ವಿಜಯಪುರ : ರಾಜ್ಯದಲ್ಲಿ ಒಂದು ಅಮಾನವೀಯ ಘಟನೆ ಒಂದು ನಡೆದಿದ್ದು ಯುವತಿ ಒಬ್ಬಳು ಮುಸ್ಲಿಂ ಯುವಕನೊಂದಿಗೆ ಪರಾರಿಯಾಗಿದ್ದಾಳೆ. ಈ ವೇಳೆ ತಂದೆ ತಾಯಿ ಆಕೆಯ ಕಾಲಿಗೆ ಬಿದ್ದು ಗೊಗರೆದರು ಕೂಡ ಅದನ್ನು ಲೆಕ್ಕಿಸಿದೆ ನನ್ನ ಗಂಡನ ಜೊತೆ ಹೋಗುತ್ತೇನೆ ಎಂದು ತಂದೆ ತಾಯಿಯನ್ನು ನಿರ್ಲಕ್ಷಿಸಿ ಯುವಕನೊಂದಿಗೆ ಪರಾರಿಯಾಗಿರುವ ಘಟನೆ ವಿಜಯಪುರದಲ್ಲಿ ನಡೆದಿದೆ.
ಹೌದು ಮೊಹಮದ್ ಸಲಿಂ ಸುತಾರ್ ಎಂಬ ಯುವಕನನ್ನು ಪ್ರೀತಿಸಿದ್ದ ಹುಡುಗಿ, ತಂದೆ ತಾಯಿಯನ್ನು ಎದುರುಹಾಕಿಕೊಂಡು ಆತನೊಂದಿಗೆ ಪರಾರಿಯಾಗಿದ್ದಳು. ಈ ಹಿನ್ನೆಲೆ ಮಗಳು ಕಾಣೆಯಾಗಿದ್ದಾಳೆಂದು ಫೆಬ್ರವರಿ 2ರಂದು ಯುವತಿಯ ಪೋಷಕರು ವಿಜಯನಗರ ಮಹಿಳಾ ಪೊಲೀಸ್ ಠಾಣೆಗೆ ದೂರು ಕೊಟ್ಟಿದ್ದರು. ಇದೀಗ ಅದೇ ಠಾಣೆಗೆ ಸ್ವಯಂಪ್ರೇರಿತವಾಗಿ ಪ್ರಿಯಕರನೊಂದಿಗೆ ಬಂದ ಯುವತಿ, ತಾನು ಮದುವೆಯಾಗಿರುವುದಾಗಿ ತಿಳಿಸಿದ್ದಾಳೆ.
ಈ ವೇಳೆ ಠಾಣೆಗೆ ಬಂದ ಪೋಷಕರು, ಎಷ್ಟೇ ಕರೆದರೂ ಒಪ್ಪದ ಮಗಳು ಗಂಡನೊಂದಿಗೇ ಹೋದಾಗ, ಆಕೆಯಿದ್ದ ಪೊಲೀಸ್ ವಾಹನಕ್ಕೂ ಅಡ್ಡಬಿದ್ದು ಮಗಳನ್ನು ಓಲೈಸಲು ಪೋಷಕರು ಪ್ರಯತ್ನಿಸಿದ್ದಾರೆ. ಮನೆಗೆ ವಾಪಸ್ ಬರುವಂತೆ ಮಗಳಲ್ಲಿ ಅಂಗಲಾಚಿದ್ದಾರೆ. ಆದರೆ ಯುವತಿ ಮಾತ್ರ ಹೆತ್ತವರ ಕಣ್ಣೀರಿಗೂ ಕರಗದೆ, ನಾನು ನನ್ನ ಗಂಡನ ಜೊತೆಗೆ ಹೋಗುತ್ತೇನೆ, ನಿಮ್ಮ ಜೊತೆ ಬರಲ್ಲ ಎಂದು ಸ್ಪಷ್ಟವಾಗಿ ಹೇಳಿದ್ದಾಳೆ.
ಆದರೂ ಹೆತ್ತ ಕರುಳಿಗೆ ಸಮಾಧಾನವಾಗದೇ ಪೊಲೀಸ್ ಠಾಣೆಯ ಮುಂದೇ ಕುಳಿತು ತಂದೆ ತಾಯಿಯಿಬ್ಬರೂ ಗೋಗರೆದಿದ್ದಾರೆ. ಮಗಳು ಮಾತ್ರ ತಂದೆ ತಾಯಿಯ ಮುಖವನ್ನೂ ನೋಡದೆ ಅನ್ಯಕೋಮಿನ ಪ್ರಿಯಕರನೊಂದಿಗೆ ಹೊರಟು ಹೋಗಿದ್ದಾಳೆ. ಯುವತಿಯೂ ಪ್ರಾಪ್ತ ವಯಸ್ಸಿನವಳಾದ್ದರಿಂದ ಪೊಲೀಸರು ಆಕೆಯನ್ನು ಪತಿಯ ಜೊತೆಗೇ ಕಳುಹಿಸಿಕೊಟ್ಟಿದ್ದಾರೆ.








