Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಏನಿದು ‘ಡಿಜಿಟಲ್ ಅರೆಸ್ಟ್’? ನಿಮ್ಮ ಹಣವನ್ನು ‘ಸೈಬರ್ ವಂಚಕರ ಜಾಲ’ದಿಂದ ರಕ್ಷಿಸಿಕೊಳ್ಳಲು ಇಲ್ಲಿದೆ ಟಿಪ್ಸ್

21/03/2026 2:10 PM

ನಿಮ್ಮನ್ನು ‘ಪೊಲೀಸರು ಅರೆಸ್ಟ್’ ಮಾಡಿದಾಗ ಏನು ಮಾಡಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ

21/03/2026 1:56 PM

BREAKING : ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್ : ಯಾವುದೇ ಕಾರಣಕ್ಕೂ ಬಸ್ ಟಿಕೆಟ್ ದರ ಏರಿಕೆ ಮಾಡಲ್ಲ : ಸಚಿವ ರಾಮಲಿಂಗಾರೆಡ್ಡಿ

21/03/2026 1:47 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIG NEWS: ನವೆಂಬರ್ ನಿಂದ ರಾಜ್ಯಾಧ್ಯಂತ ‘ಮಾಹಿತಿ ಹಕ್ಕು ಅದಾಲತ್’: ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ
KARNATAKA

BIG NEWS: ನವೆಂಬರ್ ನಿಂದ ರಾಜ್ಯಾಧ್ಯಂತ ‘ಮಾಹಿತಿ ಹಕ್ಕು ಅದಾಲತ್’: ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಗುರಿ

By kannadanewsnow0921/09/2025 5:45 AM

ಚಿಕ್ಕಬಳ್ಳಾಪುರ : ಮಾಹಿತಿ ಹಕ್ಕು ಕಾಯ್ದೆಯಡಿಯ ದ್ವಿತೀಯ ಮೇಲ್ಮನವಿ ಅರ್ಜಿಗಳನ್ನು ತ್ವರಿತವಾಗಿ ವಿಲೆವಾರಿ ಮಾಡಿ ಮಾಹಿತಿ ಹಕ್ಕು ಅರ್ಜಿಗಳನ್ನು ಶೂನ್ಯಕ್ಕಿಳಿಸಲು ಜಿಲ್ಲಾ ಮಟ್ಟದಲ್ಲಿಯೇ ಅದಾಲತ್ ನಡೆಸುವ ಚಿಂತನೆಯನ್ನು ಆಯೋಗ ಹೊಂದಿದೆ ಎಂದು ಕರ್ನಾಟಕ ರಾಜ್ಯ ಮಾಹಿತಿ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ ಅವರು ತಿಳಿಸಿದರು.

ಶನಿವಾರದಂದು ಚಿಕ್ಕಬಳ್ಳಾಪುರದ ಜಿಲ್ಲಾಡಳಿತ ಭವನದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ  ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿ, ಕಳೆದ 7 ತಿಂಗಳ ಹಿಂದೆ ರಾಜ್ಯ ಮಾಹಿತಿ ಆಯೋಗದಲ್ಲಿ ಸುಮಾರು 54 ಸಾವಿರಕ್ಕೂ ಹೆಚ್ಚು ಅರ್ಜಿಗಳು ವಿಲೆವಾರಿಗೆ ಬಾಕಿ ಇದ್ದವು. ಈ ಅರ್ಜಿಗಳನ್ನು ತ್ವರಿತವಾಗಿ ಇತ್ಯರ್ಥ ಮಾಡಿ ಅರ್ಜಿದಾರರಿಗೆ ಮಾಹಿತಿ ತಲುಪಿಸುವ ಉದ್ದೇಶದಿಂದ ಹಲವು ಯುಕ್ತ ಕ್ರಮಗಳನ್ನು ಆಯೋಗ ತೆಗೆದುಕೊಂಡು 12,896 ಅರ್ಜಿಗಳನ್ನು ಇತ್ಯರ್ಥ ಪಡಿಸಲಾಗಿದೆ. ಪ್ರಸ್ತುತ 41,104ಕ್ಕೆ ಮಾಹಿತಿ ಹಕ್ಕು ಅರ್ಜಿಗಳನ್ನು ಇಳಿಸಲಾಗಿದೆ. ಈ 41,104 ಅರ್ಜಿಗಳನ್ನು ತ್ವರಿತವಾಗಿ ಇತ್ಯರ್ಥ ಪಡಿಸುವ ಉದ್ದೇಶದಿಂದ ಮಾಹಿತಿ ಆಯುಕ್ತರೇ ಜಿಲ್ಲಾ ಮಟ್ಟಕ್ಕೆ ಆಗಮಿಸಿ ಅದಾಲತ್ ತೆಗೆದುಕೊಂಡು ಸ್ಥಳದಲ್ಲೆ ಅರ್ಜಿದಾರರಿಗೆ ಮಾಹಿತಿ ತಲುಪಿಸುವ ಕಾರ್ಯ ಮುಂದಿನ ಕನ್ನಡ ರಾಜ್ಯೋತ್ಸವದ ವೇಳೆಗೆ ಆರಂಭವಾಗಬಹುದು ಎಂದು ಭರವಸೆ ನೀಡಿದರು.

