ತುರ್ತು ಸಭೆ ನಡೆಸಿದ ಸಚಿವರು ವನ್ಯಜೀವಿ -ಮಾನವ ಸಂಘರ್ಷ ಇರುವ ಪ್ರದೇಶಗಳ ಸ್ಥಳೀಯ ಮುಖಂಡರ, ಗ್ರಾಮಗಳ ಜಮೀನು ಮಾಲೀಕರ ವಾಟ್ಸ್ ಅಪ್ ಗ್ರೂಪ್ ಮಾಡಿ ಮಾಹಿತಿ ಪ್ರಸಾರ ಮಾಡುವಂತೆ ಸೂಚಿಸಿದರು.

ಮಾನವ ಜೀವ ಅತ್ಯಮೂಲ್ಯವಾದ್ದು, ಒಂದು ಜೀವಹಾನಿ ಆದ ಬಳಿಕ ಮತ್ತೊಂದು ಜೀವ ಹಾನಿ ಆಗಿರುವುದು ಅತ್ಯಂತ ನೋವಿನ ಸಂಗತಿ. ಅಧಿಕಾರಿಗಳು ಮತ್ತು ಸಿಬ್ಬಂದಿ ಇಂತಹ ಘಟನೆ ಮರುಕಳಿಸದಂತೆ 24×7 ನಿಗಾ ಇಡಬೇಕು. ಕಡ್ಡಾಯವಾಗಿ ಸೆಕ್ಷನ್ 144 ಜಾರಿ ಮಾಡಿ ವನ್ಯಜೀವಿ ಸರೆ ಕಾರ್ಯಾಚರಣೆ ನಡೆಸಬೇಕು. ಅತ್ಯಾಧುನಿಕ ಸಲಕರಣೆಗಳಾದ ಥರ್ಮಲ್ ಡ್ರೋನ್ ಬಳಕೆ ಮಾಡಬೇಕು ಎಂದು ಸೂಚಿಸಿದರು.

ಚಿಕ್ಕಮಗಳೂರಿನಲ್ಲಿ ಕಳೆದ ವಾರ ಆನೆ ದಾಳಿಯಿಂದ ವ್ಯಕ್ತಿ ಮೃತಪಟ್ಟ ಬಳಿಕ, ಆನೆ ಸೆರೆಗೆ ಕ್ರಮ ಕೈಗೊಳ್ಳಲಾಗಿತ್ತು. ಸ್ಥಳೀಯರಿಗೆ ತೋಟಕ್ಕೆ ಹೋಗದಂತೆ ಮಾಹಿತಿ ನೀಡಲಾಗಿತ್ತು. ಆದಾಗ್ಯೂ ತೋಟಕ್ಕೆ ಹೋದ ಕಾರಣ ಈ ಸಾವು ಸಂಭವಿಸಿದೆ ಎಂದು ಅಧಿಕಾರಿಗಳು ತಿಳಿಸಿದರು.

ಅರಣ್ಯ ಇಲಾಖೆ ಮುನ್ನೆಚ್ಚರಿಕೆ ನೀಡಿದ ಬಳಿಕವೂ ತೋಟದ ಮಾಲೀಕರು ಕಾರ್ಮಿಕರನ್ನು ತೋಟಕ್ಕೆ ಕಳಿಸಿದರೆ ಅಂತಹ ಮಾಲೀಕರಿಗೆ ಎಚ್ಚರಿಕೆ ನೀಡಿ, ತೋಟದ ಮಾಲೀಕರಿಗೂ ಜವಾಬ್ದಾರಿ ಇರಬೇಕು. ನಿರ್ಲಕ್ಷ್ಯ ತೋರಿದರೆ ದೂರು ದಾಖಲಿಸಿ ಎಂದು ತಿಳಿಸಿದರು.

ಮಾಹಿತಿಯ ಪ್ರಕಾರ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅರಣ್ಯದ ಹೊರಗೆ 35 ಆನೆಗಳು 3 ಗುಂಪಿನಲ್ಲಿ ಸಂಚರಿಸುತ್ತಿದ್ದು, ಬೇಸಿಗೆಯಲ್ಲಿ ಅವುಗಳು ಕಾಡಿನಿಂದ ಹೊರಬರುವುದು ಸಾಮಾನ್ಯ. ಆದಾಗ್ಯೂ ಸಿಬ್ಬಂದಿ ಮತ್ತು ಅಧಿಕಾರಿಗಳು ವನ್ಯಜೀವಿ-ಮಾನವ ಸಂಘರ್ಷ ಆಗದಂತೆ ನಿಗಾ ಇಡಬೇಕು. ಪ್ರತಿ ವರ್ಷ ವನ್ಯಜೀವಿ- ಮಾನವ ದಾಳಿಯಲ್ಲಿ ಆಗುತ್ತಿರುವ ಸಾವಿನ ಸಂಖ್ಯೆ ಇಳಿಕೆಯಾಗಬೇಕೇ ಹೊರತು, ಹೆಚ್ಚಳ ಆಗಬಾರದು ನೀವೆಲ್ಲರೂ ಪ್ರಾಮಾಣಿಕ ಪ್ರಯತ್ನ ಮಾಡಿ ಎಂದು ತಿಳಿಸಿದರು.

