ಬೆಂಗಳೂರು : ಬೆಂಗಳೂರಿನಲ್ಲಿ ಕಾರು ಹರಿದು ಬೀದಿ ನಾಯಿ ಸಾವನ್ನಪ್ಪಿರುವ ಘಟನೆ ನಡೆದಿದ್ದು, ನಾಯಿಯ ಮೇಲೆ ಕಾರು ಹರಿಸಿ ಕೊಂದ ಚಾಲಕನ ವಿರುದ್ಧ ಇದೀಗ ಎಫ್ಐಆರ್ ದಾಖಲಾಗಿದೆ.
ಸಂಜಯ ನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದೆ.ನಿನ್ನೆ ಮಧ್ಯಾಹ್ನ 1:00 ಸುಮಾರಿಗೆ ಈ ಒಂದು ಘಟನೆ ನಡೆದಿದೆ. ಜೀವಿಕ ಗೌಡ ಎಂಬವರು ಕಾರು ಚಾಲಕನ ವಿರುದ್ಧ ದೂರು ನೀಡಿದ್ದರು ಅವರ ದೂರಿನ ಆಧಾರದ ಮೇಲೆ ಚಾಲಕನ ವಿರುದ್ಧ FIR ದಾಖಲಾಗಿದೆ.