ಪ್ರಸ್ತುತ ರಾಜ್ಯದಲ್ಲಿ ಪ್ರತಿ ತಿಂಗಳು ಸರಾಸರಿ 1500 ಮಾಹಿತಿ ಹಕ್ಕು ಅರ್ಜಿಗಳು ಆಯೋಗಕ್ಕೆ ಸ್ವೀಕಾರವಾಗುತ್ತಿವೆ. ಈ ಅರ್ಜಿಗಳನ್ನು ಸಹ ಕಾಲೋಚಿತವಾಗಿ ಇತ್ಯರ್ಥ ಪಡಿಸುವ ಜೊತೆ ಜೊತೆಗೆ ಪ್ರಸ್ತುತ ಬಾಕಿ ಇರುವ 41,104 ಅರ್ಜಿಗಳನ್ನು ವಿಲೇವಾರಿ ಮಾಡಿ ಶೂನ್ಯಕ್ಕಿಳಿಸುವ ಮೂಲಕ ಆಡಳಿತದಲ್ಲಿ ಹೆಚ್ಚು ಪಾರದರ್ಶಕತೆ ತರಲು ಆಯೋಗ ಉದ್ದೇಶಿಸಿದೆ. ಈ ನಿಟ್ಟಿನಲ್ಲಿ 2005ರಲ್ಲಿ ಮಾಹಿತಿ ಹಕ್ಕು ಕಾಯ್ದೆಯು ಜಾರಿಗೆ ಬಂದಿರುವುದು ಭ್ರಷ್ಟಾಚಾರ ನಿವಾರಣೆಗೆ ಹೆಚ್ಚು ಸಹಕಾರಿಯಾಗಿದೆ ಎಂದರು.

10 ಕೋಟಿಗೂ ಹೆಚ್ಚು ದಂಡ

ರಾಜ್ಯದಲ್ಲಿ ಸರಿಯಾಗಿ ಮಾಹಿತಿ ನೀಡದ 10,699 ಸಾರ್ವಜನಿಕ ಮಾಹಿತಿಹಕ್ಕು ಅಧಿಕಾರಿಗಳಿಗೆ ಈವರೆಗೆ 10,08,46,450 ರೂ ರಷ್ಟು ದಂಡವನ್ನು ಆಯೋಗ ವಿಧಿಸಿದೆ. ಈ ಪೈಕಿ 2119 ಅಧಿಕಾರಿಗಳು 2.45 ಕೋಟಿ ದಂಡ ಪಾವತಿಸಿದ್ದು, ಉಳಿದ ಅಧಿಕಾರಿಗಳು ದಂಡ ಪಾವತಿ ಮಾಡುವಂತೆ ಸೂಚಿಸಿ ಸಂಬಂಧಪಟ್ಟ ಇಲಾಖೆಗಳಿಗೆ ಪತ್ರ ಬರೆಯಲಾಗಿದೆ ಎಂದು ರುದ್ರಣ್ಣ ಹರ್ತಿಕೋಟೆ ಅವರು ಮಾಹಿತಿ ನೀಡಿದರು.

