ದೊಡ್ಡಬಳ್ಳಾಪುರ: ಘಾಟಿ ಸುಬ್ರಹ್ಮಣ್ಯ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ವತಿಯಿಂದ ಇಂದು ಮಾಂಗಲ್ಯ ಭಾಗ್ಯ ಸರಳ ಸಾಮೂಹಿಕ ವಿವಾಹ ಕಾರ್ಯಕ್ರಮ ಆಯೋಜಿಸಿದ್ದು ಪೂಜ್ಯ ಶ್ರೀ ಶ್ರೀ ಶ್ರೀ ನಿರ್ಮಾಲಾನಂದನಾಥ ಸ್ವಾಮೀಜಿಗಳ ದಿವ್ಯ ಸಾನಿದ್ಯದಲ್ಲಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಕೆಹೆಚ್. ಮುನಿಯಪ್ಪ ರವರ ಅಧ್ಯಕ್ಷತೆಯಲ್ಲಿ 66 ಜೋಡಿಗಳ ವಿವಾಹ ಮಹೋತ್ಸವ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದ ಸಚಿವರು ಈ ಕಾರ್ಯಕ್ರಮದಲ್ಲಿ ಆಶೀರ್ವಾದ ಮಾಡಲು ಬಂದಿರುವ ಶ್ರೀ ಶ್ರೀ ಶ್ರೀ ನಿರ್ಮಾಲಾನಂದನಾಥ ಸ್ವಾಮೀಜಿಗಳಿಗೆ ಧನ್ಯವಾದಗಳನ್ನು ತಿಳಿಸುತ್ತಾ ಈ ಕಾರ್ಯಕ್ರಮ ಅಚ್ಚುಕಟ್ಟಾಗಿ ಈ ಶುಭ ಲಗ್ನ ದಲ್ಲಿ ಸುಬ್ರಹ್ಮಣ್ಯ ಸ್ವಾಮಿಯ ಕ್ಷೇತ್ರದಲ್ಲಿ ಮದುವೆ ಕಾರ್ಯಕ್ರಮ ನಡೆದಿರುವುದು ವಿಶೇಷವಾಗಿದೆ.
ಅಧಿಕಾರಿಗಳು ಮತ್ತು ಪ್ರಾಧಿಕಾರದ ಸದಸ್ಯರು ಉತ್ತಮ ವಾಗಿ ಕಾರ್ಯಕ್ರಮ ಆಯೋಜಿಸಿದ್ದು ನಿಮಗೆ ವಿಷೇಶವಾದ ಧನ್ಯವಾದಗಳನ್ನು ತಿಳಿಸಬೇಕು.
ಮದುವೆಗೆ ಲಕ್ಷಾಂತರ ರೂಗಳನ್ನು ಖರ್ಚು ಮಾಡಿ ಮಾಡುವ ಮದುವೆಗಳಿಗಿಂದ ದೇವರ ಸನ್ನಿದಾನದಲ್ಲಿ ಮಾಡಿರುವ ಈ ಮದುವೆ ಶ್ರೇಷ್ಠವಾಗಿದೆ ತಮಗೆ ಉತ್ತಮ ಆರೋಗ್ಯ ಭಾಗ್ಯವನ್ನು ದೇವರು ಕರುಣಿಸಲಿ ಎಂದರು.
ನವ ದಂಪತಿಗಳಾದ ತಾವು ಪ್ರೀತಿ ವಾತ್ತಲ್ಯ ದಿಂದ ಜೀವನ ಮಾಡಬೇಕು ಮತ್ತು ತಮ್ಮ ತಂದೆ ತಾಯಿಯನ್ನು ಚೆನ್ನಾಗಿ ನೋಡಿಕೊಂಡು ಉತ್ತಮ ಜೀವನಸಾಗಿಸಲು ಸಲಹೆ ನೀಡಿದರು.
ಈ ಸಂದರ್ಭದಲ್ಲಿ ಶ್ರೀ ಶ್ರೀ ಶ್ರೀ ನಿರ್ಮಾಲಾನಂದನಾಥ ಸ್ವಾಮೀಜಿ, ಜಿಲ್ಲಾಧಿಕಾರಿ ಬಸವರಾಜು,ಸಿಇಒ ಡಾ.ಅನುರಾಧ,ಮಾಜಿ ಶಾಸಕ ವೆಂಕಟರಮಣಯ್ಯ, ಉಪವಿಭಾಗಾಧಿಕಾರಿ ದುರ್ಗಶ್ರೀ,ತಹಶಿಲ್ದಾರ್ ವಿಭಾ ರಥೊಡ್, ಪ್ರಾಧಿಕಾರದ ಸದಸ್ಯರಾದ ರಂಗಪ್ಪ,ಮಹೇಶ್, ರವಿ,ಹಾಗೂ ಹೇಮಲತಾ ,ಲಕ್ಷ್ಮಾನಾಯಕ್ , ಬಯ್ಯಪ್ಪಾ ಸದಸ್ಯರಾದ ಮಂಜುನಾಥ್, ರವಿಸಿದ್ದಪ್ಪ, ಹಾಗೂ ತಾಲ್ಲೂಕು ಕಾರ್ಯನಿರ್ವಹಣಾಧಿಕಾರಿ ಮುನಿರಾಜು,ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.