ಹಿರಿಯ ಅಧಿಕಾರಿಗಳು ಕ್ಷೇತ್ರಕ್ಕೆ ಹೋಗುವಂತೆ ಸೂಚನೆ:

ಬೇಸಿಗೆ ಹಿನ್ನೆಲೆಯಲ್ಲಿ ಮುಂದಿನ 2-3 ತಿಂಗಳು ಅತ್ಯಂತ ಕ್ಲಿಷ್ಟಕರವಾಗಿದ್ದು, ಹಿರಿಯ ಅಧಿಕಾರಿಗಳು ವನ್ಯಜೀವಿ -ಮಾನವ ಸಂಘರ್ಷ ಇರುವ ಪ್ರದೇಶಕ್ಕೆ ತೆರಳಿ, ಅಧಿಕಾರಿ, ಸಿಬ್ಬಂದಿಗೆ ಮಾರ್ಗದರ್ಶನ ಮಾಡಬೇಕು ಎಂದು ತಿಳಿಸಿದರು.

ಸಫಾರಿ ಪುನಾರಂಭ: ಕಾಡಿನಂಚಿನ ಗ್ರಾಮಗಳಲ್ಲಿ ಸಭೆ ನಡೆಸಲು ಸೂಚನೆ

ನಾಗರಹೊಳೆ ಮತ್ತು ಬಂಡೀಪುರದಲ್ಲಿ ಸಫಾರಿ ಪುನಾರಂಭ ಮಾಡಿರುವ ಬಗ್ಗೆ ಕೆಲವರು ಮಾತ್ರವೇ ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ರಾಜ್ಯ ಸರ್ಕಾರ ಸಫಾರಿಯಿಂದ ಬರುವ ಆದಾಯದಲ್ಲಿ ಶೇ.35ರಷ್ಟನ್ನು ಕಾಡಿನಂಚಿನ ಗ್ರಾಮದ ಜನರ ಕಲ್ಯಾಣಕ್ಕಾಗಿ ಬಳಸಲು ತೀರ್ಮಾನಿಸಿದ್ದು, ಗ್ರಾಮಗಳಲ್ಲಿ ಸಭೆ ನಡೆಸಿ, ಸ್ಥಳೀಯರ ಅಗತ್ಯಕ್ಕೆ ಅನುಗುಣವಾಗಿ ಕಾರ್ಯಕ್ರಮ ರೂಪಿಸಬೇಕು. ಯುವಜನರಿಗೆ ಕೌಶಲ್ಯ ತರಬೇತಿ ನೀಡಬೇಕು, ಕಾಡಿನಂಚಿನ ಶಾಲೆ ಕಾಲೇಜುಗಳಿಗೆ ಅಗತ್ಯ ಸಲಕರಣೆ ನೀಡಬೇಕು. ವನ್ಯಜೀವಿಗಳು ನಾಡಿಗೆ ಬಂದಾಗ ಹೇಗೆ ನಡೆದುಕೊಳ್ಳಬೇಕು ಎಂಬ ಬಗ್ಗೆ ಅರಿವು ಮೂಡಿಸಲೂ ತಿಳಿಸಿದರು.

ಸಭೆಯಲ್ಲಿ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ಅರಣ್ಯ ಪಡೆ ಮುಖ್ಯಸ್ಥರಾದ ಮೀನಾಕ್ಷಿ ನೇಗಿ, ಮುಖ್ಯ ವನ್ಯಜೀವಿ ಪರಿಪಾಲಕರಾದ ಕುಮಾರ್ ಪುಷ್ಕರ್, ಎ.ಪಿಸಿಸಿಎಫ್ ಬಿಸ್ವಜಿತ್ ಮಿಶ್ರ, ಮನೋಜ್ ರಾಜನ್, ಸಿಎಫ್ ಪ್ರಭಾಕರನ್, ಕೊಪ್ಪ ವಲಯದ ಡಿಸಿಎಫ್ ಶಿವಶಂಕರ್ ಮತ್ತಿತರರು ಪಾಲ್ಗೊಂಡಿದ್ದರು.

ಹೆಚ್ಚು ಬಟ್ಟೆ ಬಿಚ್ಚಿಕೊಂಡರೂ ವಿಬಿ ಜಿ ರಾಮ್ ಜಿ ಯೇ ಊರ್ಜಿತ: ಛಲವಾದಿ ನಾರಾಯಣಸ್ವಾಮಿ

ರಾಜ್ಯದ ಗ್ರಾಮ ಪಂಚಾಯಿತಿ ಕಚೇರಿಗಳಿಗೆ ಮಹಾತ್ಮಾ ಗಾಂಧಿ ಹೆಸರಿಡಲು ತೀರ್ಮಾನ: ಡಿಸಿಎಂ ಡಿ.ಕೆ ಶಿವಕುಮಾರ್

Share. Facebook Twitter LinkedIn WhatsApp Email

Related Posts

ಚಿಕ್ಕಮಗಳೂರು : ಸ್ನೇಹಿತನ ಮದುವೆಗೆ ಹೋದಾಗಲೇ ದುರಂತ : ನದಿಯಲ್ಲಿ ಮುಳುಗಿ ಐಟಿ ಉದ್ಯೋಗಿ ಸಾವು!