ಮಾಹಿತಿ ಆಯುಕ್ತ ರಾಜಶೇಖರ .ಎಸ್. ರವರು ಮಾತನಾಡಿ, ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಮಾಹಿತಿ ಹಕ್ಕು ಅರ್ಜಿಗಳ ವಿಲೆವಾರಿ ಉತ್ತಮವಾಗಿದೆ. ಕಳೆದ ಏಪ್ರಿಲ್ ನಿಂದ ಈ ವರೆಗೆ 10,777 ಮಾಹಿತಿ ಹಕ್ಕು ಅರ್ಜಿಗಳು ಸಲ್ಲಿಕೆಯಾಗಿದ್ದು, ಈ ಪೈಕಿ 9,837 ರಷ್ಟು ಅರ್ಜಿಗಳು ವಿಲೆವಾರಿಯಾಗಿ 772 ಅರ್ಜಿಗಳು ಮಾತ್ರ ಬಾಕಿ ಇವೆ. ಜಿಲ್ಲೆಯಲ್ಲಿ ಸ್ವೀಕಾರಗೊಂಡಿರುವ ಮಾಹಿತಿ ಅರ್ಜಿಗಳ ಪೈಕಿ ಪಂಚಾಯತ್ ರಾಜ್ ಇಲಾಖೆಯಡಿ 368, ಕಂದಾಯ ಇಲಾಖೆಯಡಿ 212, ಸಮಾಜ ಕಲ್ಯಾಣ ಇಲಾಖೆಯಡಿ 33, ನಾಗರಾಭಿವೃದ್ಧಿ ಇಲಾಖೆಯಡಿ 31, ಜಲ ಸಂಪನ್ಮೂಲ ಇಲಾಖೆಯಡಿ 21, ಕೃಷಿ ಇಲಾಖೆಯ 19, ಅರಣ್ಯ ಇಲಾಖೆಯಡಿ 18, ಲೋಕೋಪಯೋಗಿ ಇಲಾಖೆಯಡಿ 17 ಅರ್ಜಿಗಳಿವೆ ಹಾಗೂ ಇತರ ಇಲಾಖೆಗಳಲ್ಲಿ ಪ್ರಕರಣಗಳು ಬಾಕಿ ಇವೆ. ಈ ಎಲ್ಲಾ ಅರ್ಜಿಗಳನ್ನು ಕಾಲಮಿತಿಯಲ್ಲಿ ಇತ್ಯರ್ಥ ಪಡಿಸಲು ಸೂಚಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿಯೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿ ಹಾಗೂ ಕಂದಾಯ ಇಲಾಖೆಯಡಿ ಮಾಹಿತಿ ಹಕ್ಕು ಅರ್ಜಿಗಳು ಅತಿ ಹೆಚ್ಚಾಗಿ ಸ್ವೀಕಾರವಾಗಿವೆ. ವಿವಿಧ ಇಲಾಖೆಗಳಲ್ಲಿ ಸಾರ್ವಜನಿಕರಿಗೆ ಬೇಕಾದ ಮಾಹಿತಿಗಳನ್ನು ಆರ್‌ಟಿಐ ಮೂಲಕ ಅರ್ಜಿ ಸಲ್ಲಿಸಿ ಪಡೆಯಬಹುದಾಗಿದದ್ದು.ಸಾರ್ವಜನಿಕರು ಕೇಳಿದ ಸಾರ್ವಜನಿಕ ಹಿತಾಸಕ್ತಿಯುಳ್ಳ ಮಾಹಿತಿಯನ್ನು ನೀಡಲು ಅಧಿಕಾರಿಗಳು ನಿರಾಕರಿಸಿದರೆ ಅಥವಾ ಅಲಕ್ಷ್ಯ ವಹಿಸಿದರೆ ಆಯೋಗ ದಂಡ ವಿಧಿಸಲಿದೆ.ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸರಿಯಾಗಿ ಮಾಹಿತಿ ನೀಡದ 287 ಅಧಿಕಾರಿಗಳಿಗೆ 28,70,000 ರೂ ದಂಡ ವಿಧಿಸಲಾಗಿದ್ದು ಈ ಪೈಕಿ 69 ಅಧಿಕಾರಿಗಳು 6,90,000 ರೂ. ದಂಡ ಪಾವತಿಸಿದ್ದಾರೆ ಎಂದು ಮಾಹಿತಿ ಆಯುಕ್ತರಾದ ರಾಜಶೇಖರ .ಎಸ್. ರವರು ತಿಳಿಸಿದರು.

