ಬಾಗಲಕೋಟೆ : ಬಾಗಲಕೋಟೆಯಲ್ಲಿ ಭೀಕರವಾದ ಅಪಘಾತ ಸಂಭವಿಸಿದ್ದು, ಓವರ್ ಟೆಕ್ ಮಾಡಲು ಹೋಗಿ KSRTC ಬಸ್ ಗೆ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಕಾರಿನ ಚಾಲಕ ಸಾವನ್ನಪ್ಪಿದ್ದಾನೆ.
ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಹೂಲಗೇರಿ ಬಳಿ ಈ ಒಂದು ಘಟನೆ ನಡೆದಿದೆ. ಘಟನೆಯಲ್ಲಿ ಇನ್ನೋವಾ ಕಾರು ಚಾಲಕ ಸ್ಥಳದಲ್ಲೇ ಸಾವನ್ನಪ್ಪಿದ್ದು, KSRTC ಬಸ್ ಚಾಲಕನಿಗೆ ಗಂಭೀರವಾದ ಗಾಯಗಳಾಗಿವೆ. ಘಟನಾ ಸ್ಥಳಕ್ಕೆ ಕೆರೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. ಸದ್ಯ ಮೃತ ಕಾರು ಚಾಲಕನ ಬಗ್ಗೆ ಪೊಲೀಸರು ಮಾಹಿತಿ ಕಲೇ ಹಾಕುತ್ತಿದ್ದಾರೆ.