ಬೆಂಗಳೂರು: ನಗರದಲ್ಲಿರುವಂತ ಅನೇಕ ಪೇಯಿಂಗ್ ಗೆಸ್ಟ್ ಗಳಿಗೆ ಸಿಸಿಟಿವಿಯನ್ನು ಅಳವಡಿಕೆ ಮಾಡಿಲ್ಲ. ಕೆಲ ದಿನಗಳ ಹಿಂದಷ್ಟೇ ಯುವತಿಯನ್ನು ಪಿಜಿಗೆ ನುಗ್ಗಿ ಚಾಕುವಿನಿಂದ ಪ್ರಿಯಕರ ಇರಿದ ಘಟನೆ ವರದಿಯಾದ ನಂತ್ರ, ಇನ್ಮುಂದೆ ಬೆಂಗಳೂರಲ್ಲಿ ಸಿಸಿಟಿವಿ ಕ್ಯಾಮೆರಾ ಅಳವಡಿಕೆ ಕಡ್ಡಾಯಗೊಳಿಸಿ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಆದೇಶಿಸಿದ್ದಾರೆ.
ಈ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಬೆಂಗಳೂರು ನಗರದಲ್ಲಿರುವ ಪೇಯಿಂಗ್ ಗೆಸ್ಟ್‌ಗಳಲ್ಲಿ (ಪಿ.ಜಿ) ಸಿಸಿಟಿವಿ ಕ್ಯಾಮೆರಾ ಕಡ್ಡಾಯವಾಗಿ ಅಳವಡಿಸಬೇಕು. ಪಿ.ಜಿಗಳಲ್ಲಿ ಭದ್ರತಾ ಸಿಬ್ಬಂದಿ ನೇಮಿಸಿಕೊಳ್ಳಬೇಕು. ಅಪರಿಚಿತರಿಗೆ ಪ್ರವೇಶ ನೀಡಬಾರದು. ಪೊಲೀಸರು ತಮ್ಮ ವ್ಯಾಪ್ತಿಯಲ್ಲಿರುವ ಪಿ.ಜಿಗಳಿಗೆ ಕಡ್ಡಾಯವಾಗಿ ಭೇಟಿ ನೀಡಿ ಪರಿಶೀಲಿಸಬೇಕು ಎಂದಿದ್ದಾರೆ.
ಅನಧಿಕೃತವೆಂದು ಕಂಡುಬಂದರೆ ಬಿಬಿಎಂಪಿ ಅಧಿಕಾರಿಗಳಿಗೆ ಮಾಹಿತಿ ನೀಡಬೇಕು. ಅಕ್ರಮ, ಅನೈತಿಕ ಚಟುವಟಿಕೆ ನಡೆಯುತ್ತಿದ್ದರೆ ಮಾಹಿತಿ ಕಲೆ ಹಾಕಬೇಕು. ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಬೇಕು ಎಂದು ಬೆಂಗಳೂರು ನಗರ ಪೊಲೀಸ್ ಕಮಿಷನರ್ ಬಿ. ದಯಾನಂದ ತಿಳಿಸಿದ್ದಾರೆ.
BREAKING: ಮಂಗಳೂರಲ್ಲಿ ನಡು ರಸ್ತೆಯಲ್ಲೇ ‘ಕಾಲೇಜು ವಿದ್ಯಾರ್ಥಿ’ಗಳ ನಡುವೆ ಹೊಡೆದಾಟ