ಬೆಂಗಳೂರು: ನಗರದಲ್ಲಿ 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಪೊಲೀಸ್ ಇನ್ಸ್ ಪೆಕ್ಟರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಅವರನ್ನು ವಶಕ್ಕೆ ಪಡೆದಿರುವಂತ ಲೋಕಾಯುಕ್ತ ಪೊಲೀಸರು, ವಿಚಾರಣೆ ನಡೆಸುತ್ತಿದ್ದಾರೆ.
ಬೆಂಗಳೂರಿನ ಕೆ.ಪಿ ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಗೋವಿಂದರಾಜು 4 ಲಕ್ಷ ಲಂಚ ಸ್ವೀಕರಿಸುತ್ತಿದ್ದಾಗಲೇ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಚೀಟಿ ವ್ಯವಹಾರ ಕೇಸ್ ಸಂಬಂಧ ಲಂಚ ಪಡೆಯುವಾಗ ಅವರನ್ನು ಲೋಕಾಯುಕ್ತ ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಬೆಂಗಳೂರಿನ ಕೆ.ಪಿ ಅಗ್ರಹಾರ ಪೊಲೀಸ್ ಠಾಣೆಯ ಇನ್ಸ್ ಪೆಕ್ಟರ್ ಗೋವಿಂದರಾಜು ವ್ಯಕ್ತಿಯೊಬ್ಬರನ್ನು ಚೀಟಿ ವ್ಯವಹಾರದ ಪ್ರಕರಣದಲ್ಲಿ ಸೇರಿಸುವುದಾಗಿ ಬೆದರಿಸಿ 4 ಲಕ್ಷಕ್ಕೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಇಂದು ಹಣ ಪಡೆಯುತ್ತಿದ್ದಂತ ಸಂದರ್ಭದಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಅವರನ್ನು ಬಂಧಿಸಿದ್ದಾರೆ.
ಕಲಬುರಗಿ ಕೀಟನಾಶಕ ಪರೀಕ್ಷಾ ಪ್ರಯೋಗಾಲಯಕ್ಕೆ ರಾಷ್ಟ್ರೀಯ ಮಾನ್ಯತೆ ಮಂಡಳಿಯಿಂದ ಮನ್ನಣೆ: ಸಚಿವ ಪ್ರಿಯಾಂಕ್ ಖರ್ಗೆ