ಪತ್ರಿಕಾಗೋಷ್ಠಿಗೂ ಮುನ್ನ ಜಿಲ್ಲಾ ಮಟ್ಟದ ಅಧಿಕಾರಿಗಳು, ಜಿಲ್ಲೆಯ ಪ್ರಥಮ ಮಾಹಿತಿ ಹಕ್ಕು ಅಧಿಕಾರಿ ಮತ್ತು ಮೇಲ್ಮನವಿ ಮಾಹಿತಿ ಹಕ್ಕು ಅಧಿಕಾರಿಗಳು ಹಾಗೂ ಸಿಬ್ಬಂದಿಗೆ ಮಾಹಿತಿ ಹಕ್ಕು ಕಾಯ್ದೆಯಡಿ ಸ್ವಿಕಾರವಾಗುವ ಅರ್ಜಿಗಳ ವಿಲೆವಾರಿ ಮಾಡುವ ಪ್ರಕ್ರಿಯೆಯನ್ನು ನಿದರ್ಶನಗಳ ಸಹಿತವಾಗಿ ವಿವರಿಸಲಾಯಿತು. ಮಾಹಿತಿ ಹಕ್ಕು ಅರ್ಜಿಗಳನ್ನು ಯಾವ ರೀತಿ ವಿಲೆವಾರಿ ಮಾಡಬೇಕು. ಮಾಡದೆ ಇದ್ದರೆ ಸೇವಾ ಅವಧಿಯಲ್ಲಿ ಆಗುವ ತೊಂದರೆಗಳೇನು, ಪಿಂಚಣಿಯ ಮೇಲೆ ಆಗುವ ಪರಿಣಾಮಗಳೇನು, ದಂಡ ಹೇಗೆ ಬೀಳುತ್ತದೆ ಎಂದು ತಿಳಿಸಿಕೊಟ್ಟು ಆಯೋಗದ ವೆಬ್ ಸೈಟ್ ನಲ್ಲಿರುವ ಮಾಹಿತಿ ಹಕ್ಕು ಕಾಯ್ದೆಯ ಕುರಿತ ಮಾಹಿತಿಯನ್ನು ಡೌನ್ ಲೋಡ್ ಮಾಡಿಕೊಂಡು ಅಧ್ಯಯನ ಮಾಡುವಂತೆ ಹಾಗೂ ಅರ್ಜಿದಾರರಿಗೆ ಮಾಹಿತಿಯನ್ನು ಸಕಾಲಕ್ಕೆ ನಿಯಮಾವಳಿ ರೀತ್ಯ ನೀಡುವ ಮೂಲಕ ಜನಪರ ಆಡಳಿತ ನೀಡಲು ಆಡಳಿತ ವರ್ಗ ಮುಂದಾಗುವಂತೆ ಮಾಹಿತಿ ಆಯುಕ್ತರು ಸಲಹೆ ನೀಡಿದರು.

ಕಾರ್ಯಾಗಾರದಲ್ಲಿ ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಡಾ.ವೈ.ನವೀನ್ ಭಟ್, ಅಪರ ಜಿಲ್ಲಾಧಿಕಾರಿ ಡಾ.ಎನ್. ಭಾಸ್ಕರ್, ಉಪ ವಿಭಾಗಾಧಿಕಾರಿ ಡಿ.ಹೆಚ್ ಅಶ್ವಿನ್, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಅತಿಕ್ ಪಾಷಾ ಹಾಗೂ ವಿವಿಧ ಇಲಾಖೆಯ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ರೈಲು ಪ್ರಯಾಣಿಕರಿಗೆ ಗುಡ್ ನ್ಯೂಸ್: ನೀರಿನ ಬಾಟಲಿ ದರ ರೂ.1 ಇಳಿಕೆ | Railway Water Bottle Price Cut

19 ವರ್ಷದ ಯುವಕನನ್ನು ಮದುವೆಯಾದ 19 ವರ್ಷದ ಯುವತಿ ವಿರುದ್ಧ ಕೇಸ್ ದಾಖಲು

ನಿಮ್ಮ ಫೋನ್ ಸೈಲೆಂಟ್ ಆಗಿದ್ರೂ ಅಥ್ವಾ ಕಳೆದು ಹೋದ್ರೂ ನಿಮಿಷದಲ್ಲೇ ಪತ್ತೆ ಮಾಡ್ಬೋದು ; ಹೇಗೆ ಗೊತ್ತಾ?

