ಬೆಂಗಳೂರು : ಮಾತಿನ ಭರದಲ್ಲಿ ಸಂಸದ ಅನಂತ್ ಕುಮಾರ್ ಹೆಗಡೆಯವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ವಾಗ್ದಾಳಿ ನಡೆಸಿದ ವಿಷಯಕ್ಕೆ ಸಂಬಂಧಿಸಿದಂತೆ ಇದೀಗ ಸ್ವೀಟ್ ನಲ್ಲಿ ಅನಂತಕುಮಾರ್ ಹೆಗಡೆ ವಿರುದ್ಧ ಕಾಂಗ್ರೆಸ್ ವಾಗ್ದಾಳಿ ನಡೆಸಿದೆ.
ಟ್ವೀಟ್ ನಲ್ಲಿ ಕಾಂಗ್ರೆಸ್ ಸಂಸದ ಅನಂತಕುಮಾರ್ ಕುಂಭಕರ್ಣನಿದ್ದಂಗೆ,ನಾಲ್ಕುವರೆ ವರ್ಷ ಮಲಗುವುದು, ಚುನಾವಣೆ ಬಂದಾಗ ಏಳುವುದುದಲಿತ, ಹಿಂದುಳಿದ ಸಮುದಾಯಗಳ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಏಳಿಗೆಯನ್ನು ಸಹಿಸದ ವಿಕೃತ ಮನಸ್ಥಿತಿಯ ಪರಂಪರೆಯನ್ನು ಮುಂದುವರಿಸುವ ಅನಂತ್ ಕುಮಾರ್ ಹೆಗಡೆಯಂತಹ ಕ್ರಿಮಿ ಕೀಟಗಳು ಈ ದೇಶಕ್ಕೆ ಕ್ಯಾನ್ಸರ್ ನಂತೆ ಕಾಡುತ್ತವೆ, ಈ ಕ್ಯಾನ್ಸರ್ ಗೆ ಸಂವಿಧಾನದಲ್ಲಿ ಔಷಧವಿದೆ.
ಕಾಂಗ್ರೆಸ್ ಪಕ್ಷದ ಬಗ್ಗೆ, ಸಿದ್ದರಾಮಯ್ಯ ಅವರ ಬಗ್ಗೆ ತನ್ನ ಕೊಳಕು ನಾಲಿಗೆ ಹರಿಬಿಡುವ ಮೊದಲು ಸಂಸದನಾಗಿ ತನ್ನ ಸಾಧನೆ ಏನು ಎಂಬುದನ್ನು ಜನತೆಗೆ ತಿಳಿಸಲಿ.ಈ ಅಸಹ್ಯದ ವ್ಯಕ್ತಿಯಲ್ಲಿ ಪುರೋಹಿತಶಾಹಿಯ ಅಹಂಕಾರ ಮಿತಿ ಮೀರಿ ನರ್ತಿಸುತ್ತಿದೆ, ಈ ಅಹಂಕಾರದ ಮದ ಇಳಿಸುವ ತಾಕತ್ತು ಕನ್ನಡಿಗರಿಗೆ ಇದೆ ಎಂದು ವಾಗ್ದಾಳಿ ನಡೆಸಿದೆ.
ಸಂಸದರು ಹೇಳಿದ್ದೇನು?
ಅಯೋಧ್ಯೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ವಿರುದ್ಧ ಏಕವಚನದಲ್ಲೇ ವಾಗ್ದಾಳಿ ನಡೆಸಿದ ಅನಂತಕುಮಾರ್ ಹೆಗಡೆ, ‘ನೀನು ಬರ್ಲಿ, ಇಲ್ಲ ಬಿಡಲಿ, ರಾಮ ಜನ್ಮಭೂಮಿ ಏನೂ ನಿಲ್ಲೋದಿಲ್ಲ ಮಗನೇ’ ಎಂದು ನಿಂದಿಸಿದರು. ನಾನು ಅಯೋಧ್ಯೆಗೆ ಹೋಗುತ್ತೇನೆ, ಆದರೆ 22 ಕ್ಕೆ ಹೋಗಲ್ಲ ಆಮೇಲೆ ಹೊಗುತ್ತೇನೆ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ಮೊದಲು ಹೋಗಲ್ಲ ಅಂದಿದ್ದವರು ಈಗ ಹೋಗುತ್ತೇನೆ ಎನ್ನುತ್ತಿದ್ದಾರೆ. ಇದು ಹಿಂದೂ ಸಮಾಜದ ತಾಕತ್ತು, ದಮ್ ಎಂದು ಹೆಗಡೆ ಹೇಳಿದರು.
ಸಂಸದ @AnantkumarH ಕುಂಭಕರ್ಣನಿದ್ದಂಗೆ,
ನಾಲ್ಕುವರೆ ವರ್ಷ ಮಲಗುವುದು, ಚುನಾವಣೆ ಬಂದಾಗ ಏಳುವುದು!ದಲಿತ, ಹಿಂದುಳಿದ ಸಮುದಾಯಗಳ ಸಾಮಾಜಿಕ, ಆರ್ಥಿಕ ಹಾಗೂ ರಾಜಕೀಯ ಏಳಿಗೆಯನ್ನು ಸಹಿಸದ ವಿಕೃತ ಮನಸ್ಥಿತಿಯ ಪರಂಪರೆಯನ್ನು ಮುಂದುವರಿಸುವ ಅನಂತ್ ಕುಮಾರ್ ಹೆಗಡೆಯಂತಹ ಕ್ರಿಮಿ ಕೀಟಗಳು ಈ ದೇಶಕ್ಕೆ ಕ್ಯಾನ್ಸರ್ ನಂತೆ ಕಾಡುತ್ತವೆ, ಈ ಕ್ಯಾನ್ಸರ್…
— Karnataka Congress (@INCKarnataka) January 15, 2024