06/04/2026 11:15 AM1 Min Read

ತುಮಕೂರಲ್ಲಿ ಹೊಲದಲ್ಲಿ ಕೆಲಸ ಮಾಡುವಾಗ ಹೆಜ್ಜೆನು ದಾಳಿ : ತಾತ, ಮೊಮ್ಮಗನ ಸ್ಥಿತಿ ಗಂಭೀರ ಆಸ್ಪತ್ರೆಗೆ ದಾಖಲು!

06/04/2026 11:08 AM1 Min Read

ನಿಮ್ಮ ಮನೆಯಲ್ಲಿರುವ ಮರದ `ಫರ್ನಿಚರ್’ ಗಳನ್ನು ಗೆದ್ದಲು ತಿನ್ನುತ್ತಿವೆಯೇ? ಇಲ್ಲಿದೆ ಸುಲಭ ಪರಿಹಾರ.!

06/04/2026 10:54 AM1 Min Read
Recent News

ಉದ್ಯೋಗಿಗಳಿಗೆ `EPFO’ ಭರ್ಜರಿ ಗುಡ್ ನ್ಯೂಸ್ : ಇನ್ಮುಂದೆ ನಿಮಿಷಗಳಲ್ಲಿ ಸಿಗಲಿದೆ ₹5 ಲಕ್ಷದವರೆಗೆ ಆಟೋ ಸೆಟಲ್‌ಮೆಂಟ್, `PF’ ಹಣ!

06/04/2026 11:35 AM

₹20ರ ನೀರಿನ ಬಾಟಲಿಗೆ ₹100 : ಲಕ್ನೋ ಸ್ಟೇಡಿಯಂ ಬೆಲೆ ಏರಿಕೆಗೆ ಕ್ರಿಕೆಟ್ ಅಭಿಮಾನಿಗಳ ಆಕ್ರೋಶ | WATCH VIDEO

06/04/2026 11:28 AM

ಚಿಕ್ಕಮಗಳೂರು : ಸ್ನೇಹಿತನ ಮದುವೆಗೆ ಹೋದಾಗಲೇ ದುರಂತ : ನದಿಯಲ್ಲಿ ಮುಳುಗಿ ಐಟಿ ಉದ್ಯೋಗಿ ಸಾವು!

06/04/2026 11:15 AM

BREAKING : ದೆಹಲಿಯಲ್ಲಿ ಬಾಂಬ್ ಸ್ಫೋಟದ ಸಂಚು: ಇಬ್ಬರು ಜೈಶ್-ಎ-ಮೊಹಮ್ಮದ್ ಉಗ್ರರು ಅರೆಸ್ಟ್

06/04/2026 11:15 AM
State News
KARNATAKA

ಚಿಕ್ಕಮಗಳೂರು : ಸ್ನೇಹಿತನ ಮದುವೆಗೆ ಹೋದಾಗಲೇ ದುರಂತ : ನದಿಯಲ್ಲಿ ಮುಳುಗಿ ಐಟಿ ಉದ್ಯೋಗಿ ಸಾವು!

By kannadanewsnow0506/04/2026 11:15 AM KARNATAKA 1 Min Read

ಚಿಕ್ಕಮಗಳೂರು : ಚಿಕ್ಕಮಗಳೂರಲ್ಲಿ ಘೋರ ಘಟನೆ ನಡೆದಿದ್ದು, ಭದ್ರಾ ನದಿಯಲ್ಲಿ ಮುಳುಗಿ ಐಟಿ ಕಂಪನಿಯ ಉದ್ಯೋಗಿ ಸಾವನಪ್ಪಿದ್ದಾನೆ. ಈಜಲು ತೆರಳಿದ…

ತುಮಕೂರಲ್ಲಿ ಹೊಲದಲ್ಲಿ ಕೆಲಸ ಮಾಡುವಾಗ ಹೆಜ್ಜೆನು ದಾಳಿ : ತಾತ, ಮೊಮ್ಮಗನ ಸ್ಥಿತಿ ಗಂಭೀರ ಆಸ್ಪತ್ರೆಗೆ ದಾಖಲು!

06/04/2026 11:08 AM

ನಿಮ್ಮ ಮನೆಯಲ್ಲಿರುವ ಮರದ `ಫರ್ನಿಚರ್’ ಗಳನ್ನು ಗೆದ್ದಲು ತಿನ್ನುತ್ತಿವೆಯೇ? ಇಲ್ಲಿದೆ ಸುಲಭ ಪರಿಹಾರ.!

06/04/2026 10:54 AM

BIG NEWS : ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ : ಸಚಿವ ಜಿ ಪರಮೇಶ್ವರ್ ಖಡಕ್ ವಾರ್ನಿಂಗ್!

06/04/2026 10:27 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.