Share. Facebook Twitter LinkedIn WhatsApp Email

Related Posts

ಏನಿದು ‘ಡಿಜಿಟಲ್ ಅರೆಸ್ಟ್’? ನಿಮ್ಮ ಹಣವನ್ನು ‘ಸೈಬರ್ ವಂಚಕರ ಜಾಲ’ದಿಂದ ರಕ್ಷಿಸಿಕೊಳ್ಳಲು ಇಲ್ಲಿದೆ ಟಿಪ್ಸ್

21/03/2026 2:10 PM2 Mins Read

ನಿಮ್ಮನ್ನು ‘ಪೊಲೀಸರು ಅರೆಸ್ಟ್’ ಮಾಡಿದಾಗ ಏನು ಮಾಡಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ

21/03/2026 1:56 PM2 Mins Read

BREAKING : ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್ : ಯಾವುದೇ ಕಾರಣಕ್ಕೂ ಬಸ್ ಟಿಕೆಟ್ ದರ ಏರಿಕೆ ಮಾಡಲ್ಲ : ಸಚಿವ ರಾಮಲಿಂಗಾರೆಡ್ಡಿ

21/03/2026 1:47 PM1 Min Read
Recent News

ಏನಿದು ‘ಡಿಜಿಟಲ್ ಅರೆಸ್ಟ್’? ನಿಮ್ಮ ಹಣವನ್ನು ‘ಸೈಬರ್ ವಂಚಕರ ಜಾಲ’ದಿಂದ ರಕ್ಷಿಸಿಕೊಳ್ಳಲು ಇಲ್ಲಿದೆ ಟಿಪ್ಸ್

21/03/2026 2:10 PM

ನಿಮ್ಮನ್ನು ‘ಪೊಲೀಸರು ಅರೆಸ್ಟ್’ ಮಾಡಿದಾಗ ಏನು ಮಾಡಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ

21/03/2026 1:56 PM

BREAKING : ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್ : ಯಾವುದೇ ಕಾರಣಕ್ಕೂ ಬಸ್ ಟಿಕೆಟ್ ದರ ಏರಿಕೆ ಮಾಡಲ್ಲ : ಸಚಿವ ರಾಮಲಿಂಗಾರೆಡ್ಡಿ

21/03/2026 1:47 PM

BREAKING : ಬೆಳಗಾವಿಯಲ್ಲಿ ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ವೃದ್ಧ ಉದ್ಯಮಿಗೆ 15 ಕೋಟಿ ವಂಚನೆ : ಪ್ರಕರಣ ದಾಖಲು!

21/03/2026 1:44 PM
State News
KARNATAKA

ಏನಿದು ‘ಡಿಜಿಟಲ್ ಅರೆಸ್ಟ್’? ನಿಮ್ಮ ಹಣವನ್ನು ‘ಸೈಬರ್ ವಂಚಕರ ಜಾಲ’ದಿಂದ ರಕ್ಷಿಸಿಕೊಳ್ಳಲು ಇಲ್ಲಿದೆ ಟಿಪ್ಸ್

By kannadanewsnow0921/03/2026 2:10 PM KARNATAKA 2 Mins Read

ಕೆಎನ್ಎನ್ ಡಿಜಿಟಲ್ ಡೆಸ್ಕ್: ಇತ್ತೀಚಿನ ದಿನಗಳಲ್ಲಿ ಸೈಬರ್ ಅಪರಾಧಿಗಳು ಜನರನ್ನು ಹೆದರಿಸಿ ಹಣ ದೋಚಲು ಬಳಸುತ್ತಿರುವ ಹೊಸ ತಂತ್ರವೇ ‘ಡಿಜಿಟಲ್…

ನಿಮ್ಮನ್ನು ‘ಪೊಲೀಸರು ಅರೆಸ್ಟ್’ ಮಾಡಿದಾಗ ಏನು ಮಾಡಬೇಕು? ಇಲ್ಲಿದೆ ಸಂಪೂರ್ಣ ಮಾಹಿತಿ

21/03/2026 1:56 PM

BREAKING : ಇರಾನ್-ಇಸ್ರೇಲ್ ಯುದ್ಧದ ಎಫೆಕ್ಟ್ : ಯಾವುದೇ ಕಾರಣಕ್ಕೂ ಬಸ್ ಟಿಕೆಟ್ ದರ ಏರಿಕೆ ಮಾಡಲ್ಲ : ಸಚಿವ ರಾಮಲಿಂಗಾರೆಡ್ಡಿ

21/03/2026 1:47 PM

BREAKING : ಬೆಳಗಾವಿಯಲ್ಲಿ ‘ಡಿಜಿಟಲ್ ಅರೆಸ್ಟ್’ ಹೆಸರಿನಲ್ಲಿ ವೃದ್ಧ ಉದ್ಯಮಿಗೆ 15 ಕೋಟಿ ವಂಚನೆ : ಪ್ರಕರಣ ದಾಖಲು!

21/03/2026 1:44